Mumbai Police

ನೋವಿಲ್ಲದೆ ಆತ್ಮಹತ್ಯೆ ಮಾಡಿಕೊಳ್ಳುವ ಬಗ್ಗೆ ಆನ್‌ಲೈನ್‌ನಲ್ಲಿ ಹುಡುಕಾಟ; ಅಲರ್ಟ್ ನೀಡಿದ ಅಮೆರಿಕದ ಏಜೆನ್ಸಿ; ಮುಂಬೈ ಪೊಲೀಸರಿಂದ ವ್ಯಕ್ತಿಯ ರಕ್ಷಣೆ
'ನೋವು ಇಲ್ಲದೆ ಆತ್ಮಹತ್ಯೆ ಮಾಡಿಕೊಳ್ಳುವುದು ಹೇಗೆ' ಎಂದು ವ್ಯಕ್ತಿಯೊಬ್ಬರು ಗೂಗಲ್‌ನಲ್ಲಿ ಹುಡುಕುತ್ತಿದ್ದಾರೆ ಎಂದು ಅಮೆರಿಕದ ಕಾನೂನು ಜಾರಿ ಸಂಸ್ಥೆಯಿಂದ ಬಂದ ಎಚ್ಚರಿಕೆಯ ನಂತರ ಮುಂಬೈ ಪೊಲೀಸರು 25 ವರ್ಷದ ವ್ಯಕ್ತಿಯನ್ನು ಪತ್ತೆ ಹಚ್ಚಿ, ಆತ್ಮಹತ್ಯೆ ಮಾಡಿಕೊಳ್ಳುವುದರಿಂದ ಆತನನ್ನು ರಕ್ಷಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

ವಿವಾಹೇತರ ಸಂಬಂಧ ಆರೋಪ: ನಟಿ ರಾಖಿ ಸಾವಂತ್ ಪತಿ ಆದಿಲ್ ಖಾನ್ ದುರಾನಿ ಬಂಧನ!
ಇತ್ತೀಚಿನ ದಿನಗಳಲ್ಲಿ ರಾಖಿ ಸಾವಂತ್ ಅವರ ಜೀವನದಲ್ಲಿ ಸಾಕಷ್ಟು ಏಳು ಬೀಳುಗಳು ಆಗುತ್ತಿವೆ. ಆದಿಲ್ ಖಾನ್ ಜೊತೆ ಮದುವೆಯಾದ ನಂತರ ಶುರುವಾದ ಒಡಕು ಫೆಬ್ರವರಿಯಲ್ಲಿಯೂ ಮುಂದುವರಿಯುತ್ತದೆ.

ಎಫ್‌ಐಆರ್ ದಾಖಲಿಸಿದ ನಟಿ ಶೆರ್ಲಿನ್ ಚೋಪ್ರಾ: ರಾಖಿ ಸಾವಂತ್‌ರನ್ನು ಬಂಧಿಸಿದ ಮುಂಬೈ ಪೊಲೀಸರು
ನಟಿ ಶೆರ್ಲಿನ್ ಚೋಪ್ರಾ ನೀಡಿದ ದೂರಿನ ಮೇರೆಗೆ ಅಂಬೋಲಿ ಪೊಲೀಸರು ರಾಖಿ ಸಾವಂತ್ ಅವರನ್ನು ಬಂಧಿಸಿದ್ದಾರೆ. ರಾಖಿ ಸಾವಂತ್ ತನ್ನ ಮಾನಹಾನಿ ಮಾಡುತ್ತಿದ್ದಾರೆ ಮತ್ತು ತನ್ನ ಅಶ್ಲೀಲ ವಿಡಿಯೋಗಳು ಮತ್ತು ಫೋಟೊಗಳನ್ನು ಆನ್‌ಲೈನ್‌ನಲ್ಲಿ ಪ್ರಸಾರ ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಅಶ್ಲೀಲ ಚಿತ್ರ ಪ್ರಕರಣದಲ್ಲಿ ರಾಜ್ ಕುಂದ್ರಾ 'ಮುಖ್ಯ ಸಂಚಾಲಕ', ಲಕ್ಷಾಂತರ ರೂ. ಸಂಪಾದನೆ: ಚಾರ್ಜ್ ಶೀಟ್
ಅಶ್ಲೀಲ ಚಿತ್ರ ನಿರ್ಮಾಣ ಮತ್ತು ಪ್ರಸರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ರಾಜ್ ಕುಂದ್ರಾ ವಿರುದ್ಧ ಮುಂಬೈ ಪೊಲೀಸರು ಚಾರ್ಜ್ ಶೀಟ್ ಶೀಟ್ ಸಲ್ಲಿಸಿದ್ದಾರೆ.

ವಾಣಿಜ್ಯ ನಗರಿ ಮುಂಬೈನಲ್ಲಿ ಇಂದಿನಿಂದ ಜನವರಿ 2 ರವರೆಗೂ ಕರ್ಫ್ಯೂ ಜಾರಿಗೆ
ವಾಣಿಜ್ಯ ನಗರಿ ಮುಂಬೈನಲ್ಲಿ ಇಂದಿನಿಂದ ಜನವರಿ 2 ರವರೆಗೂ ಕರ್ಫ್ಯೂವನ್ನು ಪೊಲೀಸರು ಘೋಷಿಸಿದ್ದಾರೆ. ಸಾರ್ವಜನಿಕ ಕಾನೂನು ಸುವ್ಯವಸ್ಥೆಯಲ್ಲಿನ ತೊಡಕನ್ನು ತಡೆಗಟ್ಟುವುದು ಮತ್ತು ಶಾಂತಿಯನ್ನು ಖಚಿತಪಡಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಮುಕೇಶ್ ಅಂಬಾನಿ ಅವರಿಗೆ ಬೆದರಿಕೆ ಕರೆ ಮಾಡಿದ್ದ ಆರೋಪಿ ಆ.30ರವರೆಗೆ ಪೊಲೀಸ್ ಕಸ್ಟಡಿಗೆ
ರಿಲಾಯನ್ಸ್ ಗ್ರೂಪ್ ಮುಖ್ಯಸ್ಥ ಮುಕೇಶ್ ಅಂಬಾನಿ ಅವರಿಗೆ ಬೆದರಿಕೆ ಕರೆ ಮಾಡಿದ್ದಕ್ಕಾಗಿ ಬಂಧನಕ್ಕೊಳಗಾಗಿದ್ದ 56 ವರ್ಷದ ಆರೋಪಿಯನ್ನು ಮಂಗಳವಾರ ಮುಂಬೈನ 37ನೇ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಆಗಸ್ಟ್ 30ರವರೆಗೆ ಪೊಲೀಸ್ ಕಸ್ಟಡಿಗೆ ಕಳುಹಿಸಿದೆ.

ಮುಕೇಶ್ ಅಂಬಾನಿಗೆ ಬೆದರಿಕೆ ಕರೆ ಮಾಡಿದ್ದ ವ್ಯಕ್ತಿಯನ್ನು ಬಂಧಿಸಿದ ಮುಂಬೈ ಪೊಲೀಸರು!
ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (ಆರ್‌ಐಎಲ್) ಅಧ್ಯಕ್ಷ ಮುಖೇಶ್ ಅಂಬಾನಿ ಮತ್ತು ಅವರ ಕುಟುಂಬಕ್ಕೆ ಬೆದರಿಕೆ ಹಾಕಿದ ವ್ಯಕ್ತಿಯನ್ನು ಮುಂಬೈ ಪೊಲೀಸರು ಇಂದು ಕಸ್ಟಡಿಗೆ ತೆಗೆದುಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಾಮಾಜಿಕ ಮಾಧ್ಯಮಗಳಲ್ಲಿ ನಗ್ನ ಫೋಟೊ ಹಂಚಿಕೊಂಡಿದ್ದ ನಟ ರಣವೀರ್ ಸಿಂಗ್ ವಿರುದ್ಧ ಎಫ್‌ಐಆರ್
ಸಂಪೂರ್ಣ ಬೆತ್ತಲಾಗಿ ಫೋಟೊಶೂಟ್ ಮಾಡಿಸಿದ್ದ ನಟ ರಣವೀರ್ ಸಿಂಗ್, ಅವುಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುವ ಮೂಲಕ ಟೀಕೆಗೆ ಗುರಿಯಾಗಿದ್ದರು. ಇದೀಗ ದೂರಿನ ಆಧಾರದ ಮೇಲೆ ಅವರ ವಿರುದ್ಧ ಮುಂಬೈ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಪ್ರವಾದಿ ಮೊಹಮ್ಮದ್ ವಿರುದ್ಧ ಹೇಳಿಕೆ: ಮುಂಬೈ ಪೊಲೀಸರಿಂದ ನೂಪುರ್ ಶರ್ಮಾಗೆ ಸಮನ್ಸ್!
ಪ್ರವಾದಿ ಮೊಹಮ್ಮದ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗೆ ಸಂಬಂಧಿಸಿದಂತೆ ಅಮಾನತುಗೊಂಡಿರುವ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಅವರಿಗೆ ಮುಂಬೈ ಪೊಲೀಸರು ನೋಟಿಸ್ ನೀಡಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

