ದೇಶ'ಬಾಬಾ ರಾಮದೇವ್ ಜನರಲ್ಲಿ ಸುಳ್ಳು ಮಾಹಿತಿಗಳನ್ನು ಹಬ್ಬಿಸುತ್ತಿದ್ದಾರೆ': ಯೋಗ ಗುರು ವಿರುದ್ಧ ಪಶ್ಚಿಮ ಬಂಗಾಳದಲ್ಲಿ ದೂರು ದಾಖಲು
ಆಧುನಿಕ ವೈದ್ಯಕೀಯ ಪದ್ಧತಿಯಲ್ಲಿ ಕೋವಿಡ್ ಸೋಂಕನ್ನು ಗುಣಪಡಿಸಲು ಸಾಧ್ಯವಾಗದಿರುವುದರಿಂದ ವೈದ್ಯರು ಸೇರಿದಂತೆ ಹಲವು ಕೋವಿಡ್ ಸೋಂಕಿತರು ಬಲಿಯಾಗುತ್ತಿದ್ದಾರೆ ಎಂದು ಹೇಳಿಕೆ ನೀಡಿದ ಯೋಗ ಗುರು ರಾಮದೇವ್ ವಿರುದ್ಧ ಭಾರತೀಯ ವೈದ್ಯಕೀಯ ಸಂಘದ ಪಶ್ಚಿಮ ಬಂಗಾಳ ವಿಭಾಗ ಪೊಲೀಸರಿಗೆ ದೂರು ಸಲ್ಲಿಸಿದೆ.