ದೇಶಲುಧಿಯಾನ ಸ್ಫೋಟ ಪ್ರಕರಣದ ಆರೋಪಿಯ ವಿಚಾರಣೆ: ಜರ್ಮನಿಗೆ ತೆರಳಲು ಎನ್ಐಎ ಮುಂದು
ಲುಧಿಯಾನ ಕೋರ್ಟ್ ಆವರಣದಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್ಐಎ) ತಂಡ ಜರ್ಮನಿಗೆ ತೆರಳಿ ಸಿಖ್ ಫಾರ್ ಜಸ್ಟಿಸ್ (ಎಸ್ಎಫ್ಜೆ) ಸಂಘಟನೆಯ ಸದಸ್ಯ ಜಸ್ವಿಂದರ್ ಸಿಂಗ್ ಮುಲ್ತಾನಿಯನ್ನು ವಿಚಾರಣೆ ನಡೆಸಲಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಶುಕ್ರವಾರ ಹೇಳಿದ್ದಾರೆ.