Nalin Kumar Kateel

ಬೆಳಗಾವಿ ಜೈನ ಮುನಿ ಹತ್ಯೆ; ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗ್ರಹ
ಬೆಳಗಾವಿಯ ಚಿಕ್ಕೋಡಿಯಲ್ಲಿ ಜೈನ ಮುನಿಗಳಾದ ಕಾಮಕುಮಾರನಂದಿ ಮಹಾರಾಜರ ಹತ್ಯೆ ಪ್ರಕರಣದ ಸಮಗ್ರ ತನಿಖೆಗೆ ಕರ್ನಾಟಕ ಬಿಜೆಪಿ ಭಾನುವಾರ ಒತ್ತಾಯಿಸಿದೆ.

ಪಕ್ಷ ವಿರೋಧಿ ಚಟುವಟಿಕೆ, ಮುಜುಗರದ ಹೇಳಿಕೆ: 11 ಮಂದಿಗೆ ಬಿಜೆಪಿಯಿಂದ ನೋಟಿಸ್ ಜಾರಿ!
ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಪಕ್ಷ ವಿರೋಧಿ ಚಟುವಟಿಕೆ ಹಾಗೂ ನಾಯಕರ ವಿರುದ್ಧ ಬಹಿರಂಗ ಹೇಳಿಕೆ ನೀಡಿ ಪಕ್ಷಕ್ಕೆ ಮುಜುಗರ ಉಂಟು ಮಾಡಿದ ಹನ್ನೊಂದು ಮಂದಿಗೆ ಬಿಜೆಪಿ ನೋಟಿಸ್ ಜಾರಿ ಮಾಡಿದೆ. ಇನ್ನು ಪಕ್ಷ ವಿರೋಧಿ ಚಟುವಟಿಕೆಗಳ ಬಗ್ಗೆ ತನಿಖೆ ನಡೆಸಿ, ಸಂಬಂಧಪಟ್ಟವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಪಕ್ಷ ನಿರ್ಧರಿಸಿದೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರಾಜೀನಾಮೆಗೆ ರೇಣುಕಾಚಾರ್ಯ ಆಗ್ರಹ
ವಿಧಾನಸಭೆ ಚುನಾವಣೆಯ ಸೋಲಿನ ನಂತರ ಆಂತರಿಕ ಕಲಹ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಚುನಾವಣೆ ಸೋಲಿನ ನೈತಿಕ ಹೊಣೆ ಹೊತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ರಾಜೀನಾಮೆ ನೀಡಬೇಕು ಎಂದು ಮಾಜಿ...

ಪಕ್ಷದ ಕಾರ್ಯಕರ್ತರಲ್ಲಿ ಭಿನ್ನಾಭಿಪ್ರಾಯಗಳಿಲ್ಲ; ಅದು ಲೋಕಸಭೆ ಚುನಾವಣೆಗೆ ತಯಾರಿ ಅಷ್ಟೇ: ನಳಿನ್ ಕುಮಾರ್ ಕಟೀಲು
ಇತ್ತೀಚಿನ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಸೋಲಿನ ನಂತರ ನಾನು ರಾಜ್ಯಾದ್ಯಂತ ಪ್ರವಾಸ ಮಾಡಿದ್ದು ಬಿಜೆಪಿ ಕಾರ್ಯಕರ್ತರ ಮಧ್ಯೆ ಜಗಳ ಭಿನ್ನಾಭಿಪ್ರಾಯಗಳಿಲ್ಲ, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಗೆಲುವಿಗಾಗಿ ಅವರು ಉತ್ಸುಕತೆಯಿಂದ ಕೆಲಸ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ.

2024 ಲೋಕಸಭಾ ಚುನಾವಣೆ ಮೇಲೆ ಅರುಣ್ ಕುಮಾರ್ ಪುತ್ತಿಲ ಕಣ್ಣು; ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಕಟೀಲ್ ಗೆ ಹೊಸ ಚಿಂತೆ!
ನಳಿನ್ ಕುಮಾರ್ ಕಟೀಲ್ ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುವ ವದಂತಿಗಳ ನಡುವೆಯೇ ಅವರು ಪ್ರತಿನಿಧಿಸುತ್ತಿರುವ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಆಗುತ್ತಿರುವ ರಾಜಕೀಯ ಬೆಳವಣಿಗೆಗಳು ಅವರನ್ನು ಮತ್ತಷ್ಟು ಚಿಂತೆಗೀಡು ಮಾಡಿವೆ.

2024 ಲೋಕಸಭಾ ಚುನಾವಣೆಗೆ ರಾಜ್ಯ ಬಿಜೆಪಿ ಸಿದ್ಧತೆ ಆರಂಭಿಸಿದೆ: ನಳಿನ್ ಕುಮಾರ್ ಕಟೀಲ್
ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಗರಿಷ್ಠ ಸ್ಥಾನ ಗಳಿಸಲು ಬಿಜೆಪಿಯ ರಾಜ್ಯ ಘಟಕ ಸಿದ್ಧತೆ ಆರಂಭಿಸಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಶುಕ್ರವಾರ ಹೇಳಿದರು.

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕಟೀಲ್ ರಾಜಿನಾಮೆ ವಿಚಾರ: ಹೈಕಮಾಂಡ್ ಅಂಗೀಕಾರ ಮಾಡಬೇಕಲ್ವಾ- ಆರ್ ಅಶೋಕ್
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕಟೀಲ್ ರಾಜಿನಾಮೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಹಾಗೂ ಬಿಜೆಪಿ ನಾಯಕ ಆರ್ ಅಶೋಕ್ , 'ಹೈಕಮಾಂಡ್ ಅಂಗೀಕಾರ ಮಾಡಬೇಕಲ್ವಾ' ಎಂದು ಹೇಳಿದ್ದಾರೆ.

ನಳಿನ್ ಕುಮಾರ್ ಕಟೀಲ್ ರಾಜಿನಾಮೆ ನೀಡಿಲ್ಲ: ರಾಜ್ಯ ಬಿಜೆಪಿ ಸ್ಪಷ್ಟನೆ!
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿದ್ದೇನೆ ಎಂದು ಹೇಳಿದ್ದ ನಳೀನ್ ಕುಮಾರ್ ಕಟೀಲ್ ಅವರು ಇದೀಗ ತಾವು ರಾಜಿನಾಮೆ ನೀಡಿಲ್ಲ ಎಂದು ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.

ಚುನಾವಣೆ ಸೋಲಿನ ಬೆನ್ನಲ್ಲೇ ರಾಜಿನಾಮೆ ನೀಡಿದ್ದೆ; ನಳೀನ್ ಕುಮಾರ್ ಕಟೀಲ್ ಸ್ಪಷ್ಟನೆ
2023ರ ವಿಧಾನಸಭೆ ಚುನಾವಣೆ ಸೋಲಿನ ಬೆನ್ನಲ್ಲೇ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿದ್ದೇನೆ ಎಂದು ಬಿಜೆಪಿ ನಾಯಕ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ.

