Minister Eshwara Khandre

ಪಿಓಪಿ ಗಣೇಶ ತಯಾರಕರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲು ಈಶ್ವರ ಖಂಡ್ರೆ ಸೂಚನೆ
ನೀರಿನಲ್ಲಿ ಕರಗದ ಪಿಓಪಿ ವಿಗ್ರಹಗಳು ಜಲ ಮೂಲಗಳಿಗೆ ಅಪಾಯಕಾರಿಯಾಗಿದ್ದು, ಇಂತಹ ಮೂರ್ತಿಗಳ ತಯಾರಿಕೆ, ಸಾಗಾಟ, ಮಾರಾಟ ಮತ್ತು ವಿಸರ್ಜನೆಯನ್ನು ಸಂಪೂರ್ಣ ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳಿಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸ್ಪಷ್ಟ ಸೂಚನೆ ನೀಡಿದ್ದಾರೆ.

ಬೀದರ್, ಕಲ್ಬುರ್ಗಿ ಪ್ಲಾಸ್ಟಿಕ್ ಮುಕ್ತ ನಗರ ಮಾಡಲು ಸಂಕಲ್ಪ: ಸಚಿವ ಈಶ್ವರ ಖಂಡ್ರೆ
ವಿಶ್ವ ಪರಿಸರ ದಿನದಂದು 5 ನಗರ ಅಥವಾ ಪಟ್ಟಣವನ್ನು ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ಮಾಡುವುದಾಗಿ ಘೋಷಿಸಿದ್ದ ಅರಣ್ಯ, ಪರಿಸರ ಸಚಿವ ಈಶ್ವರ ಖಂಡ್ರೆ ಇಂದು ಆ ಐದು ನಗರಗಳ ಪೈಕಿ 2 ನಗರಗಳ ಹೆಸರು ಘೋಷಣೆ ಮಾಡಿದ್ದಾರೆ.

