ರಾಜ್ಯಭತ್ತ, ತೊಗರಿಗೆ ಬೆಂಬಲ ಬೆಲೆ ಸಹಿತ ಪ್ರೋತ್ಸಾಹ ಧನ ಘೋಷಣೆ
ಭತ್ತ, ಶೇಂಗಾ, ತೊಗರಿ, ಬಿಳಿ ಜೋಳ, ರಾಗಿಗೆ ರಾಜ್ಯ ಸರ್ಕಾರ ಬೆಂಬಲ ಬೆಲೆ ಘೋಷಿಸಿದೆ. ಈ ಸಂಬಂಧ ಸಂಪುಟ ಉಪಸಮಿತಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದ್ದು, ಕೂಡಲೇ ಅಗತ್ಯ ಇರುವೆಡೆ ಖರೀದಿ ಕೇಂದ್ರ ಆರಂಭಿಸಲು ಜಿಲ್ಲಾಧಿಕಾರಿ ನೇತೃತ್ವದ ಕಾರ್ಯಪಡೆಗಳಿಗೆ ಸೂಚನೆ ನೀಡಲಾಗಿದೆ.