ಬಾಲಿವುಡ್350 ವಲಸೆ ಕಾರ್ಮಿಕರನ್ನು ಬಸ್ ಗಳಲ್ಲಿ ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಕಳುಹಿಸಿದ ಬಾಲಿವುಡ್ ನಟ ಸೋನು ಸೂದ್!
ಕುರುಕ್ಷೇತ್ರ, ವಿಷ್ಣುವರ್ಧನ ಸೇರಿದಂತೆ ಅನೇಕ ಚಿತ್ರಗಳಲ್ಲಿ ತಮ್ಮ ಮನೋಜ್ಞ ಅಭಿನಯದ ಮೂಲಕ ಕನ್ನಡಿಗರ ಮನಸ್ಸು ಕದ್ದಿರುವ ಬಾಲಿವುಡ್ ನಟ ಸೋನು ಸೂದ್ ಇದೀಗ ಲಾಕ್ ಡೌನ್ ಸಂದರ್ಭದಲ್ಲಿ ಮುಂಬೈನಲ್ಲಿ ಸಂಕಷ್ಟದ ಪರಿಸ್ಥಿತಿಯಲ್ಲಿದ್ದ ಕರುನಾಡಿನ ವಲಸೆ ಕಾರ್ಮಿಕರ ನೆರವಿಗೆ ಧಾವಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.