ministers

ಸಿಎಂ, ಸಚಿವರಿಗೆ ಡಿಸಿಎಂ ಡಿಕೆ ಶಿವಕುಮಾರ್ ಔತಣಕೂಟ; ಲೋಕಸಭೆ ಚುನಾವಣೆ ಕುರಿತು ಚರ್ಚೆ
ಅಧಿಕಾರಕ್ಕೆ ಬಂದು ಒಂದು ವರ್ಷ ಪೂರ್ಣಗೊಂಡ ನಂತರ, ವಿರೋಧ ಪಕ್ಷಗಳ ಮಾತಿಗೆ ಸಿಲುಕದೆ ಹೇಗೆ ಸರ್ಕಾರ ಮುಂದುವರಿಯಬೇಕು ಎಂಬ ಬಗ್ಗೆಯೂ ಚರ್ಚಿಸಲಾಯಿತು ಎಂದು ಮೂಲಗಳು ತಿಳಿಸಿವೆ.

ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣ: ಅನಗತ್ಯ ಹೇಳಿಕೆ ನೀಡದಂತೆ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋಗಳಿರುವ ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅನಗತ್ಯ ಹೇಳಿಕೆ ನೀಡದಂತೆ ಸಿಎಂ ಸಿದ್ದರಾಮಯ್ಯ ಅವರು ಸಚಿವರಿಗೆ ಸೂಚನೆ ನೀಡಿದ್ದಾರೆ.

2024 ಲೋಕಸಭಾ ಚುನಾವಣೆ: 7-8 ಸಚಿವರನ್ನು ಕಣಕ್ಕಿಳಿಸಲು ಕಾಂಗ್ರೆಸ್‌ನಲ್ಲಿ ಚರ್ಚೆ ನಡೆದಿದೆ!
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಏಳರಿಂದ ಎಂಟು ಸಚಿವರು ಸ್ಪರ್ಧಿಸಬೇಕು ಎಂಬ ಬಗ್ಗೆ ಪಕ್ಷದಲ್ಲಿ ಚರ್ಚೆ ನಡೆಯುತ್ತಿದೆ. ಆದರೆ, 28 ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳು ಯಾರಾಗಬೇಕು ಎಂಬುದನ್ನು ಪಕ್ಷವು ಅಂತಿಮವಾಗಿ ನಿರ್ಧರಿಸುತ್ತದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಗೃಹ ಸಚಿವ ಜಿ ಪರಮೇಶ್ವರ ಸೋಮವಾರ ಹೇಳಿದ್ದಾರೆ.

ಡಿಕೆಶಿ ನಿವಾಸದಲ್ಲಿ ಔತಣಕೂಟ; ಜಾರಕಿಹೊಳಿ, ಮಹದೇವಪ್ಪ ಸೇರಿ ಹಲವರು ಗೈರು; ಪರೋಕ್ಷವಾಗಿ ಅಸಮಾಧಾನ?
ರಾಜ್ಯಸಭೆ ಜೊತೆ ಲೋಕಸಭಾ ಚುನಾವಣೆಗೆ ಸಿದ್ಧತೆ ಹಿನ್ನೆಲೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಶುಕ್ರವಾರ ರಾತ್ರಿ ಕರೆದಿದ್ದ ಔತಣಕೂಟದಲ್ಲಿ ಸತೀಶ್ ಜಾರಕಿಹೊಳಿ, ಮಹದೇವಪ್ಪ ಸೇರಿ ಹಲವರು ಗೈರು ಹಾಜರಾಗಿದ್ದು...

ಗೆಲ್ಲುವ ಅಭ್ಯರ್ಥಿಗಳ ಆಯ್ಕೆ ಮಾಡಲು ಕಾಂಗ್ರೆಸ್ ಹೈಕಮಾಂಡ್ ಹೈರಾಣ: ಸಚಿವರಿಗೆ ಬೇಡವಾಗಿದೆ 'ರಾಷ್ಟ್ರ ರಾಜಕಾರಣ'!
ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸಲು ಪಕ್ಷದ ಹಿರಿಯರು ಮತ್ತು ಸಚಿವರು ಹಿಂದೇಟು ಹಾಕುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಗೆ ಗೆಲ್ಲುವ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದು ಕಷ್ಟಕರವಾದಂತಿದೆ, ಇದರ ಪರಿಣಾಮವಾಗಿ ತನ್ನ ಮೊದಲ ಪಟ್ಟಿ ಬಿಡುಗಡೆ ಮಾಡಲು ವಿಳಂಬವಾಗಿದೆ.

ಲೋಕಸಭೆ ಚುನಾವಣೆಗೆ ಸಚಿವರು ಸಿದ್ದಪಡಿಸಿರುವ ಸಂಭಾವ್ಯ ಅಭ್ಯರ್ಥಿಗಳ ಆಯ್ಕೆ ಪಟ್ಟಿ ತೃಪ್ತಿ ತಂದಿಲ್ಲ: ಡಿಕೆ ಶಿವಕುಮಾರ್
ಮೇ ತಿಂಗಳ ಚುನಾವಣೆಗೆ ಮುನ್ನ ಪ್ರತಿ ಲೋಕಸಭಾ ಕ್ಷೇತ್ರದಿಂದ ಸಚಿವರು ಸಿದ್ಧಪಡಿಸಿರುವ ಸಂಭಾವ್ಯರ ಪಟ್ಟಿ ನನಗೆ ತೃಪ್ತಿ ತಂದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬುಧವಾರ ಹೇಳಿದ್ದಾರೆ.

ಬೇಡಪ್ಪಾ ಸಂಸತ್ ಸಹವಾಸ: ಸಮೃದ್ಧ ಖಾತೆ ತೊರೆಯಲು ಹಿಂದೇಟು; ಲೋಕಸಭೆಗೆ ಸ್ಪರ್ಧಿಸಲು ಉತ್ಸಾಹ ತೋರದ ಸಚಿವರು!
ಯಾವುದೇ ಸಚಿವರೂ ತಮ್ಮ ಸಮೃದ್ಧ ಸಚಿವ ಸ್ಥಾನ ಬಿಟ್ಟುಕೊಟ್ಟು ಕಣಕ್ಕಿಳಿಯಲು ಆಸಕ್ತಿ ಹೊಂದಿಲ್ಲ. PWD ಸಚಿವ ಸತೀಶ್ ಜಾರಕಿಹೊಳಿ ಸೇರಿದಂತೆ ಕೆಲವು ಸಚಿವರು ಈಗಾಗಲೇ 2024 ರ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದ್ದಾರೆ, ಆದರೆ ಅವರ ಹೆಸರುಗಳು ಸಂಭಾವ್ಯ ಅಭ್ಯರ್ಥಿಗಳಾಗಿ ಶಾರ್ಟ್‌ಲಿಸ್ಟ್ ಆಗುವ ಸಾಧ್ಯತೆಯಿದೆ.

ವಿವಾದ ಸೃಷ್ಟಿಸುವ ಬದಲು ಸಮಾಜವನ್ನು ಒಗ್ಗೂಡಿಸುವ ಕೆಲಸ ಮಾಡಿ: ಶಾಸಕರು, ಸಚಿವರಿಗೆ ಸ್ಪೀಕರ್ ಖಾದರ್ ಸೂಚನೆ
ವಿವಾದ ಸೃಷ್ಟಿಸುವ ಬದಲು ಸಮಾಜವನ್ನು ಒಗ್ಗೂಡಿಸುವ ಕೆಲಸ ಮಾಡಬೇಕ ಎಂದು ಸಚಿವರು ಹಾಗೂ ಶಾಸಕರಿಗೆ ವಿಧಾನಸಭಾಧ್ಯಕ್ಷ ಯುಟಿ ಖಾದರ್ ಅವರು ಶುಕ್ರವಾರ ಸೂಚನೆ ನೀಡಿದರು.

ಇನ್ಫೋಸಿಸ್ ನಾರಾಯಣ ಮೂರ್ತಿ ಸಲಹೆಗೆ ಸಚಿವರಿಂದ ತೀವ್ರ ವಿರೋಧ
ಗ್ಯಾರಂಟಿ ಯೋಜನೆಗಳ ವಿರುದ್ಧ ಇನ್ಫೋಸಿಸ್ ಸಹ ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ ನೀಡಿದ್ದ ಸಲಹೆಗೆ ಕಾಂಗ್ರೆಸ್ ಸರ್ಕಾರದ ಸಚಿವರಿಂದ ತೀವ್ರ ವಿರೋಧ ವ್ಯಕ್ತವಾಗಿದೆ.

