ದೇಶಮಹಿಳಾ ಮೀಸಲಾತಿ ಮಸೂದೆ ಸಾಮಾನ್ಯ ಕಾನೂನಲ್ಲ, ನವ ಭಾರತದ ಹೊಸ ಪ್ರಜಾಸತ್ತಾತ್ಮಕ ಬದ್ಧತೆಯ ಘೋಷಣೆ: ಪ್ರಧಾನಿ ಮೋದಿ
ಮಹಿಳೆಯರಿಗೆ ಶೇಕಡಾ 33ರಷ್ಟು ರಾಜಕೀಯ ಪ್ರಾತಿನಿಧ್ಯ ನೀಡುವ ಮಹಿಳಾ ಮೀಸಲಾತಿ ಮಸೂದೆ ರಾಜ್ಯಸಭೆಯಲ್ಲಿ ಕೂಡ ಅಂಗೀಕಾರವಾಗಿದ್ದು, ಈ ಹಿನ್ನೆಲೆಯಲ್ಲಿ ಇಂದು ಶುಕ್ರವಾರ ದೆಹಲಿಯ ದೀನ್ ದಯಾಳ್ ಉಪಾಧ್ಯಾಯ ಮಾರ್ಗದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಅಭಿನಂದನೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು.