Ministry of Home Affairs

ಸೆಪ್ಟೆಂಬರ್ 9ರಂದು ಮಾತುಕತೆಗೆ ಮುನ್ನ ಹೋರಾಟ ತೀವ್ರ: ಲಡಾಖ್ ಉನ್ನತ ಮಂಡಳಿ ಎಚ್ಚರಿಕೆ
2019ರ ಆಗಸ್ಟ್‌ನಲ್ಲಿ ಲಡಾಖ್‌ಗೆ ಕೇಂದ್ರಾಡಳಿತ ಪ್ರದೇಶದ ಸ್ಥಾನಮಾನ ನೀಡಿದ ಬಳಿಕ ಎಲ್ ಎಬಿ ಮತ್ತು ಕಾರ್ಗಿಲ್ ಡೆಮಾಕ್ರಟಿಕ್ ಅಲಯನ್ಸ್ (KDA) ಈ ಬೇಡಿಕೆಗಳೊಂದಿಗೆ ಜಂಟಿಯಾಗಿ ಹೋರಾಟ ನಡೆಸುತ್ತಿವೆ. 2021ರಿಂದ ಕೇಂದ್ರ ಸರ್ಕಾರದೊಂದಿಗೆ ಹಲವು ಸುತ್ತಿನ ಮಾತುಕತೆಗಳನ್ನೂ ನಡೆಸಿವೆ.

Census 2027: ಜಾತಿ, ಕೋವಿಡ್ ಲಸಿಕೆ, ಆಧಾರ್ ಸೇರಿ 40 ಪ್ರಶ್ನೆಗಳಿಗೆ ಉತ್ತರಿಸಬೇಕು! ಜನಗಣತಿ ವೇಳೆ ಯಾವೆಲ್ಲಾ ಐಡಿಗಳು ಬೇಕು ಗೊತ್ತಾ?
ಸ್ವತಂತ್ರ ಭಾರತದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡ (ST)ಗಳ ಮಾಹಿತಿಯ ಜೊತೆಗೆ ಎಲ್ಲಾ ಜನರಿಂದ ಜಾತಿ ಕುರಿತ ಮುಕ್ತ ಪ್ರಶ್ನೆಯ ಮೂಲಕ ಮಾಹಿತಿ ಪಡೆಯಲಾಗುತ್ತದೆ.

ಲಡಾಕ್ ಲಡಾಯಿ: ಅಕ್ಟೋಬರ್ 7 ಮಾತುಕತೆಗೆ ಮುನ್ನ ಪೂರ್ವ ಸಿದ್ಧತಾ ಸಭೆಗೆ ಗೃಹ ಸಚಿವಾಲಯ ಕರೆ
ಬರುವ ಅಕ್ಟೋಬರ್ 7 ರಂದು ಕೇಂದ್ರ ಮತ್ತು ಲಡಾಖ್ ನಾಯಕರ ನಡುವಿನ ಮಾತುಕತೆಗೆ ಮುಂಚಿತವಾಗಿ, ಲಡಾಖ್ ನಾಯಕರ ಏಳು ಸದಸ್ಯರ ನಿಯೋಗವು ಇಂದು ದೆಹಲಿಯಲ್ಲಿ ಗೃಹ ಸಚಿವಾಲಯ ಅಧಿಕಾರಿಗಳೊಂದಿಗೆ ಪೂರ್ವಸಿದ್ಧತಾ ಸಭೆ ನಡೆಸಲಿದೆ.

UAPA Act: ಜಮ್ಮು-ಕಾಶ್ಮೀರ ನ್ಯಾಷನಲ್ ಫ್ರಂಟ್ ಸಂಘಟನೆಗೆ ಕೇಂದ್ರ ಸರ್ಕಾರ 5 ವರ್ಷ ನಿಷೇಧ!
ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿ ನಯೀಮ್ ಅಹ್ಮದ್ ಖಾನ್ ನೇತೃತ್ವದ ಜಮ್ಮು ಮತ್ತು ಕಾಶ್ಮೀರ ನ್ಯಾಷನಲ್ ಫ್ರಂಟ್ ಸಂಘಟನೆಯನ್ನು 5 ವರ್ಷದ ಕಾಲ ಕೇಂದ್ರ ಗೃಹ ಸಚಿವಾಲಯ ನಿಷೇಧಿಸಿದೆ.

ರೈತರ ಪ್ರತಿಭಟನೆಗೆ ಸಂಬಂಧಿಸಿದ ಪೋಸ್ಟ್‌ಗಳು, ಖಾತೆಗಳ ನಿರ್ಬಂಧಕ್ಕೆ ಕೇಂದ್ರ ಸರ್ಕಾರ ಆದೇಶ; X ಅಸಮ್ಮತಿ
ಈಗ ನಡೆಯುತ್ತಿರುವ ರೈತರ ಪ್ರತಿಭಟನೆಗಳಿಗೆ ಸಂಬಂಧಿಸಿದ ಖಾತೆಗಳು ಮತ್ತು ಪೋಸ್ಟ್‌ಗಳನ್ನು ನಿರ್ಬಂಧಿಸುವ ಭಾರತ ಸರ್ಕಾರದ ಆದೇಶಕ್ಕೆ ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್ ಗುರುವಾರ ಅಸಮ್ಮತಿ ವ್ಯಕ್ತಪಡಿಸಿದೆ.

ಜನವರಿ 2024 ರಿಂದ ಕನ್ನಡ, ತಮಿಳು, ತೆಲುಗು ಸೇರಿ 13 ಭಾಷೆಗಳಲ್ಲಿ CAPF ಕಾನ್ಸ್‌ಟೇಬಲ್ ಹುದ್ದೆಗಳಿಗೆ ಪರೀಕ್ಷೆ!
ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಿಗೆ (ಸಿಎಪಿಎಫ್) ಕಾನ್ಸ್‌ಟೇಬಲ್ (ಜನರಲ್ ಡ್ಯೂಟಿ) ಪರೀಕ್ಷೆಯನ್ನು ಹಿಂದಿ ಮತ್ತು ಇಂಗ್ಲಿಷ್ ಜೊತೆಗೆ 13 ಪ್ರಾದೇಶಿಕ ಭಾಷೆಗಳಲ್ಲಿ ನಡೆಸಲು ಗೃಹ ವ್ಯವಹಾರಗಳ ಸಚಿವಾಲಯ (ಎಂಎಚ್‌ಎ) ಶನಿವಾರದಂದು ಮಹತ್ವದ ನಿರ್ಧಾರ ಕೈಗೊಂಡಿದೆ.

ರಿಂಡಾ ಘೋಷಿತ ಉಗ್ರ; ಖಲಿಸ್ತಾನ್ ಟೈಗರ್ ಫೋರ್ಸ್, ಜೆಕೆಜಿಎಫ್ ಉಗ್ರ ಸಂಘಟನೆಗಳು: ಗೃಹ ಸಚಿವಾಲಯ
ಮಹತ್ವದ ಬೆಳವಣಿಗೆಯಲ್ಲಿ ಪಂಜಾಬ್‌ನಲ್ಲಿ ಹಲವಾರು ಭಯೋತ್ಪಾದಕ ಚಟುವಟಿಕೆಗಳಲ್ಲಿ ಭಾಗಿಯಾಗಿ ಕುಖ್ಯಾತಿ ಗಳಿಸಿದ್ದ ಹರ್ವಿಂದರ್ ಸಿಂಗ್ ಸಂಧು ಅಲಿಯಾಸ್ ರಿಂಡಾನನ್ನು ಘೋಷಿತ ಉಗ್ರರ ಪಟ್ಟಿಗೆ ಸೇರಿಸಲಾಗಿದ್ದು, ಇದಲ್ಲದೆ ಖಲಿಸ್ತಾನ್ ಟೈಗರ್ ಫೋರ್ಸ್ (KTF) ಮತ್ತು ಜಮ್ಮು ಮತ್ತು ಕಾಶ್ಮೀರ ಘಜ್ನವಿ ಫೋರ್ಸ್ (JKGF) ಅನ್ನು ಉಗ್ರ ಸಂಘಟನೆಗಳು ಎಂದು ಘೋಷಣೆ ಮಾಡಿದೆ.

ಕೇಂದ್ರ ಸಶಸ್ತ್ರ ಪೊಲೀಸ್ ಪಡೆ, ಅಸ್ಸಾಂ ರೈಫಲ್ಸ್ ನೇಮಕಾತಿಯಲ್ಲಿ 'ಅಗ್ನಿವೀರ'ರಿಗೆ ಆದ್ಯತೆ: ಗೃಹ ಸಚಿವಾಲಯ
ವಿಶೇಷ 'ಅಗ್ನಿಪಥ್' ಯೋಜನೆಯಡಿ ಅಲ್ಪಾವಧಿ ಒಪ್ಪಂದದಡಿಯಲ್ಲಿ ಭೂಸೇನೆ, ನೌಕಾಪಡೆ ಮತ್ತು ವಾಯುಸೇನೆಯಲ್ಲಿ ನೇಮಕಗೊಂಡಿರುವ 'ಅಗ್ನಿವೀರ್' ಸೈನಿಕರು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಿಗೆ (ಸಿಎಪಿಎಫ್) ಮತ್ತು ಅಸ್ಸಾಂ ರೈಫಲ್ಸ್‌ಗೆ ನೇಮಕಾತಿಯಲ್ಲಿ ಆದ್ಯತೆಯನ್ನು ಪಡೆಯುತ್ತಾರೆ ಎಂದು ಕೇಂದ್ರ ಗೃಹ ಸಚಿವಾಲಯ ಬುಧವಾರ ಘೋಷಣೆ ಮಾಡಿದೆ.

ಹಿಂದೂ ಧರ್ಮಕ್ಕೆ ಬೆದರಿಕೆ ಇದೆ ಎಂಬ ಮಾತು ಕೇವಲ ಕಾಲ್ಪನಿಕ: ಕೇಂದ್ರ ಗೃಹ ಸಚಿವಾಲಯ ಸ್ಪಷ್ಟನೆ
ಹಿಂದೂ ಧರ್ಮಕ್ಕೆ ಬೆದರಿಕೆಯಿದೆ ಎಂಬ ಮಾತುಗಳು ಕೇವಲ ಕಾಲ್ಪನಿಕ ಎಂದು ಕೇಂದ್ರ ಸರ್ಕಾರ ಹೇಳಿದೆ.

