ರಾಜ್ಯಕರ್ನಾಟಕವನ್ನು 'ಮಾದಕವಸ್ತು ಮುಕ್ತ' ರಾಜ್ಯವನ್ನಾಗಿ ಮಾಡುವ ಗುರಿ: ನೂತನ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್
ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ (ಡಿಜಿ–ಐಜಿಪಿ) ಡಾ. ಅಲೋಕ್ ಮೋಹನ್ ಅವರು ಸೋಮವಾರ ಪ್ರವೀಣ್ ಸೂದ್ ಅವರಿಂದ ಅಧಿಕಾರ ಸ್ವೀಕರಿಸಿದರು. ಡಿಜಿ–ಐಜಿಪಿಯಾಗಿದ್ದ ಪ್ರವೀಣ್ ಸೂದ್ ಅವರನ್ನು ಸೋಮವಾರ ಈ ಹುದ್ದೆಯಿಂದ ಬಿಡುಗಡೆ ಮಾಡಲಾಯಿತು.