nagendra

ವಾಲ್ಮೀಕಿ ನಿಗಮ ಹಗರಣ: Prosecutionಗೆ ರಾಜ್ಯಪಾಲರ ಅನುಮತಿ ಕೋರಿದ CBI; ಸಚಿವ ನಾಗೇಂದ್ರಗೆ ಹೆಚ್ಚಿದ ಸಂಕಷ್ಟ..!
ರಾಜ್ಯಪಾಲರು ಈ ಕುರಿತು ಕಾನೂನು ಮತ್ತು ಸಂವಿಧಾನ ತಜ್ಞರ ಅಭಿಪ್ರಾಯವನ್ನು ಕೇಳಿದ್ದು, ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ನಾಗೇಂದ್ರ ರಾಜೀನಾಮೆಗೆ ಪ್ರತಿಪಕ್ಷಗಳ ಪಟ್ಟು: ಸಾಕ್ಷ್ಯವಿದ್ದರೆ ಸದನದ ಮುಂದಿಡಿ, ಚರ್ಚಿಸೋಣ- ಸಿಎಂ ಡಿ.ಕೆ ಶಿವಕುಮಾರ್
ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ ನಡೆಸುವ ಹಕ್ಕು ಎಲ್ಲರಿಗೂ ಇದೆ. ಸರ್ಕಾರಕ್ಕೂ ಅದರಲ್ಲಿ ಯಾವುದೇ ತಕರಾರಿಲ್ಲ. ಪ್ರತಿಭಟನೆಗೂ ಮುನ್ನ ಸಭಾಪತಿಗೆ ನೋಟಿಸ್ ನೀಡಿ, ನಾಗೇಂದ್ರ ಅವರ ವಿಚಾರವನ್ನು ಸದನದಲ್ಲಿ ಚರ್ಚಿಸಿ, ವಿಷಯವನ್ನು ಜನರ ಮುಂದಿಡುವಂತೆ ಪ್ರತಿಪಕ್ಷಕ್ಕೆ ಮನವಿ ಮಾಡಿದರು.

"ನಾಗೇಂದ್ರ ಅಪರಾಧಿ": ಪ್ರತಿಭಟನೆ ವೇಳೆ ಹೇಳಿಕೆ ನೀಡಿ ಪೇಚಿಗೆ ಸಿಲುಕಿದ ಸಚಿವ ಶಿವಲಿಂಗೇಗೌಡ
ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಕಾಂಗ್ರೆಸ್ ಪ್ರತಿಭಟನೆ ವೇಳೆ, ಅಬಕಾರಿ ಸಚಿವ ಶಿವಲಿಂಗೇಗೌಡ ತಮ್ಮ ಹೇಳಿಕೆಯಿಂದ ಪೇಚಿಗೆ ಸಿಲುಕಿದ ಘಟನೆ ನಡೆಯಿತು.

ಸಚಿವ ನಾಗೇಂದ್ರ ವಿರುದ್ಧ 31 ಪ್ರಕರಣಗಳಿವೆ, 3 ಕೇಸ್ ಗಳಲ್ಲಿ CBI ಚಾರ್ಜ್‌ಶೀಟ್ ಸಲ್ಲಿಸಿದೆ: ಆರ್.ಅಶೋಕ್
ನಾಗೇಂದ್ರ ವಿರುದ್ಧ ಯಾವುದೇ ಪ್ರಕರಣ ಇಲ್ಲ ಎಂದು ಹೇಳುವ ಮೂಲಕ ಉಪಮುಖ್ಯಮಂತ್ರಿ ಸದನವನ್ನು ದಾರಿ ತಪ್ಪಿಸಿದ್ದಾರೆ. ಒಟ್ಟು 31 ಪ್ರಕರಣಗಳ ಪೈಕಿ ಮೂರು ಪ್ರಕರಣಗಳಲ್ಲಿ ಸಿಬಿಐ ನಾಗೇಂದ್ರ ವಿರುದ್ಧ ಆರೋಪಪಟ್ಟಿ ಸಲ್ಲಿಸಿದೆ.

'ಯಾವುದೇ ನ್ಯಾಯಾಲಯ ತಪ್ಪಿತಸ್ಥರೆಂದು ಘೋಷಿಸಿಲ್ಲ': ಸಚಿವ ನಾಗೇಂದ್ರ ಕುರಿತು DCM ಡಾ. ಜಿ. ಪರಮೇಶ್ವರ್ ಸಮರ್ಥನೆ
2024ರ ಮೇ ತಿಂಗಳಲ್ಲಿ ಅಧೀಕ್ಷಕ ಪಿ. ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡ ಬಳಿಕ ಪೊಲೀಸರು ಪ್ರಕರಣ ದಾಖಲಿಸಿದ್ದರು. ನಂತರ ರಾಜ್ಯ ಸರ್ಕಾರ ಪ್ರಕರಣವನ್ನು ಸಿಐಡಿಗೆ ವಹಿಸಿತ್ತು. ಬ್ಯಾಂಕ್ ಹಾಗೂ ಅಕ್ರಮದಲ್ಲಿ ಭಾಗಿಯಾಗಿದ್ದ ಸರ್ಕಾರಿ ಅಧಿಕಾರಿಗಳ ವಿರುದ್ಧವೂ ಪ್ರಕರಣ ದಾಖಲಾಗಿತ್ತು.

ಸಿದ್ದು ಸಂಪುಟದಲ್ಲಿದ್ದಾಗೇಕೆ ರಾಜೀನಾಮೆ ನೀಡಿದ್ದಿರಿ? ನಿರಪರಾಧಿ ಎಂದು ಸಾಬೀತುಪಡಿಸಿ ಮತ್ತೆ ಸಚಿವರಾಗಿ: ನಾಗೇಂದ್ರಗೆ ವಿಜಯೇಂದ್ರ ಸವಾಲು
ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ರೂ.185 ಕೋಟಿ ಹಣಕಾಸು ಅಕ್ರಮ ಪ್ರಕರಣದಲ್ಲಿ ನಾಗೇಂದ್ರ ಆರೋಪಿಯಾಗಿದ್ದಾರೆ. ಈ ಪ್ರಕರಣದಲ್ಲಿ ತಮ್ಮ ನಿರಪರಾಧಿತ್ವವನ್ನು ಸಾಬೀತುಪಡಿಸಿದ ಬಳಿಕ ನಾಗೇಂದ್ರ ಅವರು ಮತ್ತೆ ಸಚಿವರಾಗುವುದಕ್ಕೆ ಬಿಜೆಪಿಗೆ ಯಾವುದೇ ಆಕ್ಷೇಪವಿಲ್ಲ.

ವಾಲ್ಮೀಕಿ ನಿಗಮ ಹಗರಣ; ಸಚಿವ ಸಂಪುಟಕ್ಕೆ ನಾಗೇಂದ್ರ ಮರುಸೇರ್ಪಡೆ; 'ಕೈ' ಪಾಳಯಕ್ಕೆ ಹೊಸ ಸಂಕಷ್ಟ!
ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಬೇಕು ಅಥವಾ ಅವರು ರಾಜೀನಾಮೆ ನೀಡಬೇಕು; ಇಲ್ಲದಿದ್ದರೆ 10 ದಿನಗಳ ಮುಂಗಾರು ಅಧಿವೇಶನದ ಕಲಾಪ ಸುಗಮವಾಗಿ ನಡೆಯಲು ಬಿಡುವುದಿಲ್ಲ ಎಂದು ಪ್ರತಿಪಕ್ಷ ಬಿಜೆಪಿ ಎಚ್ಚರಿಕೆ ನೀಡಿದೆ.

ನಾಗೇಂದ್ರ ರಾಜೀನಾಮೆ ನೀಡುವವರೆಗೆ ವಿಧಾನಸಭೆ ಕಲಾಪಕ್ಕೆ ಅವಕಾಶ ನೀಡಲ್ಲ: ಸರ್ಕಾರಕ್ಕೆ BJP ಖಡಕ್ ಎಚ್ಚರಿಕೆ
ಸಚಿವ ಸ್ಥಾನ ನೀಡದಿದ್ದರೆ ಕಾಂಗ್ರೆಸ್ ಹೈಕಮಾಂಡ್‌ಗೆ ಸಂಬಂಧಿಸಿದ ಮಾಹಿತಿಯನ್ನು ಬಹಿರಂಗಪಡಿಸುವುದಾಗಿ ನಾಗೇಂದ್ರ ಬೆದರಿಕೆ ಹಾಕಿದ್ದರಿಂದಲೇ ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರಿಸಲಾಗಿದೆ ಎಂಬ ವರದಿಗಳು ಬಂದಿವೆ.

'ಇದೇ ಭಯಕ್ಕೆ ನಾಗೇಂದ್ರನಿಗೆ ಪುನಃ ಮಂತ್ರಿಗಿರಿ ಕೊಟ್ಟಿದ್ದಾರೆ': ಜನಾರ್ದನ ರೆಡ್ಡಿ ಸ್ಫೋಟಕ ಹೇಳಿಕೆ!
ವಾಲ್ಮಿಕಿ ಅಭಿವೃದ್ಧಿ ಮಂಡಳಿಯ ಹಗರಣದ ತನಿಖೆ ಇನ್ನೂ ಪೂರ್ಣಗೊಂಡಿಲ್ಲ. ಇಂತಹ ಸಂದರ್ಭದಲ್ಲಿ ಕಳಂಕಿತ ವ್ಯಕ್ತಿಗಳಿಗೆ ಮತ್ತೆ ಸಚಿವ ಸ್ಥಾನ ನೀಡಿರುವುದು ಈ ಸರ್ಕಾರಕ್ಕೆ ಬಿಟ್ಟ ವಿಚಾರ ಎಂದರು.

