ರಾಜ್ಯಶವಾಗಾರದಲ್ಲಿ ಕೋವಿಡ್ ಶವಗಳು ಕೊಳೆತ ಪ್ರಕರಣ: ಪಾಲಿಕೆ, ಆಸ್ಪತ್ರೆ ವಿರುದ್ಧ ಕುಟುಂಬಸ್ಥರ ಆಕ್ರೋಶ
ರಾಜಾಜಿನಗರ ಇಎಸ್ಐ ಆಸ್ಪತ್ರೆಯ ಶವಾಗಾರದಲ್ಲಿ ಕೊರೋನಾ ಸೋಂಕಿನಿಂದ ಮೃತಪಟ್ಟ ಇಬ್ಬರ ಮೃತದೇಹಗಳು 16 ತಿಂಗಳ ನಂತರ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಆಸ್ಪತ್ರೆ ಹಾಗೂ ಪಾಲಿಕೆ ಅಧಿಕಾರಿಗಳ ವಿರುದ್ಧ ಮೃತರ ಕುಟುಂಬದ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.