ರಾಜ್ಯಚುನಾವಣೆ ಹತ್ತಿರಬರುತ್ತಿದ್ದಂತೆಯೇ ನಂದಿಬೆಟ್ಟ ರೋಪ್ ವೇ ನಿರ್ಮಾಣಕ್ಕೆ ಕೂಡಿಬಂತು ಕಾಲ: 15 ದಿನಗಳಲ್ಲಿ ಯೋಜನೆಗೆ ಸಿಎಂ ಚಾಲನೆ
ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರಬರುತ್ತಿದ್ದಂತೆಯೇ ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ರಾಜ್ಯದ ಪ್ರಮುಖ ನೈಸರ್ಗಿಕ ಪ್ರವಾಸಿ ತಾಣವಾದ ನಂದಿಬೆಟ್ಟದಲ್ಲಿ ರೋಪ್ವೇ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದ್ದು, ಇನ್ನೆರಡು ವಾರಗಳಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಯೋಜನೆಗೆ ಚಾಲನೆ ನೀಡಲಿದ್ದಾರೆಂದು ತಿಳಿದುಬಂದಿದೆ.