Nagamangala

ನಾಗಮಂಗಲ ಗಲಭೆ: ದುರುಳರು ಯಾವುದೇ ಜಾತಿ, ಧರ್ಮದವರಾಗಿರಲಿ ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ- ಸಿಎಂ ಸಿದ್ದರಾಮಯ್ಯ
ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆಯ ವೇಳೆ ನಡೆದಿರುವ ಕಲ್ಲುತೂರಾಟವು ಸಮಾಜದ ಶಾಂತಿ, ನೆಮ್ಮದಿಗೆ ಧಕ್ಕೆತರುವ ಕಿಡಿಗೇಡಿಗಳ ದುಷ್ಕೃತ್ಯ ಎನ್ನುವುದು ನಿಸ್ಸಂಶಯ. ಇದನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ.

ನಾಗಮಂಗಲದಲ್ಲಿ ನಡೆದಿರುವುದು ಆಕಸ್ಮಿಕ ಕಲ್ಲು ತೂರಾಟ, ಕೋಮು ಗಲಭೆಯಲ್ಲ: ಪರಿಸ್ಥಿತಿ ನಿಯಂತ್ರಣ, 52 ಮಂದಿ ಬಂಧನ- ಪರಮೇಶ್ವರ್
ಈ ಘಟನೆಯನ್ನು ಕೋಮು ಗಲಭೆ ಅಂತ ಹೇಳಲಾಗದು. ಇದನ್ನು ಹೆಚ್ಚು ಬೆಳೆಯಲು ಪೊಲೀಸರು ಬಿಟ್ಟಿಲ್ಲ. ಹೆಚ್ಚು ಪ್ರಚಾರ ನೀಡುವುದೂ ಬೇಡ ಎಂದು ಮನವಿ ಮಾಡಿದರು.

ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ಜಿಹಾದಿ ಮಾನಸಿಕತೆಗೆ ಜಾಗವಿಲ್ಲ: ನಾಗಮಂಗಲ ಘಟನೆಗೆ ಅಶೋಕ್ ಖಂಡನೆ
ಶಾಂತಿಯುತವಾಗಿ ಸಾಗುತ್ತಿದ್ದ ಗಣೇಶ ವಿಸರ್ಜನೆ ಮೆರವಣಿಗೆಗೆ ಅಡ್ಡಿಪಡಿಸುವ ದುರುದ್ದೇಶದಿಂದ ಮುಸ್ಲಿಂ ಮತಾಂಧ ಪುಂಡರು ಪೂರ್ವನಿಯೋಜಿತವಾಗಿ ದಾಂಧಲೆ ಎಬ್ಬಿಸಿ ಸಾರ್ವಜನಿಕರು, ಪೊಲೀಸರ ಮೇಲೆ ಕಲ್ಲು ತೂರಾಟ ಮಾಡುವುದು, ಚಪ್ಪಲಿ ಎಸೆಯುವುದು, ಪೆಟ್ರೋಲ್ ಬಾಂಬ್ ಸ್ಫೋಟಿಸುವುದು.

Mandya: ನಾಗಮಂಗಲದಲ್ಲಿ ಪರಿಸ್ಥಿತಿ ಉದ್ವಿಗ್ನ; ಸೆ.14ರವರೆಗೆ ಸೆಕ್ಷನ್ 144 ಜಾರಿ, ಇಂದು ಶಾಲಾ-ಕಾಲೇಜಿಗೆ ರಜೆ!
ಮಂಡ್ಯದ ನಾಗಮಂಗಲದ ಬದರಿಕೊಪ್ಪಲಿನಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಪಟ್ಟಣದಲ್ಲಿ ಸೆಕ್ಷನ್ 144 ಜಾರಿ ಮಾಡಲಾಗಿದ್ದು ನಾಗಮಂಗಲದಲ್ಲಿ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ನಾಪತ್ತೆಯಾಗಿದ್ದ ಮಾನಸಿಕ ಅಸ್ವಸ್ಥೆ ಶವವಾಗಿ ಪತ್ತೆ; ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಶಂಕೆ
ಕಳೆದ ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ 31 ವರ್ಷದ ಮಾನಸಿಕ ಅಸ್ವಸ್ಥ ಮಹಿಳೆ ಭಾನುವಾರ ಬೆಳಗ್ಗೆ ನಾಗಮಂಗಲ ತಾಲ್ಲೂಕಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ನಾಗಮಂಗಲದ ಸೌಮ್ಯಕೇಶವ ದೇಗುಲದ ಸುತ್ತಲಿನ ಒತ್ತುವರಿ ತೆರವುಗೊಳಿಸಲು ಕರ್ನಾಟಕ ಹೈಕೋರ್ಟ್ ಆದೇಶ
ಅಧಿಕಾರಿಗಳ ನಿಷ್ಕ್ರಿಯತೆಯನ್ನು ಗಂಭೀರವಾಗಿ ಪರಿಗಣಿಸಿದ ಕರ್ನಾಟಕ ಹೈಕೋರ್ಟ್, ನಾಗಮಂಗಲದ ಸೌಮ್ಯಕೇಶವ ದೇವಸ್ಥಾನದ ಸುತ್ತಲಿನ ಅನಧಿಕೃತ ಮತ್ತು ಅಕ್ರಮ ಒತ್ತುವರಿಗೆ ಸಂಬಂಧಿಸಿದಂತೆ ನೀಡಲಾದ ನೋಟಿಸ್‌ಗಳನ್ನು ಅನುಸರಿಸಿ, ಕಾನೂನು ಪ್ರಕಾರ ತೆರವುಗೊಳಿಸುವಂತೆ ಮಂಡ್ಯ ಜಿಲ್ಲಾಧಿಕಾರಿಗೆ ಸೂಚಿಸಿದೆ.

ನಾಗಮಂಗಲ ಬಳಿ ಭೀಕರ ಅಪಘಾತ: ಕೆಎಸ್ ಆರ್ ಟಿಸಿ ಬಸ್ಸಿಗೆ ಕಾರು ಡಿಕ್ಕಿ; ನಾಲ್ವರು ಸ್ಥಳದಲ್ಲೇ ಸಾವು
ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಬಿ.ಜಿ.ನಗರ ಬಳಿಯ ಬೆಳ್ಳೂರು ಕ್ರಾಸ್ ಬಳಿ ಬುಧವಾರ ಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು ನಾಲ್ವರು ಮೃತಪಟ್ಟಿದ್ದಾರೆ.

ಭೀಕರ ಅಪಘಾತ: ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ; ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವು
ಬೆಂಗಳೂರು ಕಡೆಯಿಂದ ಚನ್ನರಾಯಪಟ್ಟಣ ಕಡೆಗೆ ಚಲಿಸುತ್ತಿದ್ದ ಡಸ್ಟ್ ತುಂಬಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ, ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ನಾಗಮಂಗಲ ತಾಲೂಕಿನ ತಿರುಮಲಪುರ ಬಳಿ ನಡೆದಿದೆ.

ಅರಣ್ಯ ಸಿಬ್ಬಂದಿಗೆ ಬೆದರಿಕೆ: ಜೆಡಿಎಸ್ ಶಾಸಕ ಸುರೇಶ್ ಗೌಡ ವಿರುದ್ಧ ಎಫ್‌ಐಆರ್ ದಾಖಲು
ಅರಣ್ಯ ಸಿಬ್ಬಂದಿಗಳನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಜೆಡಿಎಸ್ ಶಾಸಕ ಸುರೇಶ್ ಗೌಡ ಅವರ ವಿರುದ್ಧ ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅರಣ್ಯ ಇಲಾಖೆ ದೂರು ದಾಖಲಿಸಿದೆ.

