ದೇಶಮಹಾರಾಷ್ಟ್ರ ಸಾರಿಗೆ ಸಂಸ್ಥೆ ಬಸ್ಸುಗಳಲ್ಲಿ ಮಹಿಳೆಯರಿಗೆ ಶೇ.50 ರಷ್ಟು ರಿಯಾಯಿತಿ!
ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ನಿಗಮದ ಎಲ್ಲಾ ಬಸ್ಸುಗಳಲ್ಲಿ ಇಂದಿನಿಂದ ಮಹಿಳಾ ಪ್ರಯಾಣಿಕರಿಗೆ ಶೇ. 50 ರಷ್ಟು ರಿಯಾಯಿತಿಯನ್ನು ಪ್ರಕಟಿಸಲಾಗಿದೆ. ಮಹಿಳಾ ಸಮ್ಮಾನ್ ಯೋಜನೆಯಡಿ ಈ ಪ್ರಯೋಜನವನ್ನು ಒದಗಿಸಲಿದ್ದು, ರಾಜ್ಯ ಸರ್ಕಾರ ನಿಗಮಕ್ಕೆ ರಿಯಾಯಿತಿ ಮೊತ್ತವನ್ನು ಮರುಪಾವತಿಸಲಿದೆ ಎಂದು ಮಹಾರಾಷ್ಟ್ರ ರಾಜ್ಯ ಸಾರಿಗೆ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.