ರಾಜ್ಯದಲಿತ ಬಾಲಕಿ ಮೇಲಿನ ಅತ್ಯಾಚಾರ ಬಗ್ಗೆ ಬಿಜೆಪಿ ಮೌನ: ಕಾಂಗ್ರೆಸ್ ಟೀಕೆ
ವಿಟ್ಲದಲ್ಲಿ ಅಪ್ರಾಪ್ತ ದಲಿತ ಬಾಲಕಿಯ ಮೇಲೆ ಬಲಪಂಥೀಯ ಸಂಘಟನೆಗಳ ಯುವಕರು ಭಾಗಿಯಾಗಿದ್ದಾರೆ ಎನ್ನಲಾದ ಸಾಮೂಹಿಕ ಅತ್ಯಾಚಾರದ ವಿರುದ್ಧ ಬಿಜೆಪಿ ಮತ್ತು ಅದರ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಧ್ವನಿ ಎತ್ತದಿರುವುದನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಪ್ರಧಾನ ಕಾರ್ಯದರ್ಶಿ ಕೃಪಾ ಅಮರ್ ಆಳ್ವ ಶನಿವಾರ ಪ್ರಶ್ನಿಸಿದ್ದಾರೆ.