Monsoon session

ಮುಂಗಾರು ಅಧಿವೇಶನ: ಮುಂದುವರಿದ ವಿರೋಧ ಪಕ್ಷಗಳ ಗದ್ದಲ; ಆಗಸ್ಟ್ 7ಕ್ಕೆ ರಾಜ್ಯಸಭೆ ಕಲಾಪ ಮುಂದೂಡಿಕೆ
ಮಹಿಳೆಯರ ಮೇಲಿನ ದೌರ್ಜನ್ಯದ ವಿಚಾರವಾಗಿ ಪ್ರತಿಪಕ್ಷಗಳ ಸಂಸದರು ಮತ್ತು ಆಡಳಿತ ಪಕ್ಷದ ಸದಸ್ಯರ ಗದ್ದಲದ ನಡುವೆ, ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್ ಅವರು ಸದನವನ್ನು ಆಗಸ್ಟ್ 7 ಕ್ಕೆ ಮುಂದೂಡಿದರು.

ಮಣಿಪುರ ವಿವಾದ; ಪ್ರತಿಪಕ್ಷಗಳ ಗದ್ದಲದ ನಡುವೆಯೇ ಲೋಕಸಭೆ ಕಲಾಪ ನಾಳೆಗೆ ಮುಂದೂಡಿಕೆ
ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರದ ಕುರಿತು ವಿರೋಧ ಪಕ್ಷಗಳ ಸದಸ್ಯರ ನಿರಂತರ ಪ್ರತಿಭಟನೆಯ ನಡುವೆಯೇ ಲೋಕಸಭೆಯ ಕಲಾಪವನ್ನು ಗುರುವಾರ ದಿನದ ಮಟ್ಟಿಗೆ ಮುಂದೂಡಲಾಯಿತು.

ರಾಜ್ಯಸಭೆ: ಮುಂಗಾರು ಅಧಿವೇಶನದ ಉಳಿದ ಅವಧಿಗೆ ಎಎಪಿಯ ಸಂಜಯ್ ಸಿಂಗ್ ಅಮಾನತು
'ಅಶಿಸ್ತಿನ ವರ್ತನೆಗಾಗಿ' ಮುಂಗಾರು ಅಧಿವೇಶನದ ಉಳಿದ ಅವಧಿಗೆ ಆಮ್ ಆದ್ಮಿ ಪಕ್ಷದ (ಎಎಪಿ) ಸಂಸದ ಸಂಜಯ್ ಸಿಂಗ್ ಅವರನ್ನು ರಾಜ್ಯಸಭೆಯಿಂದ ಸೋಮವಾರ ಅಮಾನತುಗೊಳಿಸಲಾಗಿದೆ. ಸದನದ ನಾಯಕ ಪಿಯೂಷ್ ಗೋಯಲ್ ಅವರು ಸಂಜಯ್ ಸಿಂಗ್ ಅವರನ್ನು ಅಮಾನತುಗೊಳಿಸುವ ಪ್ರಸ್ತಾಪವನ್ನು ಮಂಡಿಸಿದರು.

ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಸೋನಿಯಾ ಗಾಂಧಿ ಮುಖಾಮುಖಿ; ಕೆಲಕಾಲ ಮಾತುಕತೆ
ಮುಂಗಾರು ಅಧಿವೇಶನದ ಮೊದಲ ದಿನವಾದ ಗುರುವಾರ ಲೋಕಸಭೆಯ ಸಭಾಂಗಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮುಖಾಮುಖಿಯಾದರು. ಈ ವೇಳೆ ಅವರು ಕೆಲಕಾಲ ಮಾತುಕತೆ ನಡೆಸಿದರು.

ಮುಂಗಾರು ಅಧಿವೇಶನ: 31 ಮಸೂದೆಗಳ ಅಂಗೀಕಾರ ಪಡೆಯುವತ್ತ ಕೇಂದ್ರದ ಗಮನ, ವಿಪಕ್ಷಗಳ ಬಳಿ ಇದೆ ಮಹತ್ವದ ರಾಷ್ಟ್ರೀಯ ವಿಷಯಗಳು!
ಮುಂಗಾರು ಅಧಿವೇಶನ ಪ್ರಾರಂಭವಾಗುವುದಕ್ಕೂ ಮುನ್ನ ಪ್ರತಿಪಕ್ಷಗಳ INDIA ಮೈತ್ರಿಕೂಟ ರಚನೆಯಾಗಿದ್ದು, ಕೇಂದ್ರ ಸರ್ಕಾರವನ್ನು ಅಧಿವೇಶನದಲ್ಲಿ ಇಕ್ಕಟ್ಟಿಗೆ ಸಿಲುಕಿಸಲು ಪ್ರತಿಪಕ್ಷಗಳು ಸದನದಲ್ಲೂ ಒಗ್ಗೂಡಲಿವೆ.

ನಾಳೆ ವಿಪಕ್ಷಗಳ ಮೈತ್ರಿಕೂಟದ ಮೊದಲ ಸಭೆ; ಸಂಸತ್ತಿನ ಮುಂಗಾರು ಅಧಿವೇಶನದ ಕಾರ್ಯತಂತ್ರ ಕುರಿತು ಚರ್ಚೆ
ಸಂಸತ್ತಿನ ಮುಂಗಾರು ಅಧಿವೇಶನಕ್ಕಾಗಿ ಜಂಟಿ ಕಾರ್ಯತಂತ್ರವನ್ನು ರೂಪಿಸಲು ವಿರೋಧ ಪಕ್ಷಗಳ ಮೈತ್ರಿಕೂಟವಾದ INDIAದ ಮೊದಲ ಸಭೆ ಗುರುವಾರ ನಡೆಯಲಿದೆ. ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಕಚೇರಿಯಲ್ಲಿ ಸಭೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ಮುಂಗಾರು ಅಧಿವೇಶನ: ಜುಲೈ 19 ರಂದು ಸರ್ವಪಕ್ಷ ಸಭೆ ಕರೆದ ಕೇಂದ್ರ ಸರ್ಕಾರ
ಸಂಸತ್ತಿನ ಮುಂಗಾರು ಅಧಿವೇಶನ ಜುಲೈ 20 ರಂದು ಪ್ರಾರಂಭವಾಗಲಿದ್ದು, ಕೇಂದ್ರ ಸರ್ಕಾರ ಬುಧವಾರ ಸರ್ವಪಕ್ಷ ಸಭೆ ಕರೆದಿದೆ.

ಸಂಸತ್ತಿನ ಮುಂಗಾರು ಅಧಿವೇಶನ: ಜುಲೈ 19ರಂದು ಸರ್ವಪಕ್ಷ ಸಭೆ ಕರೆದ ಕೇಂದ್ರ ಸರ್ಕಾರ
ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಕೈಗೆತ್ತಿಕೊಳ್ಳಬಹುದಾದ ಶಾಸಕಾಂಗ ವ್ಯವಹಾರಗಳು ಮತ್ತು ಪ್ರಮುಖ ವಿಷಯಗಳ ಕುರಿತು ಚರ್ಚಿಸಲು ಕೇಂದ್ರ ಸರಕಾರ ಜು.19ರಂದು ಸರ್ವಪಕ್ಷ ಸಭೆಯನ್ನು ಕರೆದಿದೆ.

ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಹೊಸ ದತ್ತಾಂಶ ಸಂರಕ್ಷಣಾ ಮಸೂದೆ ಮಂಡನೆ: ಸುಪ್ರೀಂ ಕೋರ್ಟ್‌ಗೆ ಕೇಂದ್ರ
ಹೊಸ ದತ್ತಾಂಶ ಸಂರಕ್ಷಣಾ ಮಸೂದೆ ಸಿದ್ಧವಾಗಿದೆ ಮತ್ತು ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಅದನ್ನು ಮಂಡಿಸಲಾಗುವುದು ಎಂದು ಕೇಂದ್ರ ಸರ್ಕಾರ ಮಂಗಳವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

