Naxals
ನಗರ ನಕ್ಸಲರ ಗ್ಯಾಂಗ್ ನಿಂದ ಕಾಂಗ್ರೆಸ್ ನಡೆಯುತ್ತಿದೆ: ನರೇಂದ್ರ ಮೋದಿ
"ಭಾರತಕ್ಕಾಗಿ ಒಳ್ಳೆಯ ಉದ್ದೇಶವನ್ನು ಹೊಂದಿರದ ಜನರೊಂದಿಗೆ ಕಾಂಗ್ರೆಸ್ ಎಷ್ಟು ನಿಕಟವಾಗಿ ನಿಂತಿದೆ ಎಂಬುದನ್ನು ಎಲ್ಲರೂ ನೋಡಬಹುದು" ಎಂದು ಮೋದಿ ವ್ಯಂಗ್ಯವಾಡಿದ್ದಾರೆ.

ಛತ್ತೀಸ್‌ಗಢ: ಸುಕ್ಮಾದಲ್ಲಿ ನಕ್ಸಲೀಯರಿಂದ IED ಸ್ಫೋಟ: ಇಬ್ಬರು ಸಿಆರ್‌ಪಿಎಫ್ ಯೋಧರು ಹುತಾತ್ಮ
ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯ ಜಾಗರಗುಂದ ಪೊಲೀಸ್ ಠಾಣಾ ವ್ಯಾಪ್ತಿಯ ಸಿಲ್ಗರ್ ಮತ್ತು ಟೇಕುಲಗುಡೆಂ ನಡುವೆ ನಕ್ಸಲೀಯರು ನಡೆಸಿದ IED ಸ್ಫೋಟದಲ್ಲಿ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ (ಸಿಆರ್‌ಪಿಎಫ್) ಇಬ್ಬರು ಯೋಧರು ಭಾನುವಾರ ಹುತಾತ್ಮರಾಗಿದ್ದಾರೆ.

ಜಾರ್ಖಂಡ್'ನಲ್ಲಿ ಎನ್‌ಕೌಂಟರ್: ನಾಲ್ವರು ನಕ್ಸಲರ ಹತ್ಯೆ, ಇಬ್ಬರ ಬಂಧನ
ಜಾರ್ಖಂಡ್‌ನ ಚೈಬಾಸಾದಲ್ಲಿ ಭದ್ರತಾ ಪಡೆಗಳು ಎನ್ಕೌಂಟರ್ ನಡೆಸಿದ್ದು, ಈ ವೇಳೆ ನಾಲ್ವರು ನಕ್ಸಲರನ್ನು ಹತ್ಯೆ ಮಾಡಿ, ಇಬ್ಬರನ್ನು ಬಂಧನಕ್ಕೊಳಪಡಿಸಿದ್ದಾರೆಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಛತ್ತೀಸ್‌ಗಢ: ಎನ್‌ಕೌಂಟರ್‌ನಲ್ಲಿ 8 ನಕ್ಸಲರ ಹತ್ಯೆ, ಓರ್ವ ಭದ್ರತಾ ಪಡೆ ಸಿಬ್ಬಂದಿ ಹುತಾತ್ಮ
ಛತ್ತೀಸಗಢದ ನಾರಾಯಣಪುರ ಜಿಲ್ಲೆಯಲ್ಲಿ ಶನಿವಾರ ನಡೆದ ಎನ್‌ಕೌಂಟರ್‌ನಲ್ಲಿ ಎಂಟು ನಕ್ಸಲರ ಹತ್ಯೆ ಮಾಡಲಾಗಿದೆ. ಘಟನೆಯಲ್ಲಿ ಓರ್ವ ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದು, ಮತ್ತಿಬ್ಬರು ಭದ್ರತಾ ಸಿಬ್ಬಂದಿಗೆ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಛತ್ತೀಸಗಢ: ಭದ್ರತಾ ಪಡೆಗಳ ಎನ್‌ಕೌಂಟರ್‌ಗೆ ಇಬ್ಬರು ನಕ್ಸಲರು ಬಲಿ
ಭದ್ರತಾ ಸಿಬ್ಬಂದಿ ನಕ್ಸಲ್ ವಿರೋಧಿ ಕಾರ್ಯಾಚರಣೆಗೆ ಹೊರಟಿದ್ದಾಗ ಮದ್ದೇಡ್ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯದಲ್ಲಿ ಗುಂಡಿನ ಚಕಮಕಿ ನಡೆದಿದೆ. ಬಳಿಕ ಇಬ್ಬರು ನಕ್ಸಲರ ಮೃತದೇಹಗಳು ಮತ್ತು ಶಸ್ತ್ರಾಸ್ತ್ರಗಳನ್ನು ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರೈತರ ಮನೆಗೆ ಶಂಕಿತ ನಕ್ಸಲರ ಭೇಟಿ: ನಾಲ್ವರ ವಿರುದ್ಧ ಪೊಲೀಸ್ ಎಫ್ಐಆರ್
ರೈತರ ಮನೆಯೊಂದಕ್ಕೆ ಶಂಕಿತ ನಕ್ಸಲರು ಭೇಟಿ ನೀಡಿದ್ದ ಅನುಮಾನದ ಮೇಲೆ ದಕ್ಷಿಣ ಕನ್ನಡ ಪೊಲೀಸರು ನಾಲ್ವರ ವಿರುದ್ಧ ಎಫ್ಐ ಆರ್ ದಾಖಲಿಸಿದ್ದಾರೆ.

ಛತ್ತೀಸ್‌ಗಢ: ಎನ್‌ಕೌಂಟರ್‌ನಲ್ಲಿ ಇಬ್ಬರು ಮಹಿಳೆಯರು ಸೇರಿ ಮೂವರು ನಕ್ಸಲರ ಹತ್ಯೆ!
ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಶನಿವಾರ ಬೆಳಗ್ಗೆ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಮೂವರು ನಕ್ಸಲರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಛತ್ತೀಸ್‌ಗಢ: ಕಬ್ಬಿಣದ ಅದಿರು ಗಣಿಯಲ್ಲಿ ಐಇಡಿ ಸ್ಫೋಟ; ಇಬ್ಬರು ಕಾರ್ಮಿಕರು ಬಲಿ, ಒಬ್ಬರಿಗೆ ಗಾಯ
ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯ ಕಬ್ಬಿಣದ ಅದಿರು ಗಣಿ ಪ್ರದೇಶದಲ್ಲಿ ಶುಕ್ರವಾರ ನಕ್ಸಲೀಯರು ಅಳವಡಿಸಿದ್ದ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟಗೊಂಡ ಪರಿಣಾಮ ಇಬ್ಬರು ಕಾರ್ಮಿಕರು ಸಾವಿಗೀಡಾಗಿದ್ದು, ಇನ್ನೊಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೊಡಗು: ಕೇರಳ ಗಡಿಯಲ್ಲಿ ಪೊಲೀಸ್, ನಕ್ಸಲರ ನಡುವೆ ಗುಂಡಿನ ಚಕಮಕಿ
ಕೊಡಗು ಜಿಲ್ಲೆಯ ಕರ್ನಾಟಕ-ಕೇರಳ ಗಡಿಭಾಗದಲ್ಲಿ ನಕ್ಸಲ್ ಶಿಬಿರದ ಬಳಿ ನಕ್ಸಲೀಯರು ಮತ್ತು ಕೇರಳದ ನಕ್ಸಲ್ ನಿಗ್ರಹ ಪಡೆ ನಡುವೆ ಭಾರೀ ಗುಂಡಿನ ಚಕಮಕಿ ನಡೆದು ಗುಂಡಿನ ಕಾಳಗದಲ್ಲಿ ಓರ್ವ ನಕ್ಸಲ್ ಗಾಯಗೊಂಡಿದ್ದಾನೆ.

