Minor boy

ಚಿಕ್ಕಬಳ್ಳಾಪುರ: ಫೋನ್ ಬಳಸದಂತೆ ಬೈದ ಪೋಷಕರು; ಮನನೊಂದು ಬಾಲಕ ಆತ್ಮಹತ್ಯೆ
ಚಿಕ್ಕಬಳ್ಳಾಪುರ ಜಿಲ್ಲೆಯ ಹಳ್ಳಿಯೊಂದರಲ್ಲಿ ಮೊಬೈಲ್ ಫೋನ್ ಚಟದ ಬಗ್ಗೆ ಪೋಷಕರು ಗದರಿಸಿದ್ದರಿಂದ ಮನನೊಂದು 9ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ನಡೆದಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಜಾರ್ಖಂಡ್; ಬೈಕ್‌ನಲ್ಲಿ ಬರುತ್ತಿದ್ದಾಗ ಆಕಸ್ಮಿಕವಾಗಿ ಎಮ್ಮೆಗೆ ಡಿಕ್ಕಿ, 16 ವರ್ಷದ ಬಾಲಕನನ್ನು ಥಳಿಸಿ ಹತ್ಯೆ!
ಮೋಟಾರು ಸೈಕಲ್ ಆಕಸ್ಮಿಕವಾಗಿ ಎಮ್ಮೆ ಡಿಕ್ಕಿಯಾದ ಬಳಿಕ ಜಾರ್ಖಂಡ್‌ನ ದುಮ್ಕಾ ಜಿಲ್ಲೆಯಲ್ಲಿ 16 ವರ್ಷದ ಬಾಲಕನನ್ನು ಜನರ ಗುಂಪೊಂದು ಥಳಿಸಿ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಬೆಳಗಾವಿ: ಇನ್‌ಸ್ಟಾಗ್ರಾಮ್ ಜಗಳ ಬಾಲಕನ ಕೊಲೆಯಲ್ಲಿ ಅಂತ್ಯ; ಮೂವರು ಅಪ್ರಾಪ್ತರು ವಶಕ್ಕೆ, ಓರ್ವನ ಬಂಧನ
ಇನ್‌ಸ್ಟಾಗ್ರಾಮ್‌ನಲ್ಲಿ ಪ್ರಾರಂಭವಾದ ಜಗಳವು ಅಪ್ರಾಪ್ತ ಬಾಲಕನ ಹತ್ಯೆಯಲ್ಲಿ ಕೊನೆಯಾಗಿರುವ ದುರಂತ ಘಟನೆಯೊಂದು ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಮೃತನನ್ನು 17 ವರ್ಷದ ಪ್ರಜ್ವಲ್ ಸುಂಕದ ಎಂದು ಗುರುತಿಸಲಾಗಿದೆ.

ಉತ್ತರ ಕನ್ನಡ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ, ಪಶ್ಚಿಮ ಬಂಗಾಳ ಮೂಲದ ಮೌಲಾನಾ ಬಂಧನ
ಉತ್ತರ ಕನ್ನಡ ಜಿಲ್ಲೆಯ ಮಸೀದಿಯೊಂದರಲ್ಲಿ ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮೂಲದ ಮೌಲಾನಾ ಎಂಬಾತನನ್ನು ಬಂಧಿಸಿರುವುದಾಗಿ ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಹೆಂಡತಿಯನ್ನು ರೇಗಿಸಿದ್ದಕ್ಕೆ ಅಪ್ರಾಪ್ತನನ್ನು ಕೊಂದು ದೇಹವನ್ನು ಐದು ತುಂಡುಗಳಾಗಿ ಕತ್ತರಿಸಿದ ಆಟೋ ಚಾಲಕ, ಬಂಧನ
17 ವರ್ಷದ ಬಾಲಕನನ್ನು ಕೊಂದು ಆತನ ದೇಹವನ್ನು ಐದು ತುಂಡುಗಳಾಗಿ ಕತ್ತರಿಸಿದ ಆರೋಪದ ಮೇಲೆ ಆಟೋರಿಕ್ಷಾ ಚಾಲಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಸಂತ್ರಸ್ತ ಅವ್ಹಾದ್ ಎಂಬಾತ 33 ವರ್ಷದ ಅಹ್ಮದ್ ಶೇಖ್ ಅವರ ಪತ್ನಿ ಮತ್ತು ಆಕೆಯ ತಂಗಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡುತ್ತಿದ್ದನು.

ಆಘಾತಕಾರಿ ಘಟನೆ: ಅಪ್ರಾಪ್ತೆ ಮೇಲೆ ಅತ್ಯಾಚಾರ; ಮೂವರು ಬಾಲಕಿಯರು, ಬಾಲಕನ ಮೇಲೆ ಪ್ರಕರಣ ದಾಖಲು
ಆಘಾತಕಾರಿ ಘಟನೆಯೊಂದರಲ್ಲಿ, ಉತ್ತರ ಪ್ರದೇಶದ ಪಿಲಿಭಿತ್ ಜಿಲ್ಲೆಯಲ್ಲಿ 15 ವರ್ಷದ ಬಾಲಕಿ ತಂದೆ ನೀಡಿದ ದೂರಿನ ಮೇರೆಗೆ ಪೊಲೀಸರು ಮೂವರು ಅಪ್ರಾಪ್ತ ಬಾಲಕಿಯರು ಮತ್ತು ಒಬ್ಬ ಬಾಲಕನ ವಿರುದ್ಧ 'ಅತ್ಯಾಚಾರ' ಪ್ರಕರಣ ದಾಖಲಿಸಿದ್ದಾರೆ.

ಚಿಪ್ಸ್ ಕದಿಯುವಾಗ ಸಿಕ್ಕಿಬಿದ್ದ ಅಪ್ರಾಪ್ತ ಬಾಲಕನನ್ನು ಥಳಿಸಿ, ಬೆತ್ತಲೆ ಮೆರವಣಿಗೆ; 7 ಮಂದಿ ಬಂಧನ
ಶಿಮ್ಲಾ ಜಿಲ್ಲೆಯ ಅಂಗಡಿಯೊಂದರಿಂದ ಚಿಪ್ಸ್ ಪ್ಯಾಕೆಟ್ ಕದಿಯುವಾಗ ಸಿಕ್ಕಿಬಿದ್ದ 15 ವರ್ಷದ ಬಾಲಕನನ್ನು ಥಳಿಸಿ, ಬೆತ್ತಲೆಗೊಳಿಸಿ ಮೆರವಣಿಗೆ ಮಾಡಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಈ ಸಂಬಂಧ ಏಳು ಮಂದಿಯನ್ನು ಬಂಧಿಸಲಾಗಿದೆ.

ಪಶ್ಚಿಮ ಬಂಗಾಳ: ಕಚ್ಚಾ ಬಾಂಬ್ ಸ್ಫೋಟ, ಒಂಬತ್ತು ವರ್ಷದ ಬಾಲಕನಿಗೆ ಗಾಯ
ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ಭಾನುವಾರ ನಡೆದ ಕಚ್ಚಾ ಬಾಂಬ್ ಸ್ಫೋಟದಲ್ಲಿ ಒಂಬತ್ತು ವರ್ಷದ ಬಾಲಕ ಗಾಯಗೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಂಗಳೂರು: ಉಯ್ಯಾಲೆಯಲ್ಲಿ ಆಡುತ್ತಿದ್ದ ಬಾಲಕನ ಕುತ್ತಿಗೆಗೆ ಹಗ್ಗ ಸಿಲುಕಿ ಸಾವು
ತನ್ನ ಮನೆಯ ಬಳಿ ಉಯ್ಯಾಲೆಯಲ್ಲಿ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಉಯ್ಯಾಲೆಯ ಹಗ್ಗ ಕುತ್ತಿಗೆಗೆ ಸಿಲುಕಿ 14 ವರ್ಷದ ಬಾಲಕ ಸಾವಿಗೀಡಾಗಿರುವ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

