ದೇಶSansad TV: ಸಂಸದ್ ಟಿವಿ ನಿರೂಪಕಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಶಿವಸೇನೆ ಸಂಸದೆ ಪ್ರಿಯಾಂಕಾ ಚತುರ್ವೇದಿ: ಪತ್ರದಲ್ಲಿ ನೀಡಿದ ಕಾರಣ ಏನು?
ತಮ್ಮನ್ನು ಸೇರಿಸಿ 12 ಮಂದಿ ರಾಜ್ಯಸಭಾ ಸದಸ್ಯರನ್ನು ಅಮಾನತುಗೊಳಿಸಿದ ಕ್ರಮವನ್ನು ವಿರೋಧಿಸಿ ಶಿವಸೇನೆಯ ಸಂಸದೆ ಪ್ರಿಯಾಂಕ ಚತುರ್ವೇದಿ ಸಂಸದ ಟಿವಿಯ ನಿರೂಪಕಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮಹಾರಾಷ್ಟ್ರದ ಸಂಸದೆ ಪ್ರಿಯಾಂಕ ಚತುರ್ವೇದಿ ಅಮಾನತುಗೊಂಡ 12 ಮಂದಿ ರಾಜ್ಯಸಭಾ ಸದಸ್ಯರಲ್ಲಿ ಒಬ್ಬರಾಗಿದ್ದಾರೆ.