ರಾಜ್ಯಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ಸೂಚನಾ ಫಲಕ, ಕ್ಯಾಮರಾ ಅಳವಡಿಕೆ ಅಗತ್ಯವಿದೆ: ಎಡಿಜಿಪಿ ಅಲೋಕ್ ಕುಮಾರ್
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಎಡಿಜಿಪಿ (ಸಂಚಾರ ಮತ್ತು ರಸ್ತೆ ಸುರಕ್ಷತೆ) ಅಲೋಕ್ ಕುಮಾರ್ ಅವರು, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್ಎಚ್ಎಐ)ದ ಅಧಿಕಾರಿಗಳು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆಗೆ ಹೆದ್ದಾರಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.