ರಾಜ್ಯಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿಗೆ 1 ಸಾವಿರ ಕೋಟಿ ಕ್ರಿಯಾ ಯೋಜನೆ ರೂಪಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ
ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಸತಿ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದ ಸಿದ್ದರಾಮಯ್ಯ, ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿಗೆ 1 ಸಾವಿರ ಕೋಟಿ ರೂ. ಕ್ರಿಯಾ ಯೋಜನೆ ರೂಪಿಸಬೇಕು. ಕ್ರಿಯಾ ಯೋಜನೆ ತಯಾರಿಸುವ ಸಂದರ್ಭದಲ್ಲಿ ಅಲ್ಪಸಂಖ್ಯಾತರು ಹೆಚ್ಚಾಗಿ ನೆಲೆಸಿರುವ ಪ್ರದೇಶಗಳನ್ನು ಗುರುತಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.