ರಾಜಕೀಯಮುಸ್ಲಿಮರನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ, ನಮ್ಮ ಜಾತ್ಯತೀತ ಸಿದ್ಧಾಂತ ತೆಗೆದುಹಾಕುವುದಿಲ್ಲ: ಹೆಚ್ ಡಿ ದೇವೇಗೌಡ
ಮುಂಬರುವ ಲೋಕಸಭೆ ಚುನಾವಣೆಗೆ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಬಗ್ಗೆ ಹಲವು ವಿಷಯಗಳ ಬಗ್ಗೆ ಸ್ಪಷ್ಟನೆ ನೀಡಲು ಇಂದು ಬುಧವಾರ ಬೆಂಗಳೂರಿನಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಮತ್ತು ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ನಡೆಸಿದರು.