ರಾಜಕೀಯನಾಯಕರ ಎದೆಯಲ್ಲಿ ಅಂತಸ್ಥವಾದ ಹಿಟ್ಲರ್ನನ್ನು ಪ್ರದರ್ಶನಕ್ಕೆ ಇಟ್ಟಿರಿ; ಸ್ಪೀಕರ್ ಸ್ಥಾನ ಆಳುವವರ ಆಸೆಗೆ ಗೋಣು ಆಡಿಸುವ ಅಡ್ಡೆಯಲ್ಲ!
ರಾಜ್ಯದ ಶ್ರೇಷ್ಠ ಸ್ಪೀಕರ್ ಎಂದು ಮಾದರಿ ಹೆಜ್ಜೆ ಬಿಟ್ಟು ಹೋದ ದಿವಂಗತ ವೈಕುಂಠ ಬಾಳಿಗರ ಜಿಲ್ಲೆಯಿಂದ ಬಂದ ನೀವು ಅವರದೇ ಮಾರ್ಗದಲ್ಲಿ ನಡೆಯಬಹುದೆಂದು ವೈಯಕ್ತಿಕವಾಗಿ ನಾನು ಭಾವಿಸಿದ್ದೆ. ಆದರೆ, ನೀವು ನಮ್ಮೆಲ್ಲರ ನಂಬಿಕೆಯನ್ನು ಹುಸಿಗೊಳಿಸಿ ವಿಪಕ್ಷಗಳ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನ ನಡೆಸಿದಿರಿ.