Model code of conduct violation

ಚುನಾವಣೆಯಿಂದ ಪ್ರಧಾನಿ ಮೋದಿ ನಿರ್ಬಂಧಿಸುವಂತೆ ಕೋರಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ
ಪ್ರಚಾರದ ವೇಳೆ ದ್ವೇಷಪೂರಿತ ಭಾಷಣಗಳನ್ನು ಮಾಡಿದ ಮತ್ತು ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಚುನಾವಣೆಯಿಂದ ನಿರ್ಬಂಧಿಸುವಂತೆ ಕೋರಿ ಸಲ್ಲಿಸಲಾದ ಮನವಿಯನ್ನು ಪರಿಗಣಿಸಲು ಸುಪ್ರೀಂ ಕೋರ್ಟ್ ಮಂಗಳವಾರ ನಿರಾಕರಿಸಿದೆ.

ಮೈಸೂರು-ಕೊಡಗು ಬಿಜೆಪಿ ಅಭ್ಯರ್ಥಿ ಯದುವೀರ್ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು
ಮಾದರಿ ನೀತಿ ಸಂಹಿತೆ ಉಲ್ಲಂಘಿಸಿ ಸಾಮಾಜಿಕ ಜಾಲತಾಣದ ಪ್ರಭಾವಿಗಳಿಗೆ ಹಣ ನೀಡಿದ್ದಾರೆ ಎಂಬ ಆರೋಪದ ಮೇಲೆ ಕೆಪಿಸಿಸಿ ಬಿಜೆಪಿಯ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.

ಮಾದರಿ ನೀತಿ ಸಂಹಿತೆ ಉಲ್ಲಂಘನೆ; ರಾಹುಲ್ ಗಾಂಧಿ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಆರ್‌ಎಸ್ ದೂರು
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಮಾದರಿ ನೀತಿ ಸಂಹಿತೆ ಉಲ್ಲಂಘನೆ: 26.68 ಕೋಟಿ ರೂ. ನಗದು, 33 ಕೋಟಿ ರೂ. ಮೌಲ್ಯದ ಮದ್ಯ ವಶ
ಕರ್ನಾಟಕದಲ್ಲಿ ಮಾರ್ಚ್ 16 ರಿಂದ ಮಾದರಿ ನೀತಿ ಸಂಹಿತೆ ಜಾರಿಗೆ ಬಂದ ನಂತರ 1,205 ಪ್ರಕರಣಗಳನ್ನು ದಾಖಲಿಸಲಾಗಿದ್ದು, 26.68 ಕೋಟಿ ರೂಪಾಯಿ ನಗದು, 33 ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ಬುಧವಾರ ತಿಳಿಸಿದೆ.

ಮಾದರಿ ನೀತಿ ಸಂಹಿತೆ ಉಲ್ಲಂಘನೆ: 27,62,47,214 ರೂ. ಮೌಲ್ಯದ ವಸ್ತುಗಳ ವಶ, 205 ಎಫ್‌ಐಆರ್ ದಾಖಲು
ರಾಜ್ಯದಲ್ಲಿ 2024ರ ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಚುನಾವಣಾ ಫ್ಲೈಯಿಂಗ್ ಸ್ಕ್ವಾಡ್‌ಗಳು, ಸ್ಥಾಯೀ ಕಣ್ಗಾವಲು ತಂಡಗಳು ಮತ್ತು ಪೊಲೀಸರು ನಗದು, ಮದ್ಯ, ಡ್ರಗ್ಸ್, ಅಮೂಲ್ಯ ಲೋಹಗಳು ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಂಡ ಬಗ್ಗೆ 205 ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ.

ತೆಲಂಗಾಣ ಡಿಜಿ, ಐಜಿಪಿ ಅಮಾನತುಗೊಳಿಸಿ ಚುನಾವಣಾ ಆಯೋಗ ಆದೇಶ!
ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇರೆಗೆ ತೆಲಂಗಾಣದ ಡಿಜಿ ಮತ್ತು ಐಜಿಪಿ ಅಂಜನಿ ಕುಮಾರ್ ಅವರನ್ನು ಅಮಾನತುಗೊಳಿಸಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ.

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಜೆಪಿ ನಡ್ಡಾ ವಿರುದ್ಧದ ತನಿಖೆಗೆ ಕರ್ನಾಟಕ ಹೈಕೋರ್ಟ್ ತಡೆ
ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ವಿರುದ್ಧ ದಾಖಲಾಗಿದ್ದ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದ ತನಿಖೆಗೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

