Murugesh Nirani

ಮೂರನೇ ಕೋವಿಡ್-19 ಅಲೆ ಎದುರಿಸಲು ಸಜ್ಜಾಗಿ: ಮುರುಗೇಶ್ ನಿರಾಣಿ ಸೂಚನೆ
ರಾಜ್ಯದಲ್ಲಿ ಮೂರನೇ ಕೋವಿಡ್ -19 ಅಲೆ ಸಂಭವಿಸುವ ಸಾಧ್ಯತೆ ಇದೆ ಎಂದು ತಜ್ಞರು ಸಲಹೆ ನೀಡಿರುವ ಹಿನ್ನೆಲೆಯಲ್ಲಿ ಕೂಡಲೇ ಮುಂಜಾಗ್ರತಾ ಕ್ರಮಗಳನ್ನು ಜಿಲ್ಲಾಡಳಿತ ತೆಗೆದುಕೊಳ್ಳಬೇಕು ಎಂದು ಗಣಿ ಮತ್ತು ಭೂ ವಿಜ್ಞಾನ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ ನಿರಾಣಿ ಅವರು ಸೂಚಿಸಿದ್ದಾರೆ.

ರಾಜ್ಯಾದ್ಯಂತ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ನಿಮಿ೯ಸಲು ಮನವಿ: ಸಿಎಂ ಯಡಿಯೂರಪ್ಪಗೆ ಸಚಿವ ಮುರುಗೇಶ್ ನಿರಾಣಿ ಪತ್ರ
ಕನಾ೯ಟಕದ ಇತಿಹಾಸದಲ್ಲಿ ಅಭಿವೃದ್ಧಿಗೆ ಹೊಸ ವ್ಯಾಖ್ಯಾನ ಬರೆದ ಮೈಸೂರು ಸಂಸ್ಥಾನದ ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರಿನಲ್ಲಿ ಕೆಲವು ಪ್ರಮುಖ ನಿಧಾ೯ರವನ್ನು ತೆಗೆದುಕೊಳ್ಳಬೇಕೆಂದು ಗಣಿ ಮತ್ತು ಭೂವಿಜ್ಞಾನ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ ನಿರಾಣಿ ಅವರು ಸರಕಾರಕ್ಕೆ ಮನವಿ ಮಾಡಿದ್ದಾರೆ.

ಮುಂದಿನ 15 ದಿನಗಳಲ್ಲಿ ಹೊಸಮರಳು ನೀತಿ ಜಾರಿ: ಮುರುಗೇಶ್ ನಿರಾಣಿ
ಹೊಸ ಮರಳು ನೀತಿ ಹಾಗೂ ಗಣಿ ನೀತಿಯು ಇನ್ನು 15 ದಿನದೊಳಗೆ ಜಾರಿಗೆ ಬರಲಿದೆ ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಸಚಿವ ಮುರುಗೇಶ ಆರ್.ನಿರಾಣಿ ತಿಳಿಸಿದ್ದಾರೆ.

ಇನ್ನು ಎರಡು ವರ್ಷ ಯಡಿಯೂರಪ್ಪ ಅವರೇ ಸಿಎಂ; ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ನಿರಾಣಿ
ರಾಜ್ಯದಲ್ಲಿ ನಾಯಕತ್ವದ ಬದಲಾವಣೆ ಮಾತೇ ಇಲ್ಲ ಎಂದು ಗಣಿ ಮತ್ತು ಭೂ ವಿಜ್ಞಾನ ಖಾತೆ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.

ಕೊರೋನಾ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಲಾಕ್ ಡೌನ್ ವಿಸ್ತರಣೆ ಅಗತ್ಯ: ನಿರಾಣಿ
ಕೋವಿಡ್ ತಡೆಗಾಗಿ ಲಾಕ್ ಡೌನ್ ವಿಸ್ತರಣೆ ಮಾಡಿದರೇ ಒಳ್ಳೆಯದು ಎಂದು ಸಚಿವ ಮುರುಗೇಶ್ ನಿರಾಣಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಬೋಯಿಂಗ್ ಇಂಡಿಯಾ ಸಂಸ್ಥೆಯಿಂದ ಕಲಬುರಗಿಯಲ್ಲಿ 250 ಆಕ್ಸಿಜನ್ ಬೆಡ್ ಆಸ್ಪತ್ರೆ ಸ್ಥಾಪನೆ: ಮುರುಗೇಶ್ ನಿರಾಣಿ
ಕೋವಿಡ್ ಎರಡನೇ ಅಲೆಯಿಂದ ರಾಜ್ಯದಲ್ಲಿ ಸೃಷ್ಠಿಯಾಗಿರುವ ಆಕ್ಸಿಜನ್ ಬೆಡ್ ಕೊರತೆ ನಿವಾರಣೆಗೆ ಬೋಯಿಂಗ್ ಇಂಡಿಯಾ ಸಂಸ್ಥೆ ಮುಂದಾಗಿದ್ದು, ಕಲಬುರಗಿ ಜಿಲ್ಲೆಯಲ್ಲಿ 250 ಆಕ್ಸಿಜನ್ ಬೆಡ್ ಆಸ್ಪತ್ರೆ ಸ್ಥಾಪಿಸಲು ಮಂಜೂರಾತಿ....

ಮುರುಗೇಶ್ ನಿರಾಣಿಗೆ ಕಲಬುರಗಿ, ಗೋವಿಂದ ಕಾರಜೋಳಗೆ ಬೆಳಗಾವಿ ಸೇರಿ ಹಲವು ಸಚಿವರಿಗೆ ಹೊಸ ಜಿಲ್ಲೆಗಳ ಉಸ್ತುವಾರಿ
ಕೋವಿಡ್ ಸೋಂಕಿನಿಂದ ರಾಜ್ಯ ನಲುಗಿ ಹೋಗಿರುವ ಸಂದರ್ಭದಲ್ಲಿ ಮತ್ತು ಉಪ ಚುನಾವಣೆ ಫಲಿತಾಂಶ ಮಧ್ಯೆ ಉಪ ಮುಖ್ಯಮಂತ್ರಿ ಹಾಗೂ ಕೆಲವು ಸಚಿವರುಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ನೀಡಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೂಚಿಸಿರುವ ಹೆಸರುಗಳಿಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ.

ಮೆಡಿಕಲ್ ಆಕ್ಸಿಜನ್ ಕೊರತೆ: ಉಕ್ಕಿನ ಕಾರ್ಖಾನೆಗಳ ಜೊತೆ ಶೆಟ್ಟರ್, ಮುರುಗೇಶ್ ನಿರಾಣಿ ಸಭೆ
ರಾಜ್ಯದಲ್ಲಿ ತಲೆದೋರಿರುವ ಆಮ್ಲಜನಕ ಕೊರತೆ ಸರಿದೂಗಿಸಲು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹಾಗೂ ಗಣಿ ಸಚಿವ ಮುರುಗೇಶ್ ನಿರಾಣಿ ಬುಧವಾರ ಉಕ್ಕು ತಯಾರಿಕಾ ಕಾರ್ಖಾನೆಗಳ ಜೊತೆ ಸಭೆ ನಡೆಸಿದ್ದಾರೆ.

ಆಕ್ಸಿಜನ್ ಕೊರತೆ ನೀಗಿಸಲು ಸ್ಟೀಲ್ ಕಂಪೆನಿಗಳಿಂದ ಆಕ್ಸಿಜನ್ ಪಡೆಯಲು ನಿರ್ಧಾರ: ಮುರುಗೇಶ್ ನಿರಾಣಿ
ರಾಜ್ಯದಲ್ಲಿ ಕೊರೋನಾ ರೋಗಿಗಳಿಗೆ ಆಕ್ಸಿಜನ್ ಕೊರತೆ ತೀವ್ರಗೊಂಡಿರುವ ಹಿನ್ನಲೆಯಲ್ಲಿ ಗಣಿ ಸಚಿವ ಮುರುಗೇಶ್ ನಿರಾಣಿ ಅವರು ಬುಧವಾರ ಸ್ಟೀಲ್ ಕಂಪನಿಗಳ ಜೊತೆ ಸಭೆ ನಡೆಸಿದರು.

