Modi government

ವೈಎಸ್ ಆರ್ ಕಾಂಗ್ರೆಸ್ ಅವಿಶ್ವಾಸ ನಿರ್ಣಯಕ್ಕೆ ಶಿವಸೇನೆ ಬೆಂಬಲ?
ವಿಭಜಿತ ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡದ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನಗೊಂಡಿರುವ ಟಿಡಿಪಿ ಮತ್ತು ವೈಎಸ್ ಆರ್ ಕಾಂಗ್ರೆಸ್ ಪಕ್ಷದ ಅವಿಶ್ವಾಸ ನಿರ್ಣಯಕ್ಕೆ ಶಿವಸೇನೆ ಬೆಂಬಲ ನೀಡುವ ಸಾಧ್ಯತೆ ಇದೆ.

ಮೋದಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗೆ ವೈಎಸ್ ಆರ್ ಕಾಂಗ್ರೆಸ್ ನೋಟಿಸ್
ಮೋದಿ ಸರ್ಕಾರದ ವಿರುದ್ಧ ತಿರುಗಿ ಬಿದ್ದಿರುವ ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್ ಆರ್ ಕಾಂಗ್ರೆಸ್ ಪಕ್ಷ ಮೋದಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗೆ ನೋಟಿಸ್ ನೀಡಿದೆ.

ಮೋದಿ ಸರ್ಕಾರದ ಅಂತ್ಯಕ್ಕೆ ಕ್ಷಣಗಣನೆ ಆರಂಭ: ಸಿಎಂ ಸಿದ್ದರಾಮಯ್ಯ
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರದ ಅಂತ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ ಎಂದು....

ಕುಂಭ ಮೇಳದೊಳಗೆ ಶೇ.80ರಷ್ಟು ಗಂಗಾ ನದಿ ಸ್ವಚ್ಛ: ನಿತಿನ್ ಗಡ್ಕರಿ
ಮುಂಬರುವ ಕುಂಭಮೇಳ ಕಾರ್ಯಕ್ರಮದೊಳಗೆ ಗಂಗಾನದಿಯನ್ನು ಶೇ.80ರಷ್ಟು ಶುದ್ಧೀಕರಿಸುವ ಗುರಿ ಹೊಂದಲಾಗಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

75ನೇ ಸ್ವಾತಂತ್ರ್ಯದಿನಾಚರಣೆ ವೇಳೆಗೆ ದೇಶದ ರೈತರ ಆದಾಯ ದ್ವಿಗುಣ: ಬಜೆಟ್ ಭಾಷಣದಲ್ಲಿ ಜೇಟ್ಲಿ ಹೇಳಿಕೆ
ಭಾರತದ 75ನೇ ಸ್ವಾತಂತ್ರ್ಯ ದಿನಾಚರಣೆ ವೇಳೆ ದೇಶದ ರೈತರ ಆದಾಯ ದ್ವಿಗುಣವಾಗಲಿದೆ ಎಂದು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.

ಕೇಂದ್ರ ಬಜೆಟ್ 2018: ಸಂಪ್ರದಾಯ ಮುರಿದು ಮೊದಲ ಬಾರಿಗೆ ಹಿಂದಿಯಲ್ಲಿ ಬಜೆಟ್ ಮಂಡನೆ
ಕೇಂದ್ರ ಬಜೆಟ್ 2018ರ ಮಂಡನೆಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಕೇಂದ್ರ ವಿತ್ತ ಸಚಿವ ಹೊಸದೊಂದು ದಾಖಲೆಗೆ ಸಾಕ್ಷಿಯಾಗಲಿದ್ದು, ಇದೇ ಮೊದಲ ಬಾರಿಗೆ ಕೇಂದ್ರ ಬಜೆಟ್ ಅನ್ನು ಹಿಂದಿ ಭಾಷೆಯಲ್ಲಿ ಮಂಡನೆ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

ಕೇಂದ್ರ ಬಜೆಟ್ 2018: ಜಿಎಸ್ ಟಿ ವ್ಯಾಪ್ತಿಗೆ ರಿಯಲ್ ಎಸ್ಟೇಟ್, ತೈಲ, ವಿದ್ಯುತ್ ಸೇರ್ಪಡೆ?
ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದ ರಿಯಲ್ ಎಸ್ಟೇಟ್, ತೈಲ, ವಿದ್ಯುತ್ ಅನ್ನು ಕೂಡ ಜಿಎಸ್ ಟಿ ವ್ಯಾಪ್ತಿಗೆ ಸೇರ್ಪಡೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಕೇಂದ್ರ ಬಜೆಟ್ 2018: ಮೋದಿ ಸರ್ಕಾರದಿಂದ ಉದ್ಯೋಗ ಸೃಷ್ಟಿಗೆ ಒತ್ತು ಸಿಗಲಿದೆಯೇ?
2018ನೇ ಸಾಲಿನ ಕೇಂದ್ರ ಬಜೆಟ್ ಹಲವು ನಿರೀಕ್ಷೆಗಳನ್ನು ಹುಟ್ಟು ಹಾಕಿದ್ದು, ಪ್ರಮುಖವಾಗಿ ದೇಶದಲ್ಲಿ ಕೇಂದ್ರ ಸರ್ಕಾರ ನಿರೀಕ್ಷಿತ ಮಟ್ಟದಲ್ಲಿ ಉದ್ಯೋಗ ಸೃಷ್ಟಿ ಮಾಡುತ್ತಿಲ್ಲ ಎಂಬ ಆರೋಪಗಳೂ ಕೂಡ ಕೇಳಿಬಂದಿದೆ.

'ಜನಪರ' ಬಜೆಟ್ ಕುರಿತಂತೆ ಅರುಣ್ ಜೇಟ್ಲಿ ಮುಂದಿರುವ ಪ್ರಮುಖ ಸವಾಲುಗಳು!
ಗುರುವಾರ ಮಂಡನೆಯಾಗುತ್ತಿರುವ ಕೇಂದ್ರದ ಎನ್ ಡಿಎ ಸರ್ಕಾರದ ಕೊನೆಯ ಪೂರ್ಣ ಪ್ರಮಾಣದ ಬಜೆಟ್ ಇದಾಗಿದ್ದು, ಈ ನಿಟ್ಟಿನಲ್ಲಿ ಹೇಳುವುದಾದರೆ ಈ ಬಾರಿಯ ಬಜೆಟ್ ನಲ್ಲಿ ಕೇಂದ್ರ ಸರ್ಕಾರ ಜನರ ಓಲೈಕೆ ಮಾಡುವ ಪ್ರಯತ್ನಕ್ಕೆ ಕೈಹಾಕುವ ಸಾಧ್ಯತೆ ಕಡಿಮೆ ಎನ್ನಲಾಗಿದೆ.

