Modi

ಬೆಲೆ ಏರಿಕೆ: BJP, ಪ್ರಧಾನಿ ಮೋದಿಯತ್ತ ಬೊಟ್ಟು ಮಾಡಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ
ರಾಜ್ಯ ಸರ್ಕಾರದ ಬಳಿ ಅಭಿವೃದ್ಧಿಗೆ ಹಣ ಇಲ್ಲ ಎಂದು ಬಿಜೆಪಿಯವರು ಸುಳ್ಳು ಹೇಳುತ್ತಿದ್ದಾರೆ. ಇಂದು ಒಂದೇ ದಿನ 140 ಕೋಟಿ ಅಭಿವೃದ್ಧಿ ಕಾರ್ಯಗಳನ್ನು ಎಚ್.ಡಿ.ಕೋಟೆ ಜನಕ್ಕೆ ಅರ್ಪಿಸಿದ್ದೇವೆ. ಈ ಬಾರಿ 8000 ಕೋಟಿ ಶಾಸಕರ ಅನುದಾನ, ಅಭಿವೃದ್ಧಿ ಕಾರ್ಯಗಳಿಗೆ ಮೀಸಲಿಟ್ಟಿದ್ದೇವೆ.

ಇಂಡೋ-ಪಾಕ್ ಕದನದಲ್ಲಿ 3ನೇ ವ್ಯಕ್ತಿ ಹಸ್ತಕ್ಷೇಪಕ್ಕೆ ಅವಕಾಶ ನೀಡಿದ್ದು ದುರಾದೃಷ್ಟಕರ, ಇನ್ನು ಮುಂದೆ ಮೋದಿ ವಿಶ್ವಗುರು ಅಲ್ಲ: ಬಿಕೆ. ಹರಿಪ್ರಸಾದ್ ವಾಗ್ದಾಳಿ
ಮೋದಿ ಮೂರನೇ ವ್ಯಕ್ತಿಯ ಹಸ್ತಕ್ಷೇಪಕ್ಕೆ ಅವಕಾಶ ನೀಡಿದ್ದು ದುರದೃಷ್ಟಕರ ಸಂಗತಿ. ನಾವು ಈ ಮೊದಲು ಶಿಮ್ಲಾ ಒಪ್ಪಂದ ಮಾಡಿಕೊಂಡಿದ್ದೆವು, ಇದು ಬೇರೆ ದೇಶಗಳು ತಲೆಹಾಕದಂತೆ ಮಾಡಿಕೊಂಡ ಒಪ್ಪಂದವಾಗಿತ್ತು. ಇದೆಲ್ಲವನ್ನು ಗಾಳಿಗೆ ತೂರಿದ್ದಾರೆ.

ಅಮೆರಿಕಾ ಮಧ್ಯಸ್ಥಿಕೆಯಲ್ಲಿ ಕದನ ವಿರಾಮ ಆಗಿದೆ ಎನ್ನುವುದು ತಪ್ಪು; ಮೋದಿ-ಸೇನಾಪಡೆ ಶಕ್ತಿ ಮುಂದೆ ಪಾಕ್ ಮಂಡಿಯೂರಿದೆ: HDK
ಮೋದಿ ಅವರ ಧೃಢ ನಾಯಕತ್ವ ಹಾಗೂ ನಮ್ಮ ಹೆಮ್ಮೆಯ ಸೇನಾಪಡೆಗಳ ಶಕ್ತಿಯ ಮುಂದೆ ಪಾಕಿಸ್ತಾನ ಮಂಡಿಯೂರಿದೆ. ಭಾರತದ ಎಲ್ಲ ಕಡೆ ಮೇಲುಗೈ ಸಾಧಿಸಿದೆ.

ಪಾಕ್ ಜೊತೆಗೆ ಯುದ್ಧದ ಕಾರ್ಮೋಡ ನಡುವೆ ಭಾರತ-ಯುಕೆ ಮುಕ್ತ ವ್ಯಾಪಾರ ಒಪ್ಪಂದ ಅಂತಿಮ!
ಭಾರತ ಮತ್ತು ಯುಕೆ ಮಹತ್ವಾಕಾಂಕ್ಷೆಯ ಮತ್ತು ಪರಸ್ಪರ ಲಾಭದಾಯಕ ಮುಕ್ತ ವ್ಯಾಪಾರ ಒಪ್ಪಂದವನ್ನು ಯಶಸ್ವಿಯಾಗಿ ಮುಕ್ತಾಯಗೊಳಿಸಿವೆ. ಇದು ಐತಿಹಾಸಿಕ ಮೈಲುಗಲ್ಲು ಆಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಪ್ರಕಟಿಸಿದ್ದಾರೆ.

ಜಾತಿ ಗಣತಿಯಲ್ಲಿ ತೆಲಂಗಾಣ ಮಾದರಿ ಅಳವಡಿಸಿಕೊಳ್ಳಿ, ಮೀಸಲಾತಿ ಮೇಲಿನ ಶೇ 50 ರಷ್ಟು ಮಿತಿ ತೆಗೆದುಹಾಕಿ: ಪ್ರಧಾನಿ ಮೋದಿಗೆ ಖರ್ಗೆ ಆಗ್ರಹ
ಮೀಸಲಾತಿ ಮೇಲಿನ ಶೇ 50 ರಷ್ಟು ಮಿತಿಯನ್ನು ತೆಗೆದುಹಾಕಿ, ಆರ್ಟಿಕಲ್ 15(5) ತಕ್ಷಣ ಜಾರಿಗೆ ತಂದು ಎಸ್‌ಸಿ, ಎಸ್‌ಟಿ, ಮತ್ತು ಒಬಿಸಿ ಸಮುದಾಯಗಳಿಗೆ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಮೀಸಲಾತಿಯನ್ನು ನೀಡಬೇಕು.

ಗೋವಾ ಸರ್ಕಾರಕ್ಕೆ ಹೆದರಿ ಪ್ರಧಾನಿ ಮೋದಿ ಮಹದಾಯಿಗೆ ಅನುಮತಿ ನೀಡುತ್ತಿಲ್ಲ: ಸಿಎಂ ಸಿದ್ದರಾಮಯ್ಯ ಆರೋಪ
ಪ್ರಹ್ಲಾದ್ ಜೋಶಿ ಮೊದಲು ಮಹದಾಯಿ ಬಗ್ಗೆ ಮಾತಾಡಲಿ. ಮಹದಾಯಿ ಯೋಜನೆಗೆ ಎನ್ವಿರಾನ್ಮೆಂಟ್ ಕ್ಲಿಯರೆನ್ಸ್ ಯಾಕೆ ಕೊಡಿಸುತ್ತಿಲ್ಲಾ..?

ದೇಶದ ಏಕತೆಗಾಗಿ ಮೋದಿ ಸರ್ಕಾರ ಕೈಗೊಳ್ಳುವ ಯಾವುದೇ ಕ್ರಮಕ್ಕೆ ಕಾಂಗ್ರೆಸ್ ಬೆಂಬಲ: ಮಲ್ಲಿಕಾರ್ಜುನ ಖರ್ಗೆ
ದೇಶದ ಏಕತೆಗಾಗಿ ಮೋದಿ ಸರ್ಕಾರ ಕೈಗೊಳ್ಳುವ ಯಾವುದೇ ಕ್ರಮಕ್ಕೆ ಕಾಂಗ್ರೆಸ್ ಬೆಂಬಲ ನೀಡಲಿದೆ. ಆದರೆ, ಕೇಂದ್ರ ಸರ್ಕಾರ ಎಲ್ಲಾ ರಾಜಕೀಯ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕ್ರಮ ಕೈಗೊಳ್ಳಬೇಕು.

RSS, ಜನಸಂಘ ಆರಂಭದಿಂದಲೂ ಮೀಸಲಾತಿಯನ್ನು ವಿರೋಧಿಸುತ್ತಲೇ ಬಂದಿದೆ: ಖರ್ಗೆ
ನಾವು ಜಾತಿ ಜನಗಣತಿಯನ್ನು ವಿರೋಧಿಸುತ್ತಿರುವುದಾದರೆ ಎರಡು ವರ್ಷಗಳ ಹಿಂದೆ ಜಾತಿ ಜನಗಣತಿಯನ್ನು ಕೋರಿ ಕೇಂದ್ರಕ್ಕೆ ಏಕೆ ಪತ್ರ ಬರೆಯುತ್ತಿದ್ದೆವು? ಬಿಜೆಪಿ ಜನರ ಕಲ್ಯಾಣದ ಬಗ್ಗೆ ಮಾತ್ರ ಕಾಳಜಿ ವಹಿಸುತ್ತದೆ ಎಂದು ನಟಿಸುವ ಮೂಲಕ ಜನರಲ್ಲಿ ಗೊಂದಲ ಸೃಷ್ಟಿಸುತ್ತಿದೆ.

ಮೋದಿ ಚಿತ್ರ ವಿರೂಪಗೊಳಿಸಿ ಪೋಸ್ಟ್: ವಿವಾದ ಬೆನ್ನಲ್ಲೇ 'ಗಾಯಬ್' ಟ್ವೀಟ್ ಡಿಲೀಟ್ ಮಾಡಿದ ಕಾಂಗ್ರೆಸ್
‘ಬಂಧ್‌ಗಲಾ ಕುರ್ತಾ, ಚುಡಿದಾರ್ ಪೈಜಾಮಾ ಮತ್ತು ಕಪ್ಪು ಪಾದರಕ್ಷೆಯ ಮೇಲೆ 'ಗಾಯಾಬ್' (ಕಾಣೆಯಾಗಿದ್ದಾರೆ) ಎಂದು ಬರೆದಿರುವ ಪೋಸ್ಟರ್ ಅನ್ನು ಕಾಂಗ್ರೆಸ್ ಹಂಚಿಕೊಂಡಿತ್ತು. ಇದಕ್ಕೆ ಪಾಕಿಸ್ತಾನದ ಮಾಜಿ ಸಚಿವ ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದರು.

