MP

ಸಂಸದ ಸ್ಥಾನದಿಂದ ಇ.ತುಕಾರಾಂ ಅನರ್ಹಗೊಳಿಸಿ: ಬಿಜೆಪಿ ಆಗ್ರಹ
ವಾಲ್ಮೀಕಿ ನಿಗಮದ ಹಗರಣದಲ್ಲಿ ಭಾಗಿಯಾಗಿ ಬಂಧಿತರಾಗಿರುವ ನಾಗೇಂದ್ರ ಅವರು ಜಾರಿ ನಿರ್ದೇಶನಾಲಯದ ನ್ಯಾಯಾಲಯಕ್ಕೆ ಸಲ್ಲಿಸಿದ ರಿಮಾಂಡ್ ಅರ್ಜಿಯಲ್ಲಿ ಚುನಾವಣೆಗೆ ರೂ.29.19 ಕೋಟಿ ಬಳಕೆ ಆಗಿದೆ ಎಂಬುದನ್ನು ಒಪ್ಪಿಕೊಂಡಿದ್ದಾರೆ.

ಸಿಎಂ ಸಿದ್ದರಾಮಯ್ಯ 3 ದಿನ ದೆಹಲಿ ಭೇಟಿ: ಕೇಂದ್ರ ಸಚಿವರು-ಸಂಸದರೊಂದಿಗೆ ವಿವಿಧ ಯೋಜನೆ-ಅನುದಾನ ವಿಚಾರ ಕುರಿತು ಮಾತುಕತೆ ಸಾಧ್ಯತೆ
ಸಭೆಯಲ್ಲಿ ರಾಜ್ಯದ ನೀರಾವರಿ ಯೋಜನೆಯಾದ ಮಹಾದಾಯಿ, ಕೃಷ್ಣಾ, ಭದ್ರಾ ಮೇಲ್ದಂಡೆ ಯೋಜನೆ, ಮೇಕೆದಾಟು ಯೋಜನೆ ಮತ್ತು ಅಭಿವೃದ್ಧಿ ಯೋಜನೆಗಳ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆಗಳಿವೆ.

ಸಂಸತ್ ನಲ್ಲಿ ಕನ್ನಡ ಕಲರವ: ರಾಜ್ಯದ 27 ಸಂಸದರು ಕನ್ನಡದಲ್ಲಿ, ಕಾಗೇರಿ ಸಂಸ್ಕೃತದಲ್ಲಿ ಪ್ರಮಾಣವಚನ!
ಬಹುತೇಕರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರೆ, ಪ್ರಿಯಾಂಕಾ ಜಾರಕಿಹೊಳಿ (ಚಿಕ್ಕೋಡಿ) ಸಂವಿಧಾನದ ಹೆಸರಿನಲ್ಲಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಉತ್ತಮ ರಾಜಕೀಯ ನಾಯಕನಾಗುವುದು ಹೇಗೆ?: ಅತಿ ಕಿರಿಯ ಸಂಸದ ಸಾಗರ್ ಖಂಡ್ರೆಗೆ ರಾಜಕೀಯ ಪಾಠ ಮಾಡಿದ CM
ಬೀದರ್ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿರುವ ದೇಶದ ಅತಿ ಕಿರಿಯ ಸಂಸದ ಸಾಗರ ಖಂಡ್ರೆ (26) ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತಮ ಶಾಸಕರಾಗುವುದು ಹೇಗೆ ಎಂಬುದರ ಕುರಿತು ಪಾಠ ಹೇಳಿದ್ದಾರೆ.

ಕೋಲ್ಕತಾ: ಚಿಕಿತ್ಸೆಗಾಗಿ ಭಾರತಕ್ಕೆ ಆಗಮಿಸಿದ್ದ ಬಾಂಗ್ಲಾ ಸಂಸದ ಶವವಾಗಿ ಪತ್ತೆ!
ಚಿಕಿತ್ಸೆಗೆಂದು ಪಶ್ಚಿಮ ಬಂಗಾಳದ ಕೋಲ್ಕತ್ತಾಗೆ ಬಂದು ನಿಗೂಢವಾಗಿ ಕಣ್ಮರೆಯಾಗಿದ್ದ ಬಾಂಗ್ಲಾದೇಶದ ಸಂಸದ ಅನ್ವರುಲ್ ಅಜೀಂ ಶವವಾಗಿ ಪತ್ತೆಯಾಗಿದ್ದಾರೆ.

ಭಾರತಕ್ಕೆ ಆಗಮಿಸಿದ್ದ ಬಾಂಗ್ಲಾದೇಶದ MP ಅನ್ವರುಲ್ ಅಝೀಮ್ ಅನಾರ್ ಕೊಲ್ಕೋತ್ತಾದಿಂದ Missing!
ಭಾರತಕ್ಕೆ ವೈದ್ಯಕೀಯ ಚಿಕಿತ್ಸೆಗೆಂದು ಆಗಮಿಸಿದ್ದ ಬಾಂಗ್ಲಾದೇಶದ ಸಂಸದ ಅನ್ವರುಲ್ ಅಝೀಂ ಅನಾರ್ ಕಳೆದ ಕೆಲವು ದಿನಗಳಿಂದ ಕೋಲ್ಕತ್ತಾದಲ್ಲಿ ನಾಪತ್ತೆಯಾಗಿದ್ದಾರೆ ಎಂದು ಬಾಂಗ್ಲಾದೇಶದ ಉಪ ಹೈಕಮಿಷನ್‌ನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜನರಿಗಾಗಿ ಕೆಲಸ ಮಾಡುವ ಸಂಸದರು ಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಪ್ರಧಾನಿ ಮೋದಿ ಅವರನ್ನು ನೋಡಿ ಮತ ಹಾಕುವಂತೆ ಪ್ರತಿ ಲೋಕಸಭಾ ಚುನಾವಣೆಯಲ್ಲೂ ಬಿಜೆಪಿ ಮತಯಾಚನೆ ಮಾಡುತ್ತಿದೆ. ಆದರೆ, ನಮಗೆ ಜನರನ್ನು ಪ್ರತಿನಿಧಿಸುವ ಸಂಸದರು ಬೇಕಲ್ಲವೇ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಶನಿವಾರ ಹೇಳಿದರು.

ತಮಿಳುನಾಡು: ಈರೋಡ್ ಸಂಸದ ಗಣೇಶಮೂರ್ತಿ ಆತ್ಮಹತ್ಯೆ ಯತ್ನ; ಆಸ್ಪತ್ರೆಗೆ ದಾಖಲು, ಪರಿಸ್ಥಿತಿ ಗಂಭೀರ
ತಮಿಳುನಾಡಿನ ಈರೋಡ್ ಸಂಸದ ಎ. ಗಣೇಶಮೂರ್ತಿ ಅವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದ್ದು ಅವರನ್ನು ಕೊಯಮತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಲಂಚ ಪ್ರಕರಣದಲ್ಲಿ ಶಾಸಕರು, ಸಂಸದರಿಗೆ ಕಾನೂನು ರಕ್ಷಣೆ ಇಲ್ಲ: 1998ರ ತೀರ್ಪು ರದ್ದುಪಡಿಸಿ ಸುಪ್ರೀಂಕೋರ್ಟ್ ಮಹತ್ವದ ತೀರ್ಪು
ಲಂಚ ಪಡೆದ ಪ್ರಕರಣಗಳಲ್ಲಿ ಸಂಸದರು ಹಾಗೂ ಶಾಸಕರಿಗೆ ಕಾನೂನು ರಕ್ಷಣೆ ನೀಡಲು ಸಾಧ್ಯವಿಲ್ಲ ಎಂದು ಮಹತ್ವದ ತೀರ್ಪು ನೀಡಿರುವ ಸುಪ್ರೀಂಕೋರ್ಟ್, ಶಾಸಕರಿಗೆ ಕಾನೂನು ಕ್ರಮದಿಂದ ವಿನಾಯಿತಿ ನೀಡುವ ಹಿಂದಿನ ಆದೇಶವನ್ನು ಸೋಮವಾರ ರದ್ದುಪಡಿಸಿದೆ.

