Modi government

ಮೋದಿ ಸರ್ಕಾರ ಮಾತು ತಪ್ಪಿದರೆ ಪದ್ಮಭೂಷಣ ವಾಪಸ್: ಅಣ್ಣಾ ಹಜಾರೆ ಎಚ್ಚರಿಕೆ
ಒಂದು ವೇಳೆ ಮೋದಿ ಸರ್ಕಾರ ಮಾತು ತಪ್ಪಿದರೆ ನನಗೆ ನೀಡಿದ್ದ ಪದ್ಮಭೂಷಣ ಪ್ರಶಸ್ತಿಯನ್ನು ರಾಷ್ಟ್ರಪತಿಗಳಿಗೆ ವಾಪಸ್ ನೀಡುತ್ತೇನೆ ಎಂದು ಖ್ಯಾತ ಭ್ರಷ್ಟಾಚಾರ ವಿರೋಧಿ ಹೋರಾಟಗಾರ, ಸಾಮಾಜಿಕ ಕಾರ್ಯಕರ್ತ ಹಾಗೂ ಹಿರಿಯ ಗಾಂಧಿವಾದಿ ಅಣ್ಣಾ ಹಜಾರೆ ಹೇಳಿದ್ದಾರೆ.

ಸಿಬಿಐ-ಬಂಗಾಳ ಪೊಲೀಸ್ ಹೈಡ್ರಾಮ; ಕೇಂದ್ರ ಸರ್ಕಾರದ ವಿರುದ್ಧ ಧರಣಿ ಕುಳಿತ ಸಿಎಂ ಮಮತಾ ಬ್ಯಾನರ್ಜಿ
ಪಶ್ಚಿಮ ಬಂಗಾಳದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಡುವಿನ ತಿಕ್ಕಾಟ ತಾರಕಕ್ಕೇರಿದ್ದು, ಕೇಂದ್ರ ಸರ್ಕಾರದ ವಿರುದ್ಧ ಸ್ವತಃ ಸಿಎಂ ಮಮತಾ ಬ್ಯಾನರ್ಜಿ ಅಹೋರಾತ್ರಿ ಧರಣಿ ನಡೆಸಿದ್ದಾರೆ.

ಮೋದಿ ವರ್ಸಸ್ ದೀದಿ: ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಸಿಬಿಐ ನಿರ್ಧಾರ
ಶಾರದಾ ಚಿಟ್ ಫಂಡ್ ಮತ್ತು ರೋಸ್ ವ್ಯಾಲಿ ಪಾಂಝಿ ಹಗರಣದ ವಿಚಾರಣೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಸರ್ಕಾರ ತಮಗೆ ತನಿಖೆ ನಡೆಸಲು ಸಹಕಾರ ನೀಡುತ್ತಿಲ್ಲ. ಹೀಗಾಗಿ ನಾವು ಮಮತಾ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಲಿದ್ದೇವೆ ಎಂದು ಸಿಬಿಐ ಹೇಳಿದೆ.

ಮೋದಿ vs ದೀದಿ: ಕೇಂದ್ರ ಸರ್ಕಾರದ ದೌರ್ಜನ್ಯದ ವಿರುದ್ಧ ಸತ್ಯಾಗ್ರಹ - ಮಮತಾ
ನರೇಂದ್ರ ಮೋದಿ ಸರ್ಕಾರದ ದೌರ್ಜನ್ಯಗಳ ವಿರುದ್ಧ ಸತ್ಯಾಗ್ರಹ ನಡೆಸುತ್ತಿರುವುದಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ...

ಸರ್ವಾಧಿಕಾರಿ ಧೋರಣೆಯಿಂದ ಈ ದೇಶಕ್ಕೆ ಅಪಾಯ: ಕೇಂದ್ರದ ವಿರುದ್ಧ ವಿಪಕ್ಷಗಳ ಕಿಡಿ
ಕೇಂದ್ರ ಸರ್ಕಾರದ 'ಸರ್ವಾಧಿಕಾರಿ' ಧೋರಣೆಯಿಂದಾಗಿ ಈ ದೇಶದ ಭವಿಷ್ಯ ಅಪಾಯಕ್ಕೆ ಸಿಲುಕಿದೆ ಎಂದು ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ.

ಸಿಬಿಐ ವರ್ಸಸ್ ಕೋಲ್ಕತಾ ಪೊಲೀಸ್; ಕೇಂದ್ರದ ವಿರುದ್ಧ ಸಿಎಂ ಮಮತಾ ಧರಣಿ, ವಿಪಕ್ಷಗಳಿಂದ ದೀದಿಗೆ ಬೆಂಬಲ
ಸಿಬಿಐ ವಿರುದ್ಧ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ನಡೆಸುತ್ತಿರುವ ಪ್ರತಿಭಟನೆಗೆ ವಿಪಕ್ಷ ನಾಯಕರು ಬೆಂಬಲ ಸೂಚಿಸಿದ್ದು, ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಕೆಲಸ ಮಾಡಿದರೆ ರಾಜಕೀಯ ಷಡ್ಯಂತ್ರ, ಕೆಲಸ ಮಾಡದಿದ್ದರೆ ಪಂಜರದ ಗಿಳಿ: ನಿರ್ಮಲಾ ಸೀತಾರಾಮನ್ ವ್ಯಂಗ್ಯ
ಸಿಬಿಐ ವಿರುದ್ಧ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ನಡೆಸುತ್ತಿರುವ ಪ್ರತಿಭಟನೆಯನ್ನು ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ತೀವ್ರವಾಗಿ ವಿರೋಧಿಸಿದ್ದಾರೆ.

'ಸಂವಿಧಾನ ರಕ್ಷಿಸಿ': ಪಶ್ಟಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಧರಣಿಯ ಕುರಿತು ತಿಳಿಯಬೇಕಾದ ಅಂಶಗಳು!
ಪಶ್ಚಿಮ ಬಂಗಾಳದಲ್ಲಿ ಕೇಂದ್ರ-ರಾಜ್ಯ ಸರ್ಕಾರಗಳ ನಡುವಿನ ತಿಕ್ಕಾಟ ತಾರಕಕ್ಕೇರಿದೆ. ಅಂತೆಯೇ ಕೇಂದ್ರ ಸರ್ಕಾರದ ವಿರುದ್ದ ಸಿಎಂ ಮಮತಾ ಬ್ಯಾನರ್ಜಿ ಸಂವಿಧಾನ ರಕ್ಷಿಸಿ ಎಂಬ ಘೋಷವಾಕ್ಯದಡಿಯಲ್ಲಿ ಅಹೋರಾತ್ರಿ ಧರಣಿ ಕೂಡ ಆರಂಭಿಸಿದ್ದಾರೆ.

ಸಿಮಿ ಸಂಘಟನೆ ವಿರುದ್ಧದ ನಿಷೇಧ ಮತ್ತೆ 5 ವರ್ಷ ವಿಸ್ತರಣೆ
ದೇಶದಲ್ಲಿ ನಡೆದ ಹಲವು ವಿಧ್ವಂಸಕ ಕೃತ್ಯಗಳಲ್ಲಿ ಭಾಗಿಯಾಗಿರುವ ಆರೋಪ ಹೊತ್ತಿರುವ ಕುಖ್ಯಾತ ಉಗ್ರ ಸಂಘಟನೆ ಸಿಮಿ (ಸ್ಟುಡೆಂಟ್ಸ್ ಇಸ್ಲಾಮಿಕ್ ಮೂವ್‌ಮೆಂಟ್ ಆಫ್ ಇಂಡಿಯಾ) ಸಂಘಟನೆ ಮೇಲಿನ ನಿಷೇಧವನ್ನು ಕೇಂದ್ರ ಸರ್ಕಾರ ಮತ್ತೆ ಐದು ವರ್ಷಗಳ ಕಾಲ ವಿಸ್ತರಣೆ ಮಾಡಿದೆ.

