Minister Dr.K.Sudhakar

1,763 ವೈದ್ಯರು, ವೈದ್ಯಾಧಿಕಾರಿಗಳ ನೇಮಕ; ಆರೋಗ್ಯ ವ್ಯವಸ್ಥೆಗೆ ಬಲ: ಶಿಕ್ಷಣ ಸಚಿವ ಡಾ. ಕೆ.ಸುಧಾಕರ್
ರಾಜ್ಯದ ಆರೋಗ್ಯ ಕ್ಷೇತ್ರವನ್ನು ಬಲಪಡಿಸಲು ಒಟ್ಟು 1,763 ವೈದ್ಯರು ಹಾಗೂ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ತಿಳಿಸಿದರು.

ಬ್ಲ್ಯಾಕ್ ಫಂಗಸ್ ಸೋಂಕು ಬಂದರೆ ಸರ್ಕಾರಕ್ಕೆ ಮಾಹಿತಿ ನೀಡಿ: ಸಚಿವ ಡಾ. ಕೆ.ಸುಧಾಕರ್
ರಾಜ್ಯದಲ್ಲಿ ಯಾರಿಗೇ ಬ್ಲ್ಯಾಕ್ ಫಂಗಸ್ ಸೋಂಕು ಬಂದರೆ ಸರ್ಕಾರಕ್ಕೆ ಮಾಹಿತಿ ನೀಡಬೇಕು. ಇದನ್ನು ಮುಚ್ಚಿಟ್ಟರೆ ಕಾನೂನು ಬಾಹಿರವಾಗುತ್ತದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಐಐಎಸ್‍ಸಿ ನಿರ್ದೇಶಕ ಪ್ರೊ. ಗೋವಿಂದನ್ ರಂಗರಾಜನ್ ಜೊತೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಮಾತುಕತೆ
ಕೋವಿಡ್-19 ವಿರುದ್ಧದ ಹೋರಾಟದಲ್ಲಿ ಸಹಯೋಗದಲ್ಲಿ ಕಾರ್ಯನಿರ್ವಹಿಸಲು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಐಐಎಸ್‍ಸಿ ನಿರ್ದೇಶಕ ಪ್ರೊ.ಗೋವಿಂದನ್ ರಂಗರಾಜನ್ ಜೊತೆ ಚರ್ಚೆ ನಡೆಸಿದರು.

ಖಾಸಗಿ ಆಸ್ಪತ್ರೆಗಳಲ್ಲಿ 50% ರಷ್ಟು ಹಾಸಿಗೆ ಮೀಸಲು: ಸಚಿವ ಡಾ. ಕೆ.ಸುಧಾಕರ್
ಕಳೆದ ಬಾರಿ ಖಾಸಗಿ ಆಸ್ಪತ್ರೆಗಳಲ್ಲಿ 50% ರಷ್ಟು ಹಾಸಿಗೆ ಕೋವಿಡ್ ಗೆ ಮೀಸಲಿಡಲಾಗಿತ್ತು. ಇದೇ ರೀತಿ ಈಗ ಹಾಸಿಗೆ ಮೀಸಲಿಡಬೇಕು ಎಂದು ಖಾಸಗಿ ಆಸ್ಪತ್ರೆಗಳಿಗೆ ಸೂಚಿಸಲಾಗಿದೆ ಎಂದು ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಹೋಮಿಯೋಪತಿಯಲ್ಲೂ ಕೊರೋನಾ ಔಷಧಿ ತಯಾರಿಸಿ: ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಸಲಹೆ
ಕೊರೊನಾ ನಿವಾರಣೆಗೆ ಹೋಮಿಯೋಪತಿ ಪದ್ಧತಿಯಲ್ಲೂ ಔಷಧಿ ಆವಿಷ್ಕಾರ ಮಾಡಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸಲಹೆ ನೀಡಿದರು.

ರಾಜ್ಯದಲ್ಲಿ ಕೋವಿಡ್ ಲಸಿಕೆ ವಿತರಣೆಗೆ ಸಿದ್ಧತೆ: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್
ರಾಜ್ಯದಲ್ಲಿ ಕೋವಿಡ್ ಲಸಿಕೆ ವಿತರಣೆಗೆ ಎಲ್ಲ ಬಗೆಯ ಸಿದ್ಧತೆಗಳನ್ನು ಮಾಡಿಕೊಂಡಿದ್ದು, 29,451 ಲಸಿಕೆ ವಿತರಣೆ ಕೇಂದ್ರಗಳನ್ನು ಗುರುತಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮಾಹಿತಿ ನೀಡಿದ್ದಾರೆ.

ಸೇರೊ ಸರ್ವೆ ಪ್ರಕಾರ, ರಾಜ್ಯದ 16% ಜನರಲ್ಲಿ ಕೋವಿಡ್ ಪ್ರತಿಕಾಯ ಪತ್ತೆ: ಆರೋಗ್ಯ ಸಚಿವ ಡಾ. ಕೆ.ಸುಧಾಕರ್
ರಾಜ್ಯದಲ್ಲಿ ಶೇ.16 ರಷ್ಟು ಜನರಲ್ಲಿ ಕೋವಿಡ್ ಪ್ರತಿಕಾಯ ಇದೆ ಎಂಬ ಅಂಶ ಸೆರೋ ಸರ್ವೆಯಲ್ಲಿ ತಿಳಿದುಬಂದಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಎನ್‌ಪಿಎಸ್ ಯೋಜನೆ ಜಾರಿ: ಸಚಿವರ ಸುಧಾಕರ್
ವೈದ್ಯಕೀಯ ಶಿಕ್ಷಣ ಇಲಾಖೆಯ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳ ಬಹು ದಿನಗಳ ಬೇಡಿಕೆಯಾಗಿದ್ದ ಪಿಂಚಣಿ ಯೋಜನೆಗೆ (ಎನ್‌ಪಿಎಸ್) ಸಚಿವ ಡಾ. ಕೆ. ಸುಧಾಕರ್ ಹಸಿರು ನಿಶಾನೆ ತೋರಿದ್ದಾರೆ.

