Muniyappa

ಸಿದ್ದು-ಡಿಕೆಶಿ ಮಧ್ಯಪ್ರವೇಶಿಸಿದರೂ ಬಗೆಹರಿಯದ ಗೊಂದಲ: ಕೋಲಾರ 'ಕೈ' ಕಗ್ಗಂಟು ಮುಂದುವರಿಕೆ
ಕೋಲಾರ ಕಾಂಗ್ರೆಸ್ ಕಗ್ಗಂಟು ಬಿಡಿಸಲು ರಾಜ್ಯ ನಾಯಕತ್ವ ಹರಸಾಹಸ ನಡೆಸಿದರೂ ಪೈಪೋಟಿಗೆ ಬಿದ್ದಿರುವ ಸ್ಪೀಕರ್ ರಮೇಶ್ ಕುಮಾರ್ ಬಣ ಹಾಗೂ ಮುನಿಯಪ್ಪ ಕುಟುಂಬದ ನಡುವೆ ಹೊಂದಾಣಿಕೆ ಮೂಡಿಸಲು ಸಾಧ್ಯವಾಗಿಲ್ಲ.

ಲೋಕಸಭಾ ಚುನಾವಣೆ 2024: ಸುರ್ಜೆವಾಲಾ ಭೇಟಿಯಾದ ಚಂದ್ರಪ್ಪ, ಮುನಿಯಪ್ಪ
ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ ಎಚ್ ಮುನಿಯಪ್ಪ ಮತ್ತು ಕರ್ನಾಟಕ ಕಾಂಗ್ರೆಸ್ ಕಾರ್ಯಾಧ್ಯಕ್ಷ ಬಿ ಎನ್ ಚಂದ್ರಪ್ಪ ಅವರು ಮಂಗಳವಾರ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರನ್ನು ಭೇಟಿ ಮಾಡಿದ್ದು, ತಮ್ಮ ಸ್ಪರ್ಧೆ ಕುರಿತು ಖಚಿತತೆ ಪಡೆದುಕೊಳ್ಳುವ ಪ್ರಯತ್ನ ನಡೆಸಿದರು.

ಕೇಂದ್ರದ 'ಭಾರತ್ ರೈಸ್' ಯೋಜನೆಯಿಂದ ದೇಶ ಆರ್ಥಿಕ ದಿವಾಳಿಯಾಗಲಿದೆ: ಸಚಿವ ಕೆ.ಎಚ್.ಮುನಿಯಪ್ಪ
ಪ್ರತಿ ಕೆಜಿ ಅಕ್ಕಿಯನ್ನು 29 ರೂ.ಗೆ ಮಾರಾಟ ಮಾಡುವ ಮೂಲಕ ಕೇಂದ್ರ ಸರ್ಕಾರ ದೇಶವನ್ನು ದಿವಾಳಿಯಾಗಿಸುತ್ತಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ಮಂಗಳವಾರ ಹೇಳಿದರು,

ನಾನು ರಾಮನ ಪರಮ ಭಕ್ತ, ಪ್ರತಿನಿತ್ಯ ರಾಮಕೋಟಿ ಬರೆಯುತ್ತೇನೆ: ಸಚಿವ ಮುನಿಯಪ್ಪ
ನಾನು ಶ್ರೀರಾಮನ ಪರಮ ಭಕ್ತ, ಕಳೆದ 20 ವರ್ಷಗಳಿಂದ ಪ್ರತಿನಿತ್ಯ ರಾಮಕೋಟಿ ಬರೆಯುತ್ತಿದ್ದೇನೆಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಕೆ.ಎಚ್.ಮುನಿಯಪ್ಪ ಅವರು ಗುರುವಾರ ಹೇಳಿದರು.

ಧಾನ್ಯ ಸರಬರಾಜು ಏಜೆನ್ಸಿಗಳ 2,040 ಕೋಟಿ ರೂ. ಬಾಕಿ ಹಣ ಬಿಡುಗಡೆ ಮಾಡಿ: ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ, ಬಿಳಿಜೋಳ ಹಾಗೂ ಅಕ್ಕಿ ಸರಬರಾಜು ಮಾಡಿರುವ ರಾಜ್ಯದ ಏಜೆನ್ಸಿಗಳಿಗೆ ಕೇಂದ್ರ ಸರ್ಕಾರ ರೂ.2,040 ಕೋಟಿ ಉಳಿಸಿಕೊಂಡಿದ್ದು, ಅದನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಆಗ್ರಹಿಸಿದೆ.

ಹೊಸ ಪಡಿತರ ಚೀಟಿಗೆ 2.95 ಲಕ್ಷ ಅರ್ಜಿ ಬಂದಿದೆ, ಶೀಘ್ರದಲ್ಲೆ ವಿತರಣೆ: ಸರ್ಕಾರ
ಹೊಸ ಪಡಿತರ ಚೀಟಿ ಕೋರಿ 2.95 ಲಕ್ಷ ಅರ್ಜಿ ಸಲ್ಲಿಕೆಯಾಗಿದ್ದು, ಇವುಗಳನ್ನು ಪರಿಶೀಲಿಸಿ, ಶೀಘ್ರದಲ್ಲೇ ವಿತರಿಸಲಾಗುವುದು’ ಎಂದು ಆಹಾರ ಮತ್ತು ನಾಗರಿಕ ಪೂರೈಕೆಗಳ ಸಚಿವ ಕೆ.ಎಚ್. ಮುನಿಯಪ್ಪ ಅವರು ಶುಕ್ರವಾರ ಹೇಳಿದರು.

ಹಣದ ಕೊರತೆ ನಡುವಲ್ಲೂ ಅಭಿವೃದ್ಧಿ ಕಾರ್ಯ ಮುಂದುವರೆಸುವಲ್ಲಿ ಸಿದ್ದರಾಮಯ್ಯ ಸಮರ್ಥರು: ಸಚಿವ ಕೆ.ಹೆಚ್. ಮುನಿಯಪ್ಪ
ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ರಾಜ್ಯ ಸರ್ಕಾರ ಹಣದ ಕೊರತೆ ಎದುರಿಸುತ್ತಿದ್ದು, ಇದರ ನಡುವಲ್ಲೂ ಅಭಿವೃದ್ಧಿ ಕಾರ್ಯಗಳು ನಿರಂತರವಾಗಿ ನಡೆಯುವಂತೆ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮರ್ಥರಾಗಿದ್ದಾರೆಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಕೆ.ಎಚ್.ಮುನಿಯಪ್ಪ ಅವರು ಶುಕ್ರವಾರ ಹೇಳಿದರು.

ಆಂಧ್ರ ಪ್ರದೇಶ, ತೆಲಂಗಾಣದಿಂದ ಅಕ್ಕಿ ಪಡೆಯುವ ಪ್ರಯತ್ನಗಳು ನಡೆಯುತ್ತಿವೆ: ಸಚಿವ ಮುನಿಯಪ್ಪ
ಅನ್ನ ಭಾಗ್ಯ ಯೋಜನೆಗೆ ಅಕ್ಕಿ ಖರೀದಿಸಲು ಆಂಧ್ರ ಪ್ರದೇಶ ಮತ್ತು ತೆಲಂಗಾಣದೊಂದಿಗೆ ರಾಜ್ಯ ಸರ್ಕಾರ ಮಾತುಕತೆ ನಡೆಸುತ್ತಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ ಎಚ್ ಮುನಿಯಪ್ಪ ಅವರು ಬುಧವಾರ ಹೇಳಿದರು.

ರಾಗಿ, ಜೋಳ ಬೆಂಬಲ ಬೆಲೆ ಹೆಚ್ಚಳ ಮಾಡುವಂತೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ
ರಾಗಿ ಹಾಗೂ ಜೋಳಕ್ಕೆ 2023–24ನೇ ಸಾಲಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಹೆಚ್ಚಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಆಗ್ರಹಿಸಿದೆ.

