Modi government

ಪ್ರತಿಪಕ್ಷಗಳ ಗದ್ದಲದ ನಡುವೆ ಲೋಕಸಭೆಯಲ್ಲಿ ಸಂವಿಧಾನ ತಿದ್ದುಪಡಿ ಮಸೂದೆ ಅಂಗೀಕಾರ
ಪ್ರತಿಪಕ್ಷಗಳ ಪ್ರತಿಭಟನೆಯ ನಡುವೆಯೇ ರಾಜ್ಯಗಳಿಗೆ ತಮ್ಮದೇ ಆದ ಒಬಿಸಿ ಪಟ್ಟಿಗಳನ್ನು ಮಾಡುವ ಅಧಿಕಾರ ನೀಡುವ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಸೋಮವಾರ ಲೋಕಸಭೆಯಲ್ಲಿ ಅಂಗೀಕರಿಸಲಾಗಿದೆ.

ಸಂವಿಧಾನದ ತಿದ್ದುಪಡಿ ಮಸೂದೆ: ಮೋದಿ ಸರ್ಕಾರಕ್ಕೆ ವಿಪಕ್ಷಗಳಿಂದ ಬೆಂಬಲ!
ಸಂವಿಧಾನಕ್ಕೆ 127 ನೇ ತಿದ್ದುಪಡಿ ಮಸೂದೆ- ಹಿಂದುಳಿದ ವರ್ಗಗಳನ್ನು ನೋಟಿಫೈ ಮಾಡುವುದಕ್ಕೆ ರಾಜ್ಯ ಸರ್ಕಾರಗಳಿಗೆ ಸಂಪೂರ್ಣ ಅಧಿಕಾರ ನೀಡುವ ಮಸೂದೆ ಅಂಗೀಕಾರವನ್ನು ಬೆಂಬಲಿಸುವುದಾಗಿ ವಿಪಕ್ಷಗಳು ಘೋಷಿಸಿವೆ.

ಆ ಒಂದು ವಿಶೇಷ ಮಸೂದೆಗಾಗಿ ಅಪರೂಪದ ಆಡಳಿತ-ವಿಪಕ್ಷಗಳ ಒಗ್ಗಟ್ಟಿಗೆ ಸಾಕ್ಷಿಯಾಗಲಿದೆ ಸಂಸತ್!
ಪ್ರತಿಪಕ್ಷಗಳ ನಿರಂತರ ಪ್ರತಿಭಟನೆಯ ಪರಿಣಾಮವಾಗಿ ಬಹುಪಾಲು ವ್ಯರ್ಥಗೊಳ್ಳುತ್ತಿರುವ ಸಂಸತ್ ನ ಮುಂಗಾರು ಅಧಿವೇಶನದ ಕಲಾಪ ಈ ವಾರ ಸುಗಮವಾಗಿ ನಡೆಯುವ ನಿರೀಕ್ಷೆ ಇದೆ.

ಬರೀ ಒಣ ಪ್ರಚಾರ, ಲಸಿಕೆ ಮಾತ್ರ ಇಲ್ಲ: ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಕಟು ಟೀಕೆ
ಕೋವಿಡ್ ಲಸಿಕೆ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಮೋದಿ ಸರ್ಕಾರ ಬರೀ ಒಣ ಪ್ರಚಾರ ಮಾಡುತ್ತಿದೆ, ಲಸಿಕೆ ಮಾತ್ರ ಸಿಗುತ್ತಿಲ್ಲ ಎಂದು ಟೀಕಿಸಿದ್ದಾರೆ.

ಬ್ಲೂ ಟಿಕ್ ಗಾಗಿ ಮೋದಿ ಸರ್ಕಾರ ಹೋರಾಟ: ಟ್ವಿಟರ್ ವಿವಾದ ಕುರಿತು ರಾಹುಲ್ ಹೇಳಿಕೆ!
ಕೇಂದ್ರ ಸರ್ಕಾರದ ವಿರುದ್ಧ ಭಾನುವಾರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಮೋದಿ ಸರ್ಕಾರ ಬ್ಲೂ ಟಿಕ್ ವೊಂದಕ್ಕಾಗಿ ಹೋರಾಟ ಮಾಡುತ್ತಿದೆ. ಕೋವಿಡ್ ಲಸಿಕೆ ಪಡೆಯಲು ಬಯಸುವ ಜನರು ಸ್ವಾವಲಂಬಿಯಾಗಬೇಕಾದ ಅಗತ್ಯವಿದೆ ಎಂದಿದ್ದಾರೆ.

ದೆಹಲಿಗೆ ಹೆಚ್ಚುವರಿ ಕೋವಾಕ್ಸಿನ್ ನೀಡಲು ಭಾರತ್ ಬಯೋಟೆಕ್ ನಕಾರ, ಮೋದಿ ಸರ್ಕಾರ ಲಸಿಕೆ ಪೂರೈಕೆ ನಿಯಂತ್ರಿಸುತ್ತಿದೆ: ಸಿಸೋಡಿಯಾ
ರಾಷ್ಟ್ರ ರಾಜಧಾನಿಗೆ "ಹೆಚ್ಚುವರಿ" ಕೋವಾಕ್ಸಿನ್ ಡೋಸ್ ನೀಡಲು ಸಾಧ್ಯವಿಲ್ಲ ಎಂದು ಲಸಿಕೆ ತಯಾರಕ ಭಾರತ್ ಬಯೋಟೆಕ್ ದೆಹಲಿ ಸರ್ಕಾರಕ್ಕೆ ತಿಳಿಸಿದೆ ಎಂದು ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಬುಧವಾರ ಹೇಳಿದ್ದಾರೆ.

ಭಾರತದ ಲಸಿಕೆ ನೀತಿ ವಿಶ್ವದಲ್ಲೇ ಅತ್ಯಂತ ಕೆಟ್ಟದ್ದು: ಒವೈಸಿ
ಪ್ರಪಂಚದಲ್ಲಿ ಅತ್ಯಂತ ಕೆಟ್ಟ ಲಸಿಕೆ ನೀತಿಗೆ ಯಾವುದಾದರೂ ಪುರಸ್ಕಾರ ಲಭಿಸುವುದಾದರೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ನೀಡಬೇಕು ಎಂದು ಎಐಐಎಂ ಅಧ್ಯಕ್ಷ, ಲೋಕಸಭಾ ಸದಸ್ಯ ಅಸದುದ್ದೀನ್ ಒವೈಸಿ ವ್ಯಂಗ್ಯವಾಡಿದ್ದಾರೆ.

ರಸಗೊಬ್ಬರದ ಬೆಲೆ ಶೇ. 60 ರಷ್ಟು ಏರಿಕೆ ಗಾಯದ ಮೇಲೆ ಬರೆ ಎಳೆದಂತೆ: ಸಿದ್ದರಾಮಯ್ಯ
ಕೃಷಿ ವಿರೋಧಿ ಕಾಯ್ದೆಗಳ ಮೂಲಕ ರೈತರ ಬದುಕನ್ನು ಶಾಶ್ವತವಾಗಿ ಘಾಸಿಮಾಡಿರುವ ಕೇಂದ್ರದ ಬಿಜೆಪಿ ಸರ್ಕಾರ, ಇದೀಗ ರಸಗೊಬ್ಬರದ ಬೆಲೆ ಏರಿಸಿ ಅವರ ಗಾಯದ ಮೇಲೆ ಬರೆ ಎಳೆದಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.

ದೇಶದಲ್ಲಿ ಪ್ರಜಾಪ್ರಭುತ್ವ ಇಲ್ಲ, ಅದು ಕಲ್ಪನೆಯಲ್ಲಿ ಮಾತ್ರ ಇದೆ: ಮೋದಿ ಸರ್ಕಾರದ ವಿರುದ್ಧ ರಾಹುಲ್ ವಾಗ್ದಾಳಿ
"ದೇಶದಲ್ಲಿ ಪ್ರಜಾಪ್ರಭುತ್ವ ಇಲ್ಲ" ಮತ್ತು ಅದು "ಕಲ್ಪನೆಯಲ್ಲಿ ಮಾತ್ರ" ಅಸ್ತಿತ್ವದಲ್ಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

