ರಾಜ್ಯಚುನಾವಣಾ ಅಕ್ರಮ ತಡೆಗೆ ನಿಖಿಲ್ ಕುಮಾರಸ್ವಾಮಿ ಮನವಿ: ಆಕ್ಷೇಪಣೆ ಸಲ್ಲಿಸಲು ಆಯೋಗಕ್ಕೆ 2 ವಾರ ಕಾಲಾವಕಾಶ
ಚುನಾವಣಾ ಅಕ್ರಮ ಮತ್ತು ಆಮಿಷಗಳಿಗೆ ಕಡಿವಾಣ ಹಾಕಲು ಮಾದರಿ ನೀತಿ ಸಂಹಿತೆ ಜೊತೆಗೆ ಕಠಿಣ ನಿಯಮಗಳನ್ನು ರೂಪಿಸಲು ಭಾರತೀಯ ಚುನಾವಣಾ ಆಯೋಗಕ್ಕೆ ನಿರ್ದೇಶಿಸುವಂತೆ ಕೋರಿ ಜೆಡಿಎಸ್ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹಾಗೂ ಇನ್ನಿತರರು ಸಲ್ಲಿಸಿರುವ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಚುನಾವಣಾ ಆಯೋಗಕ್ಕೆ ಹೈಕೋರ್ಟ್ 2 ವಾರ ಕಾಲಾವಕಾಶ ನೀಡಿದೆ.