ರಾಜ್ಯಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ವೇ: ಮತ್ತೊಂದು ಸರಣಿ ಅಪಘಾತ, ಹಲವರಿಗೆ ಗಾಯ
ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ನಲ್ಲಿ ಭಾನುವಾರ ಸಂಜೆ ಮತ್ತೊಂದು ಸರಣಿ ಅಪಘಾತ ಸಂಭವಿಸಿದೆ. ಮದ್ದೂರು ಬೈಪಾಸ್ ರಸ್ತೆಯ ಕೆ. ಕೋಡಿಹಳ್ಳಿ ಬಳಿ ಕೆಎಸ್ ಆರ್ ಟಿಸಿ ರಾಜಹಂಸ ಬಸ್ ಹಾಗೂ ಕಾರಿನ ನಡುವೆ ಡಿಕ್ಕಿಯಾಗಿ ಸಂಭವಿಸಿದ ಸರಣಿ ಅಪಘಾತದಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಕಾರಿನಲ್ಲಿದ್ದ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.