ರಾಜ್ಯಮಂಗಳೂರು ಹತ್ಯೆ: ಮೃತ ಮಸೂದ್, ಫಾಜಿಲ್ ಕುಟುಂಬಕ್ಕೆ ತಲಾ 30 ಲಕ್ಷ ರೂ ಆರ್ಥಿಕ ನೆರವು ಘೋಷಣೆ: ಮುಸ್ಲಿಂ ಸಮಿತಿ
ಇತ್ತೀಚೆಗಷ್ಟೇ ಹತ್ಯೆಗೀಡಾದ ಬಿ ಮಸೂದ್ ಮತ್ತು ಮೊಹಮ್ಮದ್ ಫಾಜಿಲ್ ಅವರ ಕುಟುಂಬಕ್ಕೆ ತಲಾ 30 ಲಕ್ಷ ರೂಪಾಯಿ ಪರಿಹಾರವನ್ನು ಅವಳಿ ಜಿಲ್ಲೆಗಳ ಎಲ್ಲಾ ಮುಸ್ಲಿಂ ವೇದಿಕೆಗಳ ಸಂಘಟನೆಯಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮುಸ್ಲಿಂ ಕೇಂದ್ರ ಸಮಿತಿ ಶನಿವಾರ ಘೋಷಿಸಿದೆ.