ರಾಜ್ಯನಾಡಗೀತೆಗೆ ಆಕ್ಷೇಪ ಪ್ರಕರಣ; ತೀರ್ಪು ಕಾಯ್ದಿರಿಸಿದ ಹೈಕೋರ್ಟ್
ವಿಧಾನಸಭೆಯಲ್ಲಿ ವಿಸ್ತೃತ ಚರ್ಚೆಯ ಬಳಿಕ ಶಿಕ್ಷಣ ಕಾಯಿದೆ ಅಡಿ ನೋಂದಾಯಿತ ಶಾಲೆಗಳೆಲ್ಲವೂ ಖ್ಯಾತ ಗಾಯಕ, ಸಂಗೀತ ಸಂಯೋಜಕ ದಿವಂಗತ ಮೈಸೂರು ಅನಂತಸ್ವಾಮಿ ಸಂಯೋಜಿಸಿದ್ದ ಧಾಟಿಯಲ್ಲಿ 2 ನಿಮಿಷ 30 ಸೆಕೆಂಡ್ಗಳ ನಾಡಗೀತೆ ಹಾಡುವುದನ್ನು ಕಡ್ಡಾಯಗೊಳಿಸಿ ಆದೇಶಿಸಲಾಗಿದೆ ಎಂದು ರಾಜ್ಯ ಸರ್ಕಾರವು ಹೈಕೋರ್ಟ್ಗೆ ತಿಳಿಸಿದೆ. ಇದನ್ನು ಆಲಿಸಿದ ನ್ಯಾಯಾಲಯವು ಆದೇಶ ಕಾಯ್ದಿರಿಸಿದೆ.