ರಾಜ್ಯಶೇ.40 ಕಮಿಷನ್ ಆರೋಪ: ನ್ಯಾ. ನಾಗಮೋಹನ್ ದಾಸ್ ಆಯೋಗಕ್ಕೆ ಮತ್ತೆ 6 ವಾರಗಳ ಕಾಲಾವಕಾಶ ನೀಡಿದ ಹೈಕೋರ್ಟ್
ಕಳೆದ ನಾಲ್ಕು ವರ್ಷದಲ್ಲಿ ಬಿಬಿಎಂಪಿ ಸೇರಿದಂತೆ ವಿವಿಧ ಇಲಾಖೆಗಳ ಗುತ್ತಿಗೆ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ವಿಚಾರಣೆ ನಡೆಸಲು ನೇಮಕಗೊಂಡಿರುವ ನಿವೃತ್ತ ನ್ಯಾಯಮೂರ್ತಿ ಎಚ್ ಎನ್ ನಾಗಮೋಹನ್ ದಾಸ್ ಅವರ ಏಕ ವ್ಯಕ್ತಿ ಆಯೋಗಕ್ಕೆ ವರದಿ ಸಲ್ಲಿಸಲು ಹೈಕೋರ್ಟ್ ಮತ್ತೆ ಆರು ವಾರಗಳ ಗಡುವು ನೀಡಿ ಆದೇಶಿಸಿದೆ.