Modi Surname

ಮೋದಿ ಉಪನಾಮ ಪ್ರಕರಣ: ರಾಹುಲ್ ಗಾಂಧಿ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ
ಎಲ್ಲಾ ಕಳ್ಳರಿಗೂ ಮೋದಿ ಸರ್‌ನೇಮ್ ಇದೆ' ಎಂಬ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಂಸದ ರಾಹುಲ್ ಗಾಂಧಿ ಅವರು ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆ ನಡಸಲು ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದೆ.

ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ಅನರ್ಹತೆ: ಬಾಯಿಗೆ ಕಪ್ಪು ಪಟ್ಟಿ ಧರಿಸಿ ಕಾಂಗ್ರೆಸ್ ನಾಯಕರ ಮೌನ ಪ್ರತಿಭಟನೆ
'ಮೋದಿ ಉಪನಾಮ' ವಿವಾದ ಹಿನ್ನೆಲೆಯಲ್ಲಿ ಕೋರ್ಟ್ ಆದೇಶ ಬಂದ ನಂತರ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರ ಸಂಸದ ಸದಸ್ಯತ್ವ ರದ್ಧತಿ ಹಿಂದೆ ಬಿಜೆಪಿ ಪಿತೂರಿ ಇದೆ, ಬಿಜೆಪಿಯಿಂದ ಸೇಡಿನ ರಾಜಕಾರಣವಾಗುತ್ತಿದೆ ಎಂದು ಆರೋಪಿಸಿ ದೇಶಾದ್ಯಂತ ರಾಜ್ಯ ಕೇಂದ್ರಗಳಲ್ಲಿ ಕಾಂಗ್ರೆಸ್ ನಾಯಕರು ಮೌನ ಪ್ರತಿಭಟನೆ ಹಮ್ಮಿಕೊಂಡಿದ್ದು, ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಸಿಎಂ ಸಿದ್ದ

ರಾಹುಲ್ ಗಾಂಧಿ ವಿರುದ್ಧ ಗುಜರಾತ್ ಹೈಕೋರ್ಟ್ ತೀರ್ಪು: ಸುಪ್ರೀಂ ಕೋರ್ಟ್ ಮೊರೆ ಹೋಗಲು ಕಾಂಗ್ರೆಸ್ ನಿರ್ಧಾರ
ಮೋದಿ ಉಪನಾಮದ ಹೇಳಿಕೆಗೆ ಸಂಬಂಧಿಸಿದಂತೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಮೇಲಿನ ಸಂಸದ ಸ್ಥಾನ ಅನರ್ಹತೆ ಶಿಕ್ಷೆಗೆ ತಡೆ ನೀಡಲು ಗುಜರಾತ್ ಹೈಕೋರ್ಟ್ ಶುಕ್ರವಾರ ನಿರಾಕರಿಸಿದ್ದು ಇದರಿಂದ ಕಾಂಗ್ರೆಸ್ ನಾಯಕನಿಗೆ ತೀವ್ರ ಹಿನ್ನಡೆಯಾಗಿದೆ.

ಮಾನನಷ್ಟ ಮೊಕದ್ದಮೆಯಲ್ಲಿ ತಪ್ಪಿತಸ್ಥನೆಂದು ತೀರ್ಪು: ತಡೆಯಾಜ್ಞೆ ಕೋರಿ ರಾಹುಲ್ ಗಾಂಧಿ ಸಲ್ಲಿಸಿರುವ ಅರ್ಜಿ ವಿಚಾರಣೆ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ವಿಚಾರಣೆಯನ್ನು ಗುಜರಾತ್ ರಾಜ್ಯದ ಸೂರತ್ ನಗರದ ಸೆಷನ್ಸ್ ನ್ಯಾಯಾಲಯವು ಗುರುವಾರ ಆರಂಭಿಸಿದೆ. ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆಗೆ ತಡೆಯಾಜ್ಞೆ ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾಡಿದ ಮನವಿಯ ವಿಚಾರಣೆಯನ್ನು ನ್ಯಾಯಾಲಯ ಆರಂಭಿಸಿದೆ.

'ಕಳ್ಳರ ಹೆಸರೆಲ್ಲ ಮೋದಿ ಎಂದೇ ಇರುತ್ತದೆ ಏಕೆ' ಎಂದಿದ್ದ ರಾಹುಲ್ ಗಾಂಧಿ ದೋಷಿ; ಸೂರತ್ ನ್ಯಾಯಾಲಯ ತೀರ್ಪು, 2 ವರ್ಷ ಜೈಲು ಶಿಕ್ಷೆ
ಕಳ್ಳರ ಹೆಸರೆಲ್ಲ ಮೋದಿ ಎಂದೇ ಇರುತ್ತದೆ ಏಕೆ ಎಂದು ಪ್ರಶ್ನಿಸಿ ಪರೋಕ್ಷವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ಅವಹೇಳನ ಮಾಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ದೋಷಿ ಎಂದು ಗುಜರಾತ್ನ ಸೂರತ್ ನ್ಯಾಯಾಲಯವು ಮಹತ್ವದ ತೀರ್ಪು ನೀಡಿದೆ.

