ದೇಶಮಹದೇವ್ ಬೆಟ್ಟಿಂಗ್ ಆ್ಯಪ್ ಪ್ರಕರಣ: ಛತ್ತೀಸಗಢದಲ್ಲಿ ನಟ ಸಾಹಿಲ್ ಖಾನ್ ಬಂಧಿಸಿದ ಎಸ್ಐಟಿ
ಮಹದೇವ್ ಬೆಟ್ಟಿಂಗ್ ಆ್ಯಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಸೈಬರ್ ಸೆಲ್ನ ವಿಶೇಷ ತನಿಖಾ ತಂಡವು (ಎಸ್ಐಟಿ) ನಟ ಸಾಹಿಲ್ ಖಾನ್ ಅವರನ್ನು ಛತ್ತೀಸ್ಗಢದಲ್ಲಿ ಬಂಧಿಸಿದೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾನ್ ಅವರನ್ನು ಎಸ್ಐಟಿ ಇತ್ತೀಚೆಗಷ್ಟೇ ವಿಚಾರಣೆಗೆ ಒಳಪಡಿಸಿತ್ತು.