MLA

ರಾಣೆ ಬೇರೆಯವರ ಮೇಲೆ ದಾಳಿ ಮಾಡಲು ಬಿಜೆಪಿ ನಿಯೋಜಿಸಿರುವ ನಾಯಿ: ನಾಲಿಗೆ ಹರಿಬಿಟ್ಟ ಶಿವಸೇನೆ ಶಾಸಕ
ಕೇಂದ್ರ ಸಚಿವ ನಾರಾಯಣ ರಾಣೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ನೀಡಿದ್ದ ಹೇಳಿಕೆಗೆ ಶಿವಸೇನೆ ಶಾಸಕರೊಬ್ಬರು ರಾಣೆ ವಿರುದ್ಧ ನಾಲಿಗೆ ಹರಿಯಬಿಟ್ಟಿದ್ದಾರೆ.

ಬಿಜೆಪಿ ಶಾಸಕ ಸತೀಶ್ ರೆಡ್ಡಿ ಮನೆ ಮುಂದೆ ನಿಲ್ಲಿಸಿದ್ದ ಕಾರುಗಳಿಗೆ ದುಷ್ಕರ್ಮಿಗಳಿಂದ ಬೆಂಕಿ: ಆರೋಪಿಗಳ ಪತ್ತೆಗೆ ಪೊಲೀಸರ ತಲಾಶ್
ನಗರದ ಬೊಮ್ಮನಹಳ್ಳಿ ಕ್ಷೇತ್ರದ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಮನೆ ಮುಂದೆ ನಿಲ್ಲಿಸಿದ್ದ ಐಷಾರಾಮಿ ಕಾರುಗಳಿಗೆ ಬೆಂಕಿ ಹಚ್ಚಿ ದುಷ್ಕರ್ಮಿಗಳು ಭಸ್ಮಗೊಳಿಸಿದ ಘಟನೆ ಗುರುವಾರ ನಸುಕಿನ ಜಾವ ನಡೆದಿದ್ದು ಬೊಮ್ಮನಹಳ್ಳಿ ಪೊಲೀಸರು ಎಸಿಪಿ ಮೈಕೋ ಲೇ ಔಟ್ ನೇತೃತ್ವದಲ್ಲಿ ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದಾರೆ.

ನಾಯಕರ ವಿರುದ್ಧದ ಕೈಬಿಡಲಾದ ಪ್ರಕರಣಗಳ ಪಟ್ಟಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ
ರಾಜ್ಯದ ಸಂಸದರು ಮತ್ತು ಶಾಸಕರ ಮೇಲೆ ದಾಖಲಾಗಿದ್ದ ಪ್ರಕರಣಗಳಲ್ಲಿ ಸೆಪ್ಟೆಂಬರ್ 16, 2020ರ ಅವಧಿಗೂ ಮುನ್ನ ಹಿಂಪಡೆಯಲಾದ ಪ್ರಕರಣಗಳ ಪಟ್ಟಿಯನ್ನು ಸಲ್ಲಿಸುವಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ವಿಧಾನಸಭಾ ಅಧಿವೇಶನದಲ್ಲಿ ಕರಾವಳಿ ಭಾಗದ ಶಾಸಕರಿಗೆ ತುಳು ಬಳಕೆಗೆ ಅವಕಾಶ ನೀಡಿ: ಸ್ಪೀಕರ್'ಗೆ ಶಾಸಕ ರಘುಪತಿ ಭಟ್ ಮನವಿ
ರಾಜ್ಯದಲ್ಲಿ ತುಳುವಿಗೆ ಅಧಿಕೃತ ಮಾನ್ಯತೆ ಸಿಗಬೇಕು. ಈ ನಿಟ್ಟಿನಲ್ಲಿ ವಿಧಾನಸಭಾ ಅಧಿವೇಶನದಲ್ಲಿ ಕರಾವಳಿ ಭಾಗದ ಶಾಸಕರಿಗೆ ತುಳುವಿನಲ್ಲೇ ಮಾತನಾಡಲು ಅವಕಾಶ ಕಲ್ಪಿಸುವಂತೆ ಉಡುಪಿ ಶಾಸಕ ರಘುಪತಿ ಭಟ್ ಅವರು ಸ್ಪೀಕರ್ ಅವರಿಗೆ ಮನವಿ ಮಾಡಿಕೊಂಡಿದ್ದಾರೆ.

ಶಾಸಕರು ದೆಹಲಿಗೆ ಹೋದರೆ ತಪ್ಪೇನೂ ಇಲ್ಲ: ನಳಿನ್ ಕುಮಾರ್ ಕಟೀಲ್
ಬಿಜೆಪಿ ಶಾಸಕರು ನವದೆಹಲಿಗೆ ಭೇಟಿ ನೀಡುವುದರಲ್ಲಿ ತಪ್ಪೇನೂ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಗುರುವಾರ ಹೇಳಿದ್ದಾರೆ.

ಬಂಡಾಯ ಶಾಸಕರಿಗೆ ಪಕ್ಷ ತಕ್ಕ ಪಾಠ ಕಲಿಸಲಿದೆ: ಬಿಎಸ್'ವೈ ಪರ ಈಶ್ವರಪ್ಪ ಬ್ಯಾಟಿಂಗ್
ಬಿಜೆಪಿಯಲ್ಲಿ ಹೆಚ್ಚಾಗಿ ಮಾತನಾಡುತ್ತಿರುವ ಬಸನಗೌಡಪಾಟೀಲ ಯತ್ನಾಳ್, ಸಿ.ಪಿ.ಯೋಗೇಶ್ವರ್, ರೇಣುಕಾಚಾರ್ಯ ಹಾಗೂ ಇತರರಿಗೆ ಯಾವಾಗ, ಹೇಗೆ ಬುದ್ಧಿ ಕಲಿಸಬೇಕು ಎಂಬುದು ಪಕ್ಷಕ್ಕೆ ಗೊತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರು ಗುರುವಾರ ಹೇಳಿದ್ದಾರೆ.

ಬಿಎಸ್'ವೈ ವಿರುದ್ಧ ವಾಗ್ದಾಳಿ: ಬಂಡಾಯ ಶಾಸಕರಿಗೆ ತಿರುಗೇಟು ನೀಡಲು ರೇಣುಕಾಚಾರ್ಯ ಮುಂದು
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಸ್ವಪಕ್ಷದ ಕೆಲ ಶಾಸಕರು ವಾಗ್ದಾಳಿ ನಡೆಸುತ್ತಿರುವ ಹಿನ್ನೆಲೆಯಲ್ಲಿ ಈ ಕುರಿತು ಗುಡುಗಿರುವ ಶಾಸಕ ರೇಣುಕಾಚಾರ್ಯ ಅವರು, ಬಂಡಾಯ ಶಾಸಕರಿಗೆ ತಿರುಗೇಟು ನೀಡಲು ಮುಂದಾಗಿದ್ದಾರೆ.

ದ್ರೋಹ ಮಾಡಿದವರ ಕ್ಷಮಿಸಲಾಗದು, ಮರಳಿ ಪಕ್ಷಕ್ಕೆ ಅಂತಹವರ ಸೇರ್ಪಡೆ ಸಾಧ್ಯವಿಲ್ಲ: ಸಿದ್ದರಾಮಯ್ಯ
ಪದೇ ಪದೇ ದ್ರೋಹ ಮಾಡುವವರನ್ನು ಕ್ಷಮಿಸಲು ಸಾಧ್ಯವಿಲ್ಲ. ಅಂತಹವರನ್ನು ಪಕ್ಷಕ್ಕೆ ಮರಳಿ ಸೇರಿಸಿಕೊಳ್ಳಬಾರದು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಪಕ್ಷ ಬಿಟ್ಟು ಹೋದವರ ಮರುಸೇರ್ಪಡೆ ಸಾಧ್ಯವಿಲ್ಲ; ವಿಪಕ್ಷ ನಾಯಕ ಸಿದ್ದರಾಮಯ್ಯ
ಪಕ್ಷ ಬಿಟ್ಟು ಬಿಜೆಪಿ ಸೇರಿದ 14 ಮಂದಿಯನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳುವುದಾಗಿ ಯಾರೂ ಹೇಳಿಲ್ಲ. ಈ ಕುರಿತು ಅಧ್ಯಕ್ಷರ ಜೊತೆ ಮಾತನಾಡುವುದಾಗಿ ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದ್ದಾರೆ.

