ದೇಶಥಾಣೆ: ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರವೆಸಗಿದ ಆರೋಪ, ರೈಲಿನ ಮುಂದೆ ಹಾರಿ ಪ್ರಾಣ ಕಳೆದುಕೊಂಡ ತಂದೆ
ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ತನ್ನ 11 ವರ್ಷದ ಮಗಳ ಮೇಲೆ ಅತ್ಯಾಚಾರವೆಸಗಿದ ಆರೋಪದಡಿ ಪ್ರಕರಣ ದಾಖಲಾದ ಕೆಲವೇ ಗಂಟೆಗಳ ನಂತರ ಉಪನಗರ ರೈಲಿನ ಮುಂದೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.