moral policing

ಲವ್ ಜಿಹಾದ್ ಆರೋಪಿಸಿ ನೈತಿಕ ಪೊಲೀಸ್ ಗಿರಿ: ಹಿಂದೂಪರ ಸಂಘಟನೆಯ 7 ಮಂದಿ ಬಂಧನ
ಲವ್ ಜಿಹಾದ್ ಆರೋಪಿಸಿ ನೈತಿಕ ಪೊಲೀಸ್ ಗಿರಿ ನಡೆಸಿದ್ದ ಆರೋಪದ ಮೇರೆಗೆ ಹಿಂದೂಪರ ಸಂಘಟನೆಯ 7 ಮಂದಿ ಕಾರ್ಯಕರ್ತರನ್ನು ಬಂಧಿಸಲಾಗಿದೆ.

ಮಂಗಳೂರು ಪಣಂಬೂರು ಬೀಚ್ ನಲ್ಲಿ ನೈತಿಕ ಪೊಲೀಸ್ ಗಿರಿ: ಮೂವರ ಬಂಧನ
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಹೊರವಲಯದಲ್ಲಿರುವ ಪಣಂಬೂರು ಬೀಚ್‌ನಲ್ಲಿ ವರದಿಯಾದ ನೈತಿಕ ಪೊಲೀಸ್‌ಗಿರಿ ಮತ್ತು ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಪೊಲೀಸರು ಸೋಮವಾರ ಮೂವರನ್ನು ಬಂಧಿಸಿದ್ದಾರೆ.

ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ: ಅಪ್ರಾಪ್ತ ಸೇರಿ ಮೂವರ ಬಂಧನ
ಮಂಗಳೂರಿನ ಕದ್ರಿ ಪಾರ್ಕ್‌ನಲ್ಲಿ ಶುಕ್ರವಾರ ಮತ್ತೊಂದು 'ನೈತಿಕ ಪೊಲೀಸ್‌ಗಿರಿ' ಪ್ರಕರಣ ವರದಿಯಾಗಿದ್ದು, ಅನ್ಯಕೋಮಿನ ಯುವಕ, ಯುವತಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು...

ನೈತಿಕ ಪೊಲೀಸ್ ಗಿರಿ: ಧಾರವಾಡದಲ್ಲಿ ವ್ಯಕ್ತಿಗೆ ಥಳಿತ, ಆರೋಪ ನಿರಾಕರಿಸಿದ ಪೊಲೀಸರು
ರಾಜ್ಯದಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ಆರೋಪ ಕೇಳಿಬಂದಿದ್ದು, ಧಾರವಾಡದಲ್ಲಿ ವ್ಯಕ್ತಿಗೆ ಥಳಿಸಿದ ಆರೋಪ ಕೇಳಿಬಂದಿದೆ.

ಹಾವೇರಿ: ನೈತಿಕ ಪೊಲೀಸ್‌ಗಿರಿ ಪ್ರಕರಣಕ್ಕೆ ಹೊಸ ಟ್ವಿಸ್ಟ್; ಸಂತ್ರಸ್ತೆಯನ್ನು ಬಲವಂತವಾಗಿ ಕರೆದೊಯ್ದು ಗ್ಯಾಂಗ್ ರೇಪ್
ಆತಂಕಕಾರಿ ಬೆಳವಣಿಗೆಯಲ್ಲಿ, ಹಾನಗಲ್‌ನಲ್ಲಿ ನಡೆದಿದ್ದ ನೈತಿಕ ಪೊಲೀಸ್‌ಗಿರಿ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ತನ್ನನ್ನು ಬಲವಂತವಾಗಿ ಹೋಟೆಲ್‌ನಿಂದ ಕರೆದೊಯ್ದ ಯುವಕರ ಗುಂಪು ತನ್ನ ಮೇಲೆ ಪದೇ ಪದೆ ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತೆ ಗುರುವಾರ ವಿಡಿಯೋ ಮೂಲಕ ದೂರಿದ್ದಾರೆ.

ಹಾನಗಲ್'ನಲ್ಲಿ ನೈತಿಕ ಪೊಲೀಸ್‌ಗಿರಿ: ಅನ್ಯಕೋಮಿನ ಮಹಿಳೆಯೊಂದಿಗೆ ಸಿಕ್ಕಿಬಿದ್ದ ವ್ಯಕ್ತಿಗೆ ಥಳಿತ, ಇಬ್ಬರ ಬಂಧನ
ಹಾವೇರಿ ಜಿಲ್ಲೆಯ ಹಂಗಲ್‌ನಲ್ಲಿ ನೈತಿಕ ಪೊಲೀಸ್‌ಗಿರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಅನ್ಯ ಕೋಮಿನ ಮಹಿಳೆಯೊಂದಿಗೆ ಲಾಡ್ಜ್ಗೆ ಬಂದಿದ್ದ ಯುವಕನಿಗೆ 12 ಮಂದಿಯಿಂದ ತಂಡವೊಂದು ಥಳಿಸಿರುವ ಘಟನೆ ಜ.7ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ: ಯುವ ಜೋಡಿಗೆ ಕಿರುಕುಳ ನೀಡಿದ ಮೂವರ ಬಂಧನ
ಮಂಗಳೂರು ನಗರದ ಉಪಾಹಾರ ಗೃಹವೊಂದರಲ್ಲಿ ಯುವ ಜೋಡಿಗೆ ಗುರುತಿನ ಚೀಟಿ ಕೇಳಿ ಕಿರುಕುಳ ನೀಡಲಾಗಿದ್ದು, ನೈತಿಕ ಪೊಲೀಸ್‌ಗಿರಿ ನಡೆಸಿದ ಆರೋಪದಲ್ಲಿ ಮೂವರು ಯುವಕರನ್ನು ಬಂಧಿಸಲಾಗಿದೆ.

ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ, ಸಹೋದ್ಯೋಗಿಗಳಿಗೆ ಕಿರುಕುಳ
ಕಡಲತಡಿ ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ ಪ್ರಕರಣ ವರದಿಯಾಗಿದೆ. ಇಬ್ಬರು ಅಪರಿಚಿತ ಹಿಂದುತ್ವವಾದಿಗಳು ಅನ್ಯ ಧರ್ಮಕ್ಕೆ ಸೇರಿದ ಯುವಕ, ಯುವತಿಗೆ ಕಿರುಕುಳ ನೀಡಿದ್ದಾರೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ಸಂಜೆ ಈ ಘಟನೆ ನಡೆದಿದೆ.

ಕಠಿಣ ಎಚ್ಚರಿಕೆ ನಡುವೆಯೂ ನೈತಿಕ ಪೊಲೀಸ್‌ಗಿರಿ: ಹಿಂದೂ ಬಾಲಕಿಯೊಂದಿಗಿದ್ದ ಇಬ್ಬರು ಮುಸ್ಲಿಂ ಹುಡುಗರಿಗೆ ತರಾಟೆ
ಸಿದ್ದರಾಮಯ್ಯ ಸರ್ಕಾರದ ಕಟ್ಟುನಿಟ್ಟಿನ ಎಚ್ಚರಿಕೆ ಮತ್ತು ವಿಶೇಷ ವಿಭಾಗ ಸ್ಥಾಪನೆಯ ನಡುವೆಯೂ, ಕೋಮು ಸೂಕ್ಷ್ಮ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ನೈತಿಕ ಪೊಲೀಸ್‌ಗಿರಿ ಪ್ರಕರಣ ವರದಿಯಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

