Minister Suresh Kumar

ಶಾಲೆಗಳ ಮರು ಆರಂಭ ಕುರಿತು ಜುಲೈ 5ರ ನಂತರ ನಿರ್ಧಾರ: ಶಿಕ್ಷಣ ಸಚಿವ ಸುರೇಶ್ ಕುಮಾರ್
ಕೊರೋನಾ ಆತಂಕದ ನಡುವೆ ಶಾಲೆ ಪುನರಾರಂಭ ಕುರಿತು ಜುಲೈ 5ರ ನಂತರ ತೀರ್ಮಾನ ಮಾಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಜುಲೈ ಅಂತ್ಯಕ್ಕೆ ಪಿಯುಸಿ, ಆಗಸ್ಟ್ ಮೊದಲ ವಾರದಲ್ಲಿ ಎಸ್ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ: ಸಚಿವ ಸುರೇಶ್ ಕುಮಾರ್
ರಾಜ್ಯಾದ್ಯಂತ ಎಸ್ ಎಸ್ ಎಲ್ ಸಿ ಪರೀಕ್ಷೆ ನಿರಾತಂಕವಾಗಿ ಸಾಗುತ್ತಿದೆ. ಆಗಸ್ಟ್ ಮೊದಲ ವಾರದಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆಯ ಫಲಿತಾಂಶ ಹಾಗೂ ಜುಲೈ ಅಂತ್ಯದ ವೇಳೆಗೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.

ಪಿಯುಸಿ ಪರೀಕ್ಷೆಗೆ ಬರೆದ ವಿದ್ಯಾರ್ಥಿನಿಗೆ ಕೊರೋನಾ ಸುದ್ದಿ ಸುಳ್ಳು: ಸಚಿವ ಸುರೇಶ್ ಕುಮಾರ್
ಗುರುವಾರ ನಡೆದ ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆಗೆ ಬೆಂಗಳೂರಿನ ಜಯನಗರದ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿನಿ ಕ್ವಾರಂಟೈನ್ ಮೊಹರನ್ನು ಅಳಿಸಿಕೊಂಡು ಹಾಜರಾಗಿದ್ದಾಳೆಂಬ ಸುದ್ದಿ ಸತ್ಯಕ್ಕೆ ದೂರವಾಗಿದೆ. ಈ ವಿದ್ಯಾರ್ಥಿನಿಯ ಕೊರೋನಾ ಟೆಸ್ಟ್ ಮಾಡಿಸಲಾಗಿದ್ದು, ‘ಕೊರೋನಾ ನೆಗೆಟಿವ್’ ಎಂಬುದು ಸ್ಪಷ್ಟವಾಗಿ ದೃಢಪಟ್ಟಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ

ಈ ವರ್ಷ ಶಾಲಾ ಪಠ್ಯಪುಸ್ತಕದಲ್ಲಿ ಕೊರೋನಾ ಪಾಠ ಕೂಡ ಇರುತ್ತದೆ: ಸಚಿವ ಸುರೇಶ್ ಕುಮಾರ್
ಕೊರೋನಾ ವೈರಸ್ ಪ್ರಸಕ್ತ ವರ್ಷ ಭೂಮಂಡಲದ ಮೇಲೆ ಮಾಡಿರುವ ಪರಿಣಾಮ ಅಷ್ಟಿಷ್ಟಲ್ಲ. ಅದರ ಬಗ್ಗೆ ಅರಿವು ಮೂಡಿಸಲು ಇದೀಗ ರಾಜ್ಯ ಸರ್ಕಾರ ಕೋವಿಡ್-19 ಬಗ್ಗೆ ಶಾಲಾ ಮಕ್ಕಳಿಗೆ ಒಂದು ಪಾಠವನ್ನೇ ಇಡುತ್ತಿದೆಯಂತೆ.

ಇನ್ನೂ 1,000 ಸರ್ಕಾರಿ ಶಾಲೆಗಳಲ್ಲಿ ಕನ್ನಡದ ಜೊತೆಗೆ ಆಂಗ್ಲ ಮಾಧ್ಯಮ ಶಿಕ್ಷಣ ಜಾರಿ: ಸಚಿವ ಸುರೇಶ್ ಕುಮಾರ್
"ಸರ್ಕಾರಿ ಶಾಲಾ ವಿದ್ಯಾರ್ಥಿಗಳನ್ನು ಜಾಗತಿಕ ಮಟ್ಟದಲ್ಲಿ ಬೆಳೆಯುವಂತಾಗಲು ಸರ್ಕಾರಿ ಶಾಲೆಗಳ ಘನತೆ ಉಳಿಸಿಕೊಳ್ಳಲು ಈ ವರ್ಷ ಇನ್ನೂ ಒಂದು ಸಾವಿರ ಶಾಲೆಗಳಲ್ಲಿ ಕನ್ನಡ ಜೊತೆಗೆ ಇಂಗ್ಲಿಷ್ ಅನ್ನು ಬೋಧನಾ ಮಾಧ್ಯಮವಾಗಿ ಪರಿಚಯಿಸಲು ನಾವು ಸಲಹೆ ನೀಡುತ್ತೇವೆ" ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಹೇಳಿದ್ದಾರೆ.

ಮಕ್ಕಳ ಹಿತಕ್ಕಾಗಿ ಎಸ್ಸೆಸ್ಸೆಲ್ಸಿ ಪರೀಕ್ಷೆಯೇ ಹೊರತು, ಪ್ರತಿಷ್ಠೆಗಾಗಿ ಅಲ್ಲ: ಸುರೇಶ್ ಕುಮಾರ್
ನಮ್ಮ ನಾಡಿನ ಮಕ್ಕಳ ಹಿತದೃಷ್ಟಿಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸುವುದು ಅನಿವಾರ್ಯವೇ ಹೊರತು ಅದು ಯಾರೊಬ್ಬರ ಪ್ರತಿಷ್ಠೆಯಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ.

ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಿ: ಶಿಕ್ಷಕ-ಪದವೀಧರ ಕ್ಷೇತ್ರದ ಶಾಸಕರ ಒಕ್ಕೊರಲ ಆಗ್ರಹ
ಕೊರೋನಾ ನಂತರದ ಸಾಮಾಜಿಕ ಸ್ಥಿತಿಯಲ್ಲಿ ಎಸ್ ಎಸ್ ಎಲ್ ಸಿ ಹಾಗೂ ಬಾಕಿ ಉಳಿದಿರುವ ಪಿಯುಸಿ ಇಂಗ್ಲಿಷ್ ಪರೀಕ್ಷೆ, ಶಾಲಾ ಶೈಕ್ಷಣಿಕ ವರ್ಷ ಆರಂಭ ಸೇರಿದಂತೆ ಹಲವಾರು ವಿಷಯಗಳ ಕುರಿತು ಪ್ರಾಥಮಿಕ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಸದಸ್ಯರೊಂದಿಗೆ ವಿಡಿಯೋ ಸಂವಾದ ನಡೆಸಿ ಸಲಹೆ ಸೂಚನೆಗಳನ್ನು ಪಡೆದರು.

ಆಗಸ್ಟ್ 1ಕ್ಕೆ ಶಾಲಾ-ಕಾಲೇಜು ಪುನರಾರಂಭ ಎಂಬ ಸುದ್ದಿ ಸತ್ಯವಲ್ಲ: ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ
ಕೊರೋನಾ ವೈರಸ್ ವ್ಯಾಪಕವಾಗಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಈ ವರ್ಷ ಶಾಲಾ-ಕಾಲೇಜುಗಳು ಎಂದಿನಂತೆ ಜೂನ್ ನಲ್ಲಿ ಆರಂಭವಾಗುವುದಿಲ್ಲ, ಆಗಸ್ಟ್ ನಿಂದ ಪ್ರಾರಂಭವಾಗುತ್ತವೆ ಎಂದು ಕೆಲವು ಮಾಧ್ಯಮಗಳಲ್ಲಿ ವರದಿಯಾದ ಬಗ್ಗೆ ಸ್ವತಃ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.

7-9ರವರೆಗೆ ಪರೀಕ್ಷೆ ಇಲ್ಲದೆ ನೇರ ಪಾಸ್; ಶೀಘ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ದಿನಾಂಕ ಪ್ರಕಟ: ಸುರೇಶ್ ಕುಮಾರ್
7ರಿಂದ 9ನೆ ತರಗತಿವರೆಗೆ ಪರೀಕ್ಷೆಯಿಲ್ಲದೇ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸಲಾಗುವುದು. ಏಪ್ರಿಲ್ 14 ರ ನಂತರ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಇಂಗ್ಲೀಷ್ ಪರೀಕ್ಷೆ ನಡೆಸಲಾಗುತ್ತಿದ್ದು, ಆದಷ್ಟು ಬೇಗ ದಿನಾಂಕ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

