Munirathna,

ಇನ್ನಷ್ಟು ಕಾಂಗ್ರೆಸ್ ನಾಯಕರು ಬಿಜೆಪಿ ಸೇರಲಿದ್ದಾರೆ: ಮುನಿರತ್ನ
ಕೋಲಾರ ಕಾಂಗ್ರೆಸ್‌ನ ಇನ್ನೂ ಕೆಲವು ಪ್ರಮುಖ ನಾಯಕರು ಶೀಘ್ರದಲ್ಲೇ ಭಾರತೀಯ ಜನತಾ ಪಕ್ಷಕ್ಕೆ ಸೇರಲಿದ್ದಾರೆ ಎಂದು ತೋಟಗಾರಿಕೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಅವರು ಸೋಮವಾರ ಹೇಳಿದ್ದಾರೆ.

'ಬಂಡಾಯ ಶಾಸಕರ ನಾಯಕ' ರಮೇಶ್ ಜಾರಕಿಹೊಳಿ ಭೇಟಿಯಾದ ಮುನಿರತ್ನ
ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕನಾಗಿ ನೂತನವಾಗಿ ಆಯ್ಕೆಯಾಗಿರುವ ಎನ್.ಮುನಿರತ್ನ ಅವರು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿಯವರನ್ನು ಗುರುವಾರ ಭೇಟಿ ಮಾಡಿದ್ದಾರೆ.

ಫಲಿಸದ ಡಿಕೆ ಸಹೋದರರ ತಂತ್ರ: ಆರ್ ಆರ್ ನಗರದಲ್ಲಿ ಮುನಿರತ್ನ ಕ್ಲೀನ್ ಸ್ವೀಪ್
ಮುನಿರತ್ನ ತಮ್ಮ ಹಿಂದಿನ ಚುನಾವಣೆಗಿಂತ ಈ ಬಾರಿ ಮತಗಳ ಅಂತರವನ್ನು ಡಬಲ್ ಮಾಡಿಕೊಂಡಿದ್ದಾರೆ. ಕಳೆದ ವರ್ಷ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಮುನಿರತ್ನ ಅವರಿಗೆ ಕಾಂಗ್ರೆಸ್ ನ ಸಾಂಪ್ರಾದಾಯಿಕ ಮತಗಳ ಜೊತೆಗೆ ಬಿಜೆಪಿ ಮತಗಳು ಸೇರಿವೆ.

ಆರ್.ಆರ್.ನಗರ ಉಪಚುನಾವಣೆ: ಮುನಿರತ್ನ ಹ್ಯಾಟ್ರಿಕ್ ಗೆಲುವು ಬಹುತೇಕ ಖಚಿತ; ಘೋಷಣೆಯಷ್ಟೇ ಬಾಕಿ
ರಾಜರಾಜೇಶ್ವರಿ ನಗರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರು ಪ್ರತಿಸ್ಪರ್ಧಿಗಳಾದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕುಸುಮಾ ಹಾಗೂ ಜೆಡಿಎಸ್ ಪಕ್ಷದ ಕೃಷ್ಣಮೂರ್ತಿ ವಿರುದ್ಧ ಭಾರೀ ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದು, ಹ್ಯಾಟ್ರಿಕ್ ಗೆಲುವು ಸಾಧಿಸುವುದು ಬಹುತೇಕ ಖಚಿತಗೊಂಡಿದೆ.

ಉಪಚುನಾವಣೆ ಫಲಿತಾಂಶ: ಆರ್.ಆರ್.ನಗರ, ಶಿರಾ ಎರಡೂ ಕ್ಷೇತ್ರದಲ್ಲಿ ಬಿಜೆಪಿಗೆ ಮುನ್ನಡೆ; ಕಾಂಗ್ರೆಸ್, ಜೆಡಿಎಸ್ ಹಿನ್ನಡೆ
ರಾಜರಾಜೇಶ್ವರಿ ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಮತ ಎಣಿಕೆ ಬೆಳಗ್ಗೆ 8 ಗಂಟೆಗೆ ಆರಂಭಗೊಂಡಿದ್ದು, ಮೊದಲ ಹಂತದ ಮತಎಣಿಕೆಯಲ್ಲಿ ಎರಡೂ ಕ್ಷೇತ್ರದಲ್ಲಿಯೂ ಬಿಜೆಪಿ ಮುನ್ನಡೆ ಸಾಧಿಸುತ್ತಿದೆ.

ಫಲಿತಾಂಶಕ್ಕೂ ಮುನ್ನವೇ ಪ್ರಬಲ ಖಾತೆಗೆ ಮುನಿರತ್ನ ಲಾಬಿ: ಇಂಧನ ಖಾತೆ ಮೇಲೆ ಕಣ್ಣು!
ಉಪಚುನಾವಣಾ ಫಲಿತಾಂಶ ಇನ್ನೂ ಪ್ರಕಟವಾಗಬೇಕಿದೆ, ಆದರೆ ಬಿಜೆಪಿ ಆರ್ ಆರ್ ನಗರ ಅಭ್ಯರ್ಥಿ ಮುನಿರತ್ನ ಪ್ರಬಲ ಖಾತೆಗಾಗಿ ಲಾಬಿ ಆರಂಭಿಸಿದ್ದಾರೆ.

ಉಪಚುನಾವಣೆಯಲ್ಲಿ ಗೆದ್ದ ಕೂಡಲೇ ಮುನಿರತ್ನಗೆ ಸಚಿವ ಸ್ಥಾನ ನೀಡಲಾಗುತ್ತದೆ: ಸಿಎಂ ಯಡಿಯೂರಪ್ಪ ಭರವಸೆ
ರಾಜರಾಜೇಶ್ವರಿ ಉಪಚುನಾವಣೆಯಲ್ಲಿ ಗೆಲುವು ಸಾಧಿಸುತ್ತಿದ್ದಂತೆಯೇ ಮುನಿರತ್ನ ಅವರಿಗೆ ಸಂಪುಟದಲ್ಲಿ ಸಚಿವ ಸ್ಥಾನ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಶನಿವಾರ ಭರವಸೆ ನೀಡಿದ್ದಾರೆ.

ಆರ್ ಆರ್ ನಗರ ಉಪಚುನಾವಣೆಯಲ್ಲಿ ನಾಯ್ಡು v/s ಒಕ್ಕಲಿಗ: ಪ್ರಚಾರದಲ್ಲಿ 'ಡಿ' ಬಾಸ್ ಹವಾ
ಆರ್ ಆರ್ ನಗರ ಉಪಚುನಾವಣೆ ಪ್ರಚಾರದಲ್ಲಿ ಸ್ಟಾರ್ ಗಳ ಹವಾ ಶುರುವಾಗಿದೆ, ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ಖಷ್ಬೂ ನಂತರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರಚಾರ ನಡೆಸಿದರು.

'ಅಂಥಾ ಅನ್ಯಾಯ ನಾವೇನು ಮಾಡಿದ್ವಿ ಮುನಿರತ್ನಾ ಅವರೇ..': ಆರ್ ಆರ್ ನಗರ ಬಿಜೆಪಿ ಅಭ್ಯರ್ಥಿ ವಿರುದ್ಧ ಸಿದ್ದರಾಮಯ್ಯ ಸರಣಿ ಟ್ವೀಟ್!
ಆರ್ ಆರ್ ನಗರ ಉಪ ಚುನಾವಣೆ ಕಣ ರಂಗೇರಿದ್ದು, ನಾಯಕರ ಟೀಕೆ-ಪ್ರತಿ ಟೀಕೆ ತಾರಕಕ್ಕೇರಿದೆ. ಏತನ್ಮಧ್ಯೆ ವಿರೋಧ ಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿ ಅಭ್ಯರ್ಥಿ ಮುನಿರತ್ನ ವಿರುದ್ಧ ತೀವ್ರ ಕಿಡಿಕಾರಿದ್ದಾರೆ.

