ರಾಜಕೀಯಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಮಳೆ ನೀರು: ನರೇಂದ್ರ ಮೋದಿ ರೋಡ್ ಶೋ ಮಾಡಲು ಕಾಂಗ್ರೆಸ್ ಆಹ್ವಾನ
ಇತ್ತೀಚಿಗೆ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಶುಕ್ರವಾರ ರಾತ್ರಿ ಮಳೆ ನೀರಿನಿಂದ ತುಂಬಿದ್ದರಿಂದ ವಾಹನ ಸವಾರರು ಪರದಾಡುವಂತಾಯಿತು. ಈ ಕುರಿತ ವಿಡಿಯೋವೊಂದನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿರುವ ಕಾಂಗ್ರೆಸ್, ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ.