ದೇಶತಮಿಳುನಾಡು: ಮಹಿಳೆಯರಿಗೆ ಮಾಸಿಕ 1,000 ರೂ. ಒದಗಿಸುವ ಯೋಜನೆಗೆ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಚಾಲನೆ
ಕರ್ನಾಟಕದಲ್ಲಿ ಜಾರಿಯಲ್ಲಿರುವಂತೆಯೇ ಮಹಿಳೆಯರಿಗೆ ಮಾಸಿಕ ಆರ್ಥಿಕ ನೆರವು ಯೋಜನೆ ಒದಗಿಸುವ ಯೋಜನೆ ನೆರೆಯ ತಮಿಳುನಾಡಿನಲ್ಲಿಯೂ ಚಾಲನೆಗೊಂಡಿದೆ. ದ್ರಾವಿಡ ಐಕಾನ್ ಸಿ ಎನ್ ಅಣ್ಣಾದೊರೈ ಅವರ ಜನ್ಮದಿನವಾದ ಇಂದು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಮಹಿಳೆಯರಿಗೆ ಮಾಸಿಕ 1,000 ರೂ. ಆರ್ಥಿಕ ನೆರವು ಒದಗಿಸುವ ಯೋಜನೆಗೆ ಚಾಲನೆ ನೀಡಿದರು.