Migrant workers

ಗರ್ಭಿಣಿಯರು, ಅನಾರೋಗ್ಯ ಪೀಡಿತರು 65 ವರ್ಷ ಮೇಲ್ಪಟ್ಟವರು ಅಗತ್ಯವಿದ್ದರೆ ಮಾತ್ರ ಶ್ರಮಿಕ್ ರೈಲಿನಲ್ಲಿ ಪ್ರಯಾಣಿಸಿ: ಕೇಂದ್ರ ಮನವಿ
ಗರ್ಭಿಣಿಯರು, ಅನಾರೋಗ್ಯ ಪೀಡಿತರು ಹಾಗೂ 65 ವರ್ಷಕ್ಕಿಂತ ಮೇಲ್ಪಟ್ಟವರು ತೀರಾ ಅಗತ್ಯವಿದ್ದರೆ ಮಾತ್ರ ಶ್ರಮಿಕ್ ರೈಲಿನಲ್ಲಿ ಪ್ರಯಾಣಿಸಿ ಎಂದು ಕೇಂದ್ರ ಸರ್ಕಾರ ಮನವಿ ಮಾಡಿಕೊಂಡಿದೆ.

ಸಂಕಷ್ಟದಲ್ಲಿರುವ ವಲಸೆ ಕಾರ್ಮಿಕರಿಗಾಗಿ ಕಾಂಗ್ರೆಸ್ ನಿಂದ ಸ್ಪೀಕ್ ಅಪ್ ಇಂಡಿಯಾ ಅಭಿಯಾನ
ಲಾಕ್‍ಡೌನ್ ಸಂದರ್ಭದಲ್ಲಿ ಸಂಕಷ್ಟದಲ್ಲಿರುವ ಕಾರ್ಮಿಕರು, ರೈತರು ಮತ್ತು ಜನ ಸಾಮಾನ್ಯರ ಕಷ್ಟಗಳ ಬಗ್ಗೆ ಕಾಂಗ್ರೆಸ್ ಸಾಮಾಜಿಕ ಜಾಲತಾಣದಲ್ಲಿ ಸ್ಪೀಕ್ ಇಂಡಿಯಾ ಅಭಿಯಾನ ಆರಂಭಿಸಿದೆ.

ಮುಂದಿನ ಆರು ತಿಂಗಳು ವಲಸೆ ಕಾರ್ಮಿಕರ ಖಾತೆಗೆ 7,500 ರು ಹಣ ಹಾಕಿ: ಸೋನಿಯಾ ಗಾಂಧಿ
ವಲಸೆ ಕಾರ್ಮಿಕರ ಕಷ್ಚವನ್ನು ಪ್ರಧಾನಿ ನರೇಂದ್ರ ಮೋದಿ ಆಲಿಸುತ್ತಿಲ್ಲ, ಅವರ ಕಷ್ಟಗಳಿಗೆ ಸ್ಪಂದಿಸುತ್ತಿಲ್ಲ ಎಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆರೋಪಿಸಿದ್ದಾರೆ.

ಕೊನೆಗೂ ವಲಸೆ ಕಾರ್ಮಿಕರ ಪರ ನಿಂತ ಸುಪ್ರೀಂ ಕೋರ್ಟ್: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೊಟೀಸ್
ನೂರಾರು ಮೈಲಿ ಸೈಕಲ್ ನಲ್ಲಿ ಮತ್ತು ಕಾಲ್ನಡಿಗೆಯಲ್ಲಿ ಹೋಗುವ ವಲಸೆ ಕಾರ್ಮಿಕರ ಕಷ್ಟದ ಪರಿಸ್ಥಿತಿ ಬಗ್ಗೆ ಕೊನೆಗೂ ಸುಪ್ರೀಂ ಕೋರ್ಟ್ ಗಮನ ಹರಿಸಿದ್ದು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ನೊಟೀಸ್ ಕಳುಹಿಸಿದೆ.

ಸಿಎಂ ಯೋಗಿ ಆದಿತ್ಯನಾಥ ವಜಾಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಗ್ರಹ
ಉತ್ತರ ಪ್ರದೇಶ ಕಾರ್ಮಿಕರು ಅನ್ಯ ರಾಜ್ಯಗಳಿಗೆ ಹೋಗಿ ಕೆಲಸ ಮಾಡುವಂತಿಲ್ಲ ಎಂದು ನಿರ್ದೇಶಿಸುವ ಮೂಲಕ ಈ ದೇಶದ ಒಕ್ಕೂಟ ವ್ಯವಸ್ಥೆ ಹಾಗೂ ಸಂವಿಧಾನದ ಮೂಲ ಆಶಯಕ್ಕೆ ಧಕ್ಕೆ ತಂದಿರುವ ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರನ್ನು ವಜಾ ಮಾಡಬೇಕು.

ವಲಸೆ ಕಾರ್ಮಿಕರ ಬ್ಯಾಂಕ್ ಖಾತೆಗೆ ಪ್ರತಿ ತಿಂಗಳು 10 ಸಾವಿರ ಹಾಕಿ: ಕೇಂದ್ರಕ್ಕೆ ಖರ್ಗೆ ಆಗ್ರಹ
ಕೇಂದ್ರ ಸರ್ಕಾರ ಕೋವಿಡ್-19 ಸಂಕಷ್ಟದಿಂದ ಜನರನ್ನು ಪಾರು ಮಾಡಲು ಘೋಷಿಸಿರುವ 20 ಲಕ್ಷ ಕೋಟಿ ಪರಿಹಾರ ಯಾರಿಗೂ ಪ್ರಯೋಜನಕ್ಕೆ ಬರದಂತಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.

ಬೆಂಗಳೂರು: ಲಾಕ್ ಡೌನ್ ಮುಗಿಸಿ ವಾಪಸ್ಸಾದ 600 ವಲಸೆ ಕಾರ್ಮಿಕರಿಗೆ ದೊಡ್ಡ ಶಾಕ್, ಗುಡಿಸಲು ಸುಟ್ಟು ಭಸ್ಮ!
ಬೆಂಗಳೂರಿನ ಲಿಂಗರಾಜಪುರಂನ ಕಚಕರನಹಳ್ಳಿಯ ಸಂಡೆ ಬಜಾರ್ ಬಳಿ ಕಲಬುರಗಿಯ ಸುಮಾರು 600 ಹೆಚ್ಚು ವಲಸೆ ಕಾರ್ಮಿಕರು ಕಳೆದ 20 ವರ್ಷಗಳಿಂದ ಗುಡಿಸಲುಗಳಲ್ಲಿ ವಾಸವಾಗಿದ್ದರು. ಆದರೆ ಕೆಲಸ ದುಷ್ಕರ್ಮಿಗಳು ಅವರ ಗುಡಿಸಲುಗಳಿಗೆ ಬೆಂಕಿ ಹಚ್ಚಿ ಸುಟ್ಟುಹಾಕಿದ್ದಾರೆ.

100 ಕಿ.ಮೀ ಗೂ ಅಧಿಕ ನಡೆದು ಹರ್ಯಾಣದ ಅಂಬಾಲಾದಲ್ಲಿ ಮಗುವಿಗೆ ಜನ್ಮ ನೀಡಿದ ವಲಸೆ ಕಾರ್ಮಿಕನ ಪತ್ನಿ, ಮಗು ಸಾವು
ಪಂಜಾಬ್ ನ ಲುಧಿಯಾನಾದಿಂದ 100 ಕಿಲೋ ಮೀಟರ್ ಗೂ ಅಧಿಕ ದೂರ ನಡೆದುಕೊಂಡು ಹೋಗಿ ವಲಸೆ ಕಾರ್ಮಿಕರೊಬ್ಬರ ಪತ್ನಿ ಹರ್ಯಾಣದ ಅಂಬಾಲಾ ತಲುಪಿದಾಗ ಹೆರಿಗೆಯಾಗಿ ಮಗು ಮೃತಪಟ್ಟ ಘಟನೆ ನಡೆದಿದೆ.

ಬೆಂಗಳೂರು: ತಮ್ಮೂರಿಗೆ ತೆರಳಲು ಸಹಸ್ರಾರು ವಲಸಿಗ ಕಾರ್ಮಿಕರು ಸರದಿಯಲ್ಲಿ, ಅರಮನೆ ಮೈದಾನದಲ್ಲಿ ಅವ್ಯವಸ್ಥೆ
ತಮ್ಮ ತಮ್ಮ ರಾಜ್ಯಗಳಿಗೆ ತೆರಳಲು ಸೇವಾ ಸಿಂಧು ಆಪ್ ನಲ್ಲಿ ಹೆಸರನ್ನು ದಾಖಲಿಸಲು ಒಡಿಶಾ, ಮಣಿಪುರ, ಜಾರ್ಖಂಡ್, ಬಿಹಾರ ಮತ್ತು ಉತ್ತರ ಪ್ರದೇಶದ ಸಹಸ್ರಾರು ಸಂಖ್ಯೆಯ ವಲಸಿಗ ಕಾರ್ಮಿಕರು ಅರಮನೆ ಮೈದಾನಕ್ಕೆ ಲಗ್ಗೆ ಇಟ್ಟಿದ್ದರಿಂದ ಗೊಂದಲಕಾರಿ ವಾತವಾರಣ ನಿರ್ಮಾಣವಾಯಿತು.

