MP Pratap Simha

ಸಂಸದ ಪ್ರತಾಪ್ ಸಿಂಹ ಎಳಸು, ರಾಜಕೀಯ ಪ್ರಬುದ್ಧತೆ ಇಲ್ಲ; ಹೊಂದಾಣಿಕೆ ಮಾಡಿಕೊಂಡವರ ಹೆಸರು ಬಹಿರಂಗಪಡಿಸಲಿ: ಸಿದ್ದರಾಮಯ್ಯ
ರಾಜ್ಯ ರಾಜಕಾರಣದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನ ಕೆಲವು ಪ್ರಮುಖ ನಾಯಕರ ಮಧ್ಯೆ ಹೊಂದಾಣಿಕೆ ರಾಜಕೀಯ(Adjustment politics) ನಡೆಯುತ್ತಿದೆ ಎಂಬ ಬಗ್ಗೆ ಸಂಸದ ಪ್ರತಾಪ್ ಸಿಂಹ ಮತ್ತು ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಾಜಿ ಶಾಸಕ ಸಿ ಟಿ ರವಿ ನೀಡಿರುವ ಹೇಳಿಕೆ ಭಾರೀ ಮಟ್ಟದಲ್ಲಿ ಚರ್ಚೆಯಾಗುತ್ತಿದೆ.

ಗೃಹ ಲಕ್ಷ್ಮಿ ಯೋಜನೆಯಿಂದ 'ಅತ್ತೆ ಸೊಸೆ ಜಗಳ' ಪ್ರತಾಪ್ ಸಿಂಹ ರಾಜ್ಯದ ಮಹಿಳೆಯರ ಕ್ಷಮೆ ಕೇಳಬೇಕು- ಕಾಂಗ್ರೆಸ್ ಒತ್ತಾಯ
ಗೃಹಲಕ್ಷ್ಮೀ ಯೋಜನೆ ಕುರಿತು ಸಂಸದ ಪ್ರತಾಪ್ ಸಿಂಹ ನೀಡಿರುವ ಹೇಳಿಕೆ ವಿರುದ್ಧ ಕಾಂಗ್ರೆಸ್ ಟೀಕಾ ಪ್ರಹಾರ ನಡೆಸಿದೆ.

ಸಿದ್ರಾಮಣ್ಣ ಪರವಾಗಿ ಪ್ರಚಾರಕ್ಕಿಳಿದ ಶಿವಣ್ಣ! ಅವರವರ ಭಾವ ಭಕುತಿಗೆ- ಪ್ರತಾಪ್ ಸಿಂಹ ಕಿಡಿ
ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೂ ಕೇವಲ ಐದು ದಿನಗಳಷ್ಟೇ ಬಾಕಿಯಿರುವಂತೆಯೇ ಪ್ರಚಾರದ ಕಣ ಮತ್ತಷ್ಟು ತಾರಕ್ಕೇರಿದೆ. ಪ್ರಮುಖ ರಾಜಕೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳ ನೇತಾರರು ತಮ್ಮ ಪಕ್ಷದ ಅಭ್ಯರ್ಥಿಗಳ ಪರವಾಗಿ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ.

ಬಿಜೆಪಿ ಸಮಾವೇಶದಲ್ಲಿ ಕೂಲ್ ಡ್ರಿಂಕ್ಸ್ ವಾಹನಕ್ಕೆ ಮುಗಿಬಿದ್ದ ಮಂದಿ: ವ್ಯಾಪಾರಿಯ ನಷ್ಟ ಭರಿಸಿ ಮಾನವೀಯತೆ ಮೆರೆದ ಪ್ರತಾಪ್ ಸಿಂಹ
ಬಿಜೆಪಿ ಸಮಾವೇಶದಲ್ಲಿ ಕೂಲ್‌ಡ್ರಿಂಕ್ಸ್, ನೀರು ಕೊಂಡೊಯ್ದ ಜನ: ವ್ಯಾಪಾರಿಯ ನಷ್ಟ ಭರಿಸಿ ಮಾನವೀಯತೆ ಮೆರೆದ ಪ್ರತಾಪ್ ಸಿಂಹ

ವರುಣಾ: ಹತಾಶೆ ಮತ್ತು ಸೋಲಿನ ಭಯದಲ್ಲಿ ಸಿದ್ದರಾಮಯ್ಯ ಬೆಂಬಲಿಗರಿಂದ ಕುಕೃತ್ಯ; ವಿ ಸೋಮಣ್ಣ- ಸಂಸದ ಪ್ರತಾಪ್ ಸಿಂಹ ಕಿಡಿ
ಮೈಸೂರು ಜಿಲ್ಲೆಯ ವರುಣಾ ಕ್ಷೇತ್ರದ ಸಿದ್ದರಾಮಯ್ಯನಹುಂಡಿಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ನಡೆದ ಗಲಾಟೆ ಪ್ರಕರಣ ಬಗ್ಗೆ ವರುಣಾ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಪ್ರತಿಕ್ರಿಯಿಸಿ ಬೇಸರ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯ ಅವರ ಅಣ್ಣನ ಮನೆ ಮುಂದೆಯೇ ಈ ಗಲಾಟೆ ನಡೆದಿದೆ ಎಂದು ಆರೋಪಿಸಿದ್ದಾರೆ.

ಸಿದ್ದರಾಮಯ್ಯಗೆ ಪುಕ್ಕಲುತನ; ಸೊಸೆ, ಮೊಮ್ಮಗನನ್ನು ಮುಂದಿಟ್ಟುಕೊಂಡು ಪ್ರಚಾರ: ಪ್ರತಾಪ ಸಿಂಹ ವಾಗ್ದಾಳಿ
ತೀವ್ರ ಕುತೂಹಲ ಕೆರಳಿಸಿರುವ ಮೈಸೂರು ಜಿಲ್ಲೆ ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಸೋಲಿಸಿ, ಬಿಜೆಪಿ ಅರಳಿಸುವ ನಿಟ್ಟಿನಲ್ಲಿ ಸಂಸದ ಪ್ರತಾಪ್ ಸಿಂಹ ಕಾರ್ಯೋನ್ಮುಖರಾಗಿದ್ದಾರೆ. ಗುರುವಾರ ಕ್ಷೇತ್ರದ ರಂಗಾಚಾರಿ ಹುಂಡಿ ಮತ್ತು ರಂಗನಾಥಪುರದಲ್ಲಿ ವಿ. ಸೋಮಣ್ಣ ಪರವಾಗಿ ಬಿರುಸಿನ ಮತಯಾಚಿಸಿದರು.

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ: ಪ್ರತಾಪ್ ಸಿಂಹ, ಹೆಚ್.ಸಿ.ಮಹಾದೇವಪ್ಪ ನಡುವೆ ಇದೀಗ ಕ್ರೆಡಿಟ್ ವಾರ್
ಬೆಂಗಳೂರು- ಮೈಸೂರು ನಡುವಿನ ರಾಜ್ಯ ಹೆದ್ದಾರಿಯನ್ನು ದಶಪಥದ ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮಾರ್ಪಡಿಸಿದ ವಿಚಾರದಲ್ಲಿ ಇದೀಗ ಸಂಸದ ಪ್ರತಾಪ್ ಸಿಂಹ ಹಾಗೂ ಮಾಜಿ ಲೋಕೋಪಯೋಗಿ ಸಚಿವ ಡಾ. ಹೆಚ್.ಸಿ. ಮಹಾದೇವಪ್ಪ ನಡುವೆ ಟ್ವಿಟರ್ ನಲ್ಲಿ ಕ್ರೆಡಿಟ್ ವಾರ್ ಜೋರಾಗಿಯೇ ನಡೆದಿದೆ.

ಮೈಸೂರು- ಬೆಂಗಳೂರು ದಶಪಥ ಹೆದ್ದಾರಿ: ಇದೇ 30ಕ್ಕೆ ಶ್ರೀರಂಗಪಟ್ಟಣ ಬೈಪಾಸ್ ಓಪನ್- ಪ್ರತಾಪ್ ಸಿಂಹ
ಬಹು ನಿರೀಕ್ಷಿತ ಮೈಸೂರು - ಬೆಂಗಳೂರು ಎಕ್ಸ್‌ಪ್ರೆಸ್ ವೇ ಎರಡನೇ ಹಂತದ ಕಾಮಗಾರಿ ಭರದಿಂದ ಸಾಗುತ್ತಿದ್ದು, ಇದೇ ತಿಂಗಳ 30 ರಂದು ಶ್ರೀರಂಗಪಟ್ಟಣ ಬೈಪಾಸ್ ಓಪನ್ ಮಾಡಲಾಗುವುದು ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ.

'ಜನಪ್ರತಿನಿಧಿಗಳು ಅಧಿಕಾರಿಗಳಿಂದ ನೀತಿಪಾಠ ಕಲಿಯಬೇಕಾಗಿಲ್ಲ', ಹುಟ್ಟುಹಬ್ಬಕ್ಕೆ ಡಿಸಿ ರೋಹಿಣಿ ಸಿಂಧೂರಿಗೆ ವಾಗ್ದಾಳಿಯ ಉಡುಗೊರೆ ಕೊಟ್ಟ ಸಂಸದ ಪ್ರತಾಪ್ ಸಿಂಹ
ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಮತ್ತೊಮ್ಮೆ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ.

